ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ನ್ಯಾ. ಜೆ.ರಂಗಸ್ವಾಮಿ

| Published : Jun 07 2024, 12:31 AM IST

ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ನ್ಯಾ. ಜೆ.ರಂಗಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಮನುಷ್ಯನ ದುರಾಸೆಗೆ ಪ್ರಕೃತಿಯಲ್ಲಿ ಏರುಪೇರು ಕಾಣಿಸಿಕೊಂಡು ಜಾಗತಿಕ ತಾಪಮಾನಗಳ ವೈಪರೀತ್ಯಗಳಿಂದ ಉಸಿರಾಡಲು ಶುದ್ಧ ಗಾಳಿ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಇದು ಮುಂದುವರೆದರೆ ಮುಂದಿನ ಪೀಳಿಗೆಗೆ ಶಾಪವಾಗಿ ಪರಿಣಮಿಸಲಿದೆ.

ಬಾಗೇಪಲ್ಲಿ: ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಧೀಶ ಜೆ.ರಂಗಸ್ವಾಮಿ ತಿಳಿಸಿದರು. ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿ, ಮನುಷ್ಯನ ದುರಾಸೆಗೆ ಪ್ರಕೃತಿಯಲ್ಲಿ ಏರುಪೇರು ಕಾಣಿಸಿಕೊಂಡು ಜಾಗತಿಕ ತಾಪಮಾನಗಳ ವೈಪರೀತ್ಯಗಳಿಂದ ಉಸಿರಾಡಲು ಶುದ್ಧ ಗಾಳಿ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಇದು ಮುಂದುವರೆದರೆ ಮುಂದಿನ ಪೀಳಿಗೆಗೆ ಶಾಪವಾಗಿ ಪರಿಣಮಿಸಲಿದೆ, ಆದ್ದರಿಂದ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದಲ್ಲದೇ ಮುಂದಿನ ಪೀಳಿಗೆಯವರಿಗೆ ಉತ್ತಮ ಪರಿಸರಕ್ಕಾಗಿ ಮರ ಗಿಡಗಳನ್ನು ಉಳಿಸಿ, ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದರು. ಅರಣ್ಯ ಇಲಾಖೆ ಅಧಿಕಾರಿಗಳಾದ ಚಂದ್ರಶೇಖರರೆಡ್ಡಿ, ಅಣ್ಣಪ್ಪ, ಸರ್ಕಾರಿ ಸಹಾಯ ಅಭಿಯೋಜಕ ಚಿನ್ನಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಎ. ನಂಜುಂಡ, ವಕೀಲ ಅಪ್ಪಸ್ವಾಮಿ, ನಾರಾಯಣ, ಪ್ರಸನ್ನ ಕುಮಾರ್, ನಾಗಭೂಷಣ್, ವೆಂಕಟೇಶ್, ಮಂಜುನಾಥ್, ಬಾಲು ನಾಯಕ್ ಮತ್ತಿತರರು ಇದ್ದರು.