ರಾಮನಗರ: ಜಿಲ್ಲಾ ಕೇಂದ್ರ ರಾಮನಗರವನ್ನು ಹಸಿರು ನಗರವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ವಿಶ್ವ ಪರಿಸರ ದಿನಾಚರಣೆ ದಿನದಂದೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ 5 ಸಾವಿರ ಗಿಡ ನೆಡುವ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿದರು.
ನಗರದ ಅರ್ಕಾವತಿ ಬಡಾವಣೆ ದ್ಯಾವರಸೇಗೌಡನ ದೊಡ್ಡಿ ರಸ್ತೆಯಲ್ಲಿ ಸಾಂಕೇತಿಕವಾಗಿ ಗಿಡ ನೆಟ್ಟು 5 ಸಾವಿರ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ ಕೆ.ಶೇಷಾದ್ರಿ, 2026-27ನೇ ಆಯವ್ಯಯದಲ್ಲಿ ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ 5 ಸಾವಿರ ಗಿಡಗಳನ್ನು ನಗರದಲ್ಲಿ ನೆಟ್ಟು ಪೋಷಣೆ ಮಾಡುವುದಾಗಿ ವಾಗ್ದಾನ ಮಾಡಿದ್ದೆವೊ. ಅದರಂತೆ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಗಿಡ ನೆಟ್ಟು ಚಾಲನೆ ನೀಡಲಾಗಿದೆ ಎಂದು ಹೇಳಿದರು.ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸ ಬಡಾವಣೆಗಳು ಸೇರಿದಂತೆ ಸ್ಥಳಾವಕಾಶ ಲಭ್ಯವಿರುವ ಜಾಗದಲ್ಲಿ ಗಿಡ ನೆಡಲಾಗುವುದು. ನಾಗರಿಕರು ಪರಿಸರ ಸಂರಕ್ಷಣೆಯತ್ತ ಹೆಚ್ಚು ಗಮನ ಹರಿಸಬೇಕು. ಪರಿಸರವನ್ನು ನಾವು ರಕ್ಷಣೆ ಮಾಡಿದರೆ, ನಮ್ಮನ್ನು ಪರಿಸರ ರಕ್ಷಣೆ ಮಾಡುತ್ತದೆ ಎಂದು ಹೇಳಿದರು.
ಪರಿಸರ ಮಾಲಿನ್ಯ ಆತಂಕಕಾರಿ ವಿಷಯ. ಪರಿಸರ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಪರಿಸರ ಕಾಪಾಡುವ ನಿಟ್ಟಿನಲ್ಲಿ ಹಸಿರು ರಾಮನಗರ ಘೋಷಣೆಯನ್ನು ಸಾಕಾರಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಸಾರ್ವಜನಿಕರು ಸಹಕಾರಿ ನೀಡಿ ಕೈಜೋಡಿಸಬೇಕು. ಗಿಡ ಮರಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡಬೇಕು ಎಂದು ಕೆ.ಶೇಷಾದ್ರಿ ತಿಳಿಸಿದರು.ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ, ಸದಸ್ಯರಾದ ದೌಲತ್ ಷರೀಫ್, ಪಾರ್ವತಮ್ಮ, ಪವಿತ್ರ, ಜಯಲಕ್ಷ್ಮಮ್ಮ, ವಿಜಯ ಕುಮಾರಿ, ನಾಗಮ್ಮ, ಮುಖಂಡರಾದ ಅತಾ ಉಲ್ಲಾ, ಆಯುಕ್ತ ಜಯಣ್ಣ, ಪರಿಸರ ವಿಭಾಗ ಎಇಇ ಸುಬ್ರಹ್ಮಣ್ಯ, ಎಇಇ ವಿಶ್ವನಾಥ್, ಕಂದಾಯ ಅಧಿಕಾರಿ ನಾಗರಾಜ್ ಮತ್ತಿತರರು ಭಾಗವಹಿಸಿದ್ದರು.
5ಕೆಆರ್ ಎಂಎನ್ 2.ಜೆಪಿಜಿ
ರಾಮನಗರದ ಅರ್ಕಾವತಿ ಬಡಾವಣೆ ದ್ಯಾವರಸೇಗೌಡನ ದೊಡ್ಡಿ ರಸ್ತೆ ಬದಿಯಲ್ಲಿ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ) ಸಾಂಕೇತಿಕವಾಗಿ ಗಿಡ ನೆಟ್ಟು 5ಸಾವಿರ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು.
----------------------