ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ನಾಗರಿಕ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಪರಿಸರ ರಕ್ಷಣೆ ಮತ್ತು ಸ್ವಚ್ಛತೆಗೆ ಹೆಚ್ಚಿನ ಜವಾಬ್ದಾರಿ ಹೊರಬೇಕು ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು.ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಗರ, ಪಟ್ಟಣ ಅಥವಾ ಹಳ್ಳಿಗಳ ಸ್ವಚ್ಛತೆ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ ಎಂಬ ಮನೋಭಾವವನ್ನು ಜನರು ತೊಡೆದು ಹಾಕಬೇಕು. ಇದರಲ್ಲಿ ಸರ್ಕಾರದಿಂದ ನಮ್ಮ ಪಾಲು ಇದೆ ಎಂಬ ಅಂಶವನ್ನು ಅರಿತುಕೊಂಡು ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಇದಕ್ಕೂ ಮುನ್ನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಮಾತನಾಡಿ, ಹವಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆ ಇಂದು ದೊಡ್ಡ ಸವಾಲಾಗಿದೆ. ಪರಿಸರ ಮಾಲಿನ್ಯಕ್ಕೆ ಕೈಗಾರಿಕೆ ಮತ್ತು ಕೃಷಿ ಚಟುವಟಿಕೆ ಪಳೆಯುಳಿಕೆ, ಇಂಧನಗಳ ದಹನ, ವಾಹನಗಳು ಹೊರ ಸೂಸುವ ಹೊಗೆ, ತ್ಯಾಜ್ಯ ನಿರ್ವಹಣೆ ಕೊರತೆ ಮತ್ತು ಅರಣ್ಯನಾಶ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದರು.ತಾಪಂ ಇಒ ರಾಮಲಿಂಗಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಪರಿಸರ ಮಾಲಿನ್ಯ ಮತ್ತು ರಕ್ಷಣೆ ಕುರಿತು ಜಗದೀಶ್ ಸಂಪನ್ಮೂಲ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಆಗುತ್ತಿರುವ ದುಷ್ಪರಿಣಾಮ ಹಾಗೂ ಘನ ತ್ಯಾಜ್ಯನಿರ್ವಹಣೆ ಯಲ್ಲಿ ಸಾರ್ವಜನಿಕರ ಪಾತ್ರ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬಿಇಒ ಎಸ್. ಬಿ.ಧನಂಜಯ, ತಾಪಂ ಯೋಜನಾಧಿಕಾರಿ ಸುರೇಶ್, ನಗರಸಭೆ ಪರಿಸರ ಅಭಿಯಂತರೆ ಅರ್ಚನಾ ಆರಾಧ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಕೋಟೆ ಬೀದಿ ನರಸಿಂಹಸ್ವಾಮಿ ದೇವಾಲಯದ ಆವರಣದಿಂದ ಪ್ರಮುಖ ಬೀದಿಗಳ ಮೂಲಕ ವಿದ್ಯಾರ್ಥಿಗಳಿಂದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ , ತಾಲೂಕು ಆಡಳಿತ ಹಾಗೂ ನಗರಸಭೆ ವತಿಯಿಂದ ಪರಿಸರ ರಕ್ಷಣೆ ಕುರಿತು ವಿದ್ಯಾರ್ಥಿಗಳ ಜಾಗೃತಿ ಜಾಥಾಗೆ ತಹಸೀಲ್ದಾರ್ ಚಾಲನೆ ನೀಡಿದರು.ಉದ್ಯಾನವನಕ್ಕೆ ಸ್ಥಳ ಮೀಸಲಿಗೆ ಕ್ರಮ: ಕೆ.ಎಂ.ಉದಯ್ಮದ್ದೂರು:
ನಗರಸಭೆ ವ್ಯಾಪ್ತಿಯ ಎಲ್ಲಾ ಹೊಸ ಬಡಾವಣೆಗಳಲ್ಲಿ ಉದ್ಯಾನವನ ನಿರ್ಮಾಣಕ್ಕೆ ಸ್ಥಳ ಮೀಸಲಿಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು.ಗಿಡ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕರು, ನಗರಸಭೆ ವ್ಯಾಪ್ತಿಯ ಹಳೇ ಬಡಾವಣೆಗಳಲ್ಲಿ ಹಾಲಿ ಇರುವ ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಜೊತೆಗೆ ಹೊಸ ಬಡಾವಣೆಗಳಲ್ಲಿ ಉದ್ಯಾನವನ ನಿರ್ಮಾಣಕ್ಕೆ ಅಗತ್ಯ ಸ್ಥಳವಕಾಶ ಕ್ರಮವಹಿಸುವುದಾಗಿ ಆಶ್ವಾಸನೆ ನೀಡಿದರು. ವೃದ್ಧರು, ಮಕ್ಕಳು, ಮಹಿಳೆಯರು ವಾಯುವಿಹಾರ ನಡೆಸಲು ಹೆದ್ದಾರಿ ಮತ್ತಿತರ ಅಪಾಯಕಾರಿ ಸ್ಥಳಗಳಿಗೆ ಹೋಗಬೇಕಾಗಿದೆ. ಆದರೆ, ಬಡಾವಣೆಗಳಲ್ಲಿ ಉದ್ಯಾನವನ ಸ್ಥಾಪನೆ ಮಾಡುವುದರಿಂದ ಹೆಚ್ಚಿನ ಅನುಕೂಲ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
;Resize=(128,128))
;Resize=(128,128))
;Resize=(128,128))