ಸಾರಾಂಶ
ಚನ್ನಪಟ್ಟಣ: ಜಾಗತಿಕ ಮಟ್ಟದಲ್ಲಿ ಇಂದು ನಾವು ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದೇವೆ. ಆದರೆ, ಪರಿಸರ ವಿರೋಧಿ ನೆಲಗಟ್ಟಿನಲ್ಲಿ ಅಭಿವೃದ್ಧಿ ಕಾಣುತ್ತಿರುವುದು ಉತ್ತಮ ಬೆಳವಣಿಗೆ ಅಲ್ಲ ಎಂದು ಬಾಂಗ್ಲಾದೇಶದ ಡಾಕಾ ವಿಶ್ವವಿದ್ಯಾಲಯದ ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಮಹಮ್ಮದ್ ಕಮಾಲುದ್ದೀನ್ ಹೇಳಿದರು.
ನಗರದ ಶತಮಾನೋತ್ಸವ ಭವನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಮ್ಮಿಕೊಂಡಿದ್ದ ಬಹುಶಾಸ್ತ್ರಿಯ ಅಂತಾರಾಷ್ಟ್ರೀಯ ಸಮ್ಮೇಳನ, ಸುಸ್ಥಿತ ಭವಿಷ್ಯದ ಕಡೆಗೆ ಶಿಕ್ಷಣದ ಪಾತ್ರ ಕುರಿತ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಪರಿಸರಕ್ಕೆ ವಿರುದ್ಧವಾದ ನೆಲಗಟ್ಟಿನಲ್ಲಿ ಸಾಗುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ಪರಿಸರ ಹಾಗೂ ಅರಣ್ಯವನ್ನು ನಾಶ ಮಾಡುತ್ತಿರುವುದು ಆಶಾದಾಯಕ ಬೆಳವಣಿಗೆಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಪರಿಸರ ಸಂರಕ್ಷಣೆ ಮತ್ತು ಅದರ ನಿರ್ವಹಣೆಯನ್ನು ಸರಿಯಾದ ಕ್ರಮದಲ್ಲಿ ಮಾಡದಿದ್ದರೆ ಮುಂದೆ ನಾವು ಅದಕ್ಕೆ ತಕ್ಕದಾದ ಬೆಲೆ ತೆರಬೇಕಾಗುತ್ತದೆ. ಈ ನಿಟ್ಟಿನಲ್ಲಿ ನಾವು ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಪರಿಸರವನ್ನು ಸಂರಕ್ಷಿಸುವ ಕೆಲಸ ಮಾಡಬೇಕು. ನಾವು ಪರಿಸರನ್ನು ರಕ್ಷಿಸಿದರೆ, ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂಬುದನ್ನು ಅರಿಯಬೇಕು. ಈ ಕುರಿತು ಯುವ ಪೀಳಿಗೆ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.
ಮನೋವಿಜ್ಞಾನದ ಪಾತ್ರ ಬಹುಮುಖ್ಯ: ಅಭಿವೃದ್ಧಿಯಲ್ಲಿ ಮನೋವಿಜ್ಞಾನದ ಪಾತ್ರ ಬಹುಮುಖ್ಯವಾದದ್ದು. ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿ ಪೂರಕವಾಗಿರಬೇಕು. ಸುಸ್ಥಿರ ಅಭಿವೃದ್ಧಿ, ಸಾಮಾಜಿಕ ಬೆಳವಣಿಗೆಯಲ್ಲಿ ಮನೋವಿಜ್ಞಾನ ಪರಿಣಾಮಕಾರಿ ಪ್ರಭಾವ ಬೀರುತ್ತಿದೆ. ಸಾಮಾಜಿಕ ಬೆಳವಣಿಗೆಯಲ್ಲಿ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಣೆ ಮಾಡುತ್ತಿದೆ. ಮಾನವ ಸಂಪನ್ಮೂಲ, ಮಾನವ ನಿರ್ವಹಣೆ ಹಾಗೂ ಮಾನವ ಅಭಿವೃದ್ಧಿ ಹಾಗೂ ಮಾನಸಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮನೋವಿಜ್ಞಾನದ ಪಾತ್ರ ಬಹುಮುಖ್ಯವಾಗಿದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ವಿ.ವೆಂಕಟೇಶ ವಹಿಸಿದ್ದರು. ಐಕ್ಯೂಸಿಯ ಸಂಯೋಜಕ ಡಾ. ಮುಜಾಯಿದ್ ಖಾನ್, ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದೀಪ್ತಿ, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶ್ರೀಕಾಂತ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ನಂಜುಂಡ, ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿ.ಶಿವಪ್ರಸಾದ್, ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಹರೀಶ್ ಕುಮಾರ್, ಸಸ್ಯಶಾಸ್ತ್ರ ವಿಭಾಗದ ಡಾ. ಉಷಾಮಾಲಿನಿ ಮುಂತಾದವರು ಉಪಸ್ಥಿತರಿದ್ದರು.ಪೊಟೋ೧ಸಿಪಿಟಿ೨:
ಚನ್ನಪಟ್ಟಣದ ಶತಮಾನೋತ್ಸವ ಭವನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು.