ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯ ಕಾರ್ಯಗಳಲ್ಲಿ ನಿರಂತರ ತೊಡಗಿಸಿಕೊಳ್ಳಬೇಕು ಎಂದು ವೀರಪ್ಪ ನಿಷ್ಠಿ ಕಾಲೇಜಿನ ಪ್ರಾಂಶುಪಾಲ ಡಾ.ಶರಣಬಸಪ್ಪ ಸಾಲಿ ಹೇಳಿದರು.

ಕನ್ನಡಪ್ರಭ ವಾರ್ತೆ ಸುರಪುರ

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯ ಕಾರ್ಯಗಳಲ್ಲಿ ನಿರಂತರ ತೊಡಗಿಸಿಕೊಳ್ಳಬೇಕು ಎಂದು ವೀರಪ್ಪ ನಿಷ್ಠಿ ಕಾಲೇಜಿನ ಪ್ರಾಂಶುಪಾಲ ಡಾ.ಶರಣಬಸಪ್ಪ ಸಾಲಿ ಹೇಳಿದರು.

ನಗರದ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಲಿಂಗೈಕ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರ ಪ್ರಥಮ ಪುಣ್ಯಸ್ಮರಣೋತ್ಸವ ನಿಮಿತ್ತ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ವತಿಯಿಂದ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರದಲ್ಲಿ ಅವರು ಮಾತನನಾಡಿದರು.

ಪರಿಸರ ಸಂರಕ್ಷಣೆ ಎಲ್ಲರ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಸಸಿ ನೆಡುವುದರ ಜೊತೆಗೆ ಅವುಗಳ ಆರೈಕೆ, ಪೋಷಣೆ ಹಾಗೂ ಸಂರಕ್ಷಣೆಗೆ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ಪರಿಸರ ಕಾಳಜಿಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಮುಖಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಎನ್ನೆಸ್ಸೆಸ್ ಸ್ವಯಂಸೇವಕರು ಉತ್ಸಾಹದಿಂದ ಪಾಲ್ಗೊಂಡು ವಿವಿಧ ತಳಿಯ ಸಸಿಗಳನ್ನು ನೆಟ್ಟು ನೀರುಣಿಸಿದರು. ನೆಟ್ಟ ಸಸಿಗಳ ಪೋಷಣೆ ಹಾಗೂ ಸಂರಕ್ಷಣೆ ಮಾಡುವ ಸಂಕಲ್ಪ ಕೈಗೊಂಡು ಪರಿಸರ ಸಂದೇಶ ಸಾರುವ ಮೂಲಕ ಅಪ್ಪಾಜಿಯವರಿಗೆ ಅರ್ಥಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಕಾರ್ಯಕ್ರಮಕ್ಕೆ ಸಸಿಗಳನ್ನು ಒದಗಿಸಿದ ತಾಲೂಕು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಾಲೇಜಿನ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

ವಿವಿಧ ವಿಭಾಗಗಳ ಮುಖ್ಯಸ್ಥರಾದ ಪ್ರೊ. ಶರಣಗೌಡ ಪಾಟೀಲ, ಪ್ರೊ.ಶಿವನಗೌಡ ಪಾಟೀಲ, ಪ್ರೊ.ಸಾಹೇಬಗೌಡ ಪಾಟೀಲ, ಪ್ರೊ.ಪೂಜಾ, ಪ್ರೊ.ಸುನಿಲ್ ಮಿಶ್ರಾ, ಪ್ರೊ.ಸಿದ್ದನಗೌಡ ಪಾಟೀಲ, ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಪ್ರಭಾಕರ ಪಾಟೀಲ ಬೂದುಗುಂಪಿ ಸಹಿತ ಬೋಧಕ, ಬೋಧಕೇತರ ಸಿಬ್ಬಂದಿ, ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಎನ್ನೆಸ್ಸೆಸ್ ಸ್ವಯಂಸೇವಕರು ಭಾಗವಹಿಸಿದರು.