ಸಾರಾಂಶ
ಗಲೀಜು ನೀರಿನಿಂದ ಅಲ್ಲಿನ ಪ್ರಾಣಿ ಸಂಕುಲಕ್ಕೆ ಅಪಾಯವಾಗುವುದು ಕಟ್ಟಿಟ್ಟ ಬುತ್ತಿಯಾಗಿದೆ. ಶೌಚಗೃಹದ ನೀರನ್ನು ಸಹ ಇದೇ ಹಳ್ಳಕ್ಕೆ ಬಿಡುತ್ತಿರುವುದರಿಂದ ಕಾಡು ಪ್ರಾಣಿಗಳಿಗೆ ಇದು ಮಾರಕವಾಗಿದೆ. ಈ ವಿಷಯ ಗೊತ್ತಿದ್ದರೂ ಸಹ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೌನ ವಹಿಸಿರುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಪರಿಸರವಾದಿಗಳು ಆರೋಪ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಹನೂರು
ಜನ ತಾವು ಉಪಯೋಗಿಸಿದ ಗಲೀಜು ನೀರು ಹಳ್ಳಕ್ಕೆ ಬಿಡುತ್ತಿರುವುದರಿಂದ ಪ್ರಾಣಿ- ಪಕ್ಷಿಗಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಪರಿಸರ ಪ್ರೇಮಿಗಳು ಆರೋಪ ಮಾಡಿದ್ದಾರೆ.ತಾಲೂಕಿನ ಯಾತ್ರಾಸ್ಥಳವಾದ ತಾಳು ಬೆಟ್ಟದಲ್ಲಿ ವಾಸ ಮಾಡುತ್ತಿರುವ ಸ್ಥಳೀಯ ನಿವಾಸಿಗಳು ತಾವು ಬಳಸಿದ ಗಲೀಜು ನೀರನ್ನು ನೈಸರ್ಗಿಕವಾಗಿ ಹರಿಯುವ ಹಳ್ಳಕ್ಕೆ ಬಿಡುತ್ತಿದ್ದಾರೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಪರಿಸರವಾದಿಗಳು ಆಗ್ರಹ ಮಾಡಿದ್ದಾರೆ.
ಗಲೀಜು ನೀರಿನಿಂದ ಅಲ್ಲಿನ ಪ್ರಾಣಿ ಸಂಕುಲಕ್ಕೆ ಅಪಾಯವಾಗುವುದು ಕಟ್ಟಿಟ್ಟ ಬುತ್ತಿಯಾಗಿದೆ. ಶೌಚಗೃಹದ ನೀರನ್ನು ಸಹ ಇದೇ ಹಳ್ಳಕ್ಕೆ ಬಿಡುತ್ತಿರುವುದರಿಂದ ಕಾಡು ಪ್ರಾಣಿಗಳಿಗೆ ಇದು ಮಾರಕವಾಗಿದೆ. ಈ ವಿಷಯ ಗೊತ್ತಿದ್ದರೂ ಸಹ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೌನ ವಹಿಸಿರುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಪರಿಸರವಾದಿಗಳು ಆರೋಪ ಮಾಡಿದ್ದಾರೆ.ಕಾಡು ಪ್ರಾಣಿಗಳಿಗೆ ಕಂಟಕ: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ತಾಳು ಬೆಟ್ಟದ ಸಮೀಪದಲ್ಲಿ ಮಳೆಗಾಲದಲ್ಲಿ ಹರಿಯುವ ಶುದ್ಧ ಗಂಗೆಗೆ ಮಲೀನ ನೀರು ಸೇರ್ಪಡೆಯಾಗುತ್ತಿದ್ದು, ಕಾಡು ಪ್ರಾಣಿಗಳ ಮೇಲೆ ಗದಾಪ್ರಹಾರ ಮಾಡಿದಂತಾಗಿದೆ. ಈ ಭಾಗದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ದೈತ್ಯಾಕಾರದ ಆನೆಗಳು, ಜಿಂಕೆಗಳು, ಕೋತಿಗಳು ಹಾಗೂ ಕಾಡೆಮ್ಮೆಗಳು ಸೇರಿದಂತೆ ಇನ್ನಿತರ ಪ್ರಾಣಿ ಪಕ್ಷಿಗಳಿದ್ದು, ಇವುಗಳ ಜೀವಕ್ಕೆ ಕುತ್ತು ತರುವಂತಹ ಕೆಲಸ ಆಗುತ್ತಿದೆ. ಹಾಗಾಗಿ ಮುಂದಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪರಿಸರವಾದಿಗಳು ಒತ್ತಾಯ ಮಾಡಿದ್ದಾರೆ.
;Resize=(128,128))
;Resize=(128,128))