ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಲಿ: ಚಂದ್ರಶೇಖರ

| Published : Sep 28 2024, 01:22 AM IST

ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಲಿ: ಚಂದ್ರಶೇಖರ
Share this Article
  • FB
  • TW
  • Linkdin
  • Email

ಸಾರಾಂಶ

Environmental protection should be everyone's duty: Chandrasekhara

-ಹನುಮಾನನಗರ ಕ್ಯಾಂಪಿನಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

-----

ಕನ್ನಡಪ್ರಭ ವಾರ್ತೆ ಸಿಂಧನೂರು

ಪರಿಸರ ರಕ್ಷಣೆ, ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು ಅಂದಾಗ ಮಾತ್ರ ಮುಂದಿನ ಪೀಳಿಗೆಗೆ ಯೋಗ್ಯ ಪರಿಸರ ಉಳಿಯಲು ಸಾಧ್ಯ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಹೇಳಿದರು.

ಅವರು ತಾಲೂಕಿನ ಹನುಮಾನನಗರ ಕ್ಯಾಂಪಿನ ಸರ್ಕಾರಿ ಶಾಲೆಯ ಆವರಣದಲ್ಲಿ ಸಸಿ ನೆಟ್ಟು ಪರಿಸರ ಜಾಗೃತಿ ಹಾಗೂ ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ಭೂಮಿಯ ಮೇಲೆ ನಡೆಸುತ್ತಿರುವ ದಬ್ಬಾಳಿಕೆಗೆ ಕೊನೆ ಇಲ್ಲದಂತಾಗಿದೆ. ಇದರ ಪರಿಣಾಮ ಜಗತ್ತಿನ ಕೆಲ ಪ್ರಮುಖ ನಗರಗಳಲ್ಲಿ ನೀರು ಸಿಗದಂತಾಗಿದೆ. ಇದು ಮಾನವನ ಅಂತ್ಯಕ್ಕೆ ಮುನ್ನುಡಿ ಬರೆದಂತಾಗಿದೆ. ಪರಿಸರ ಎಂದರೆ ಕೇವಲ ಗಿಡ ನೆಡುವುದಷ್ಟೆ ಅಲ್ಲ, ಬದಲಾಗಿ ಪ್ರಕೃತಿದತ್ತವಾದ ಜನ ಸಂಪನ್ಮೂಲವನ್ನು ರಕ್ಷಣೆ ಮಾಡುವುದಾಗಿದೆ ಎಂದರು.

ತಾಪಂ ಅಧಿಕಾರಿಗಳು, ಗ್ರಾಪಂ ಸಿಬ್ಬಂದಿ ವರ್ಗದವರು ಶ್ರಮದಾನ ಮಾಡಿದರು. ಸಹಾಯಕ ನಿರ್ದೇಶಕ ಅಮರಗುಂಡಪ್ಪ, ಸ್ವಚ್ಛ ಮಿಷನ್ ಸಮಲೋಚಕ ಅನಿಲ್, ಐ.ಇ.ಸಿ.ಸಂಯೋಜಕ ಥಾಮಸ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗೇಂದ್ರ, ಗ್ರಾಪಂ ಸದಸ್ಯೆ ಉಷಾರಾಣಿ, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

----------

ಫೋಟೊ:27ಕೆಪಿಎಸ್ಎನ್ಡಿ1: ಸಿಂಧನೂರು ತಾಲ್ಲೂಕಿನ ಹನುಮಾನ್ ನಗರಕ್ಯಾಂಪಿನ ಸರ್ಕಾರಿ ಶಾಲೆಯ ಆವರಣದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು.