ಸಾರಾಂಶ
ದಾಬಸ್‍ಪೇಟೆ: ಪರಿಸರ ನಮ್ಮೆಲ್ಲರ ಆಸ್ತಿ, ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕೋಣ, ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ತುಮಕೂರು ಸೆಂಟ್ರಲ್ ಕ್ಲಬ್ ರೋಟರಿ ಅಧ್ಯಕ್ಷ ರಾಮಶೇಷಗಿರಿ ರಾವ್ ತಿಳಿಸಿದರು. ಸೋಂಪುರ ಹೋಬಳಿಯ ಹಳೆ ನಿಜಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ತಯಾರಿಸಿದ ಬೀಜದ ಉಂಡೆಗಳನ್ನು ಅರಣ್ಯ ಪ್ರದೇಶದಲ್ಲಿ ಎಸೆಯುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸರೋಜಮ್ಮ ಮಾತನಾಡಿ, ಉತ್ತಮ ಪರಿಸರ ವೃದ್ಧಿಯಾಗಬೇಕಾದರೆ ಮೊದಲು ಪ್ಲಾಸ್ಟಿಕ್ ನಿಷೇಧಕ್ಕೆ ಪಣತೊಡಬೇಕು, ಅರಣ್ಯ ಪ್ರದೇಶದಲ್ಲಿ ಹೆಚ್ಚೆಚ್ಚು ಬೀಜದುಂಡೆಗಳನ್ನು ಎಸೆದು ಮರಗಿಡಗಳನ್ನು ಬೆಳೆಸಬೇಕು. ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಿದಾಗ ಮಾತ್ರ ನಾವು ಉತ್ತಮ ಪರಿಸರ ಕಾಣಬಹುದು ಎಂದರು. ಮುಖ್ಯ ಶಿಕ್ಷಕ ತೋಂಟದಾರ್ಯ ಮಾತನಾಡಿ, ಪ್ಲಾಸ್ಟಿಕ್ ಮನುಕುಲಕ್ಕೆ ಮಾರಕ, ಮನುಷ್ಯರು ಪ್ಲಾಸ್ಟಿಕ್ ಉತ್ಪನ್ನಗಳನ್ನು ಉಪಯೋಗಿಸಬಾರದು. ಪ್ರತಿ ವಾರಕೊಮ್ಮೆ ವಿವಿಧ ಸಂಘ ಸಂಸ್ಥೆಗಳು, ಸ್ಥಳೀಯ ಆಡಳಿತ ಮಂಡಳಿಗಳು ಪ್ರತಿ ಮನೆಗಳಿಗೆ ಭೇಟಿ ನೀಡಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಈ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ರೋಟರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪೋಟೋ 5 :ಸೋಂಪುರ ಹೋಬಳಿ ಹಳೆನಿಜಗಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ತಯಾರಿಸಿದ ಬೀಜದ ಉಂಡೆಗಳನ್ನು ಅರಣ್ಯ ಪ್ರದೇಶದಲ್ಲಿ ಎಸೆಯುವ ಕಾರ್ಯಕ್ರಮಕ್ಕೆ ತುಮಕೂರು ಸೆಂಟ್ರಲ್ ಕ್ಲಬ್ ರೋಟರಿ ಅಧ್ಯಕ್ಷ ರಾಮಶೇಷಗಿರಿ ರಾವ್ ಚಾಲನೆ ನೀಡಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸರೋಜಮ್ಮ, ಮುಖ್ಯ ಶಿಕ್ಷಕ ತೋಂಟದಾರ್ಯ ಇತರರಿದ್ದರು.