ಸಾರಾಂಶ
ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಿಂದ ಡಿ ಕ್ರಾಸ್ ವರೆಗೆ ಜಾಥಾ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಮೂರ್ಛೆ ರೋಗದ ಬಗ್ಗೆ ಇರುವ ಆತಂಕ ಹಾಗೂ ತಪ್ಪು ಕಲ್ಪನೆಯನ್ನು ಹೋಗಲಾಡಿಸುವಂತೆ ಅರಿವು ಮೂಡಿಸಲಾಯಿತು.
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಇಂಡೋ ಗ್ಲೋಬಲ್ ನರ್ಸಿಂಗ್ ಕಾಲೇಜು ಮತ್ತು ಹೆಸರಘಟ್ಟದ ಎಸ್‌ವಿ ಇನ್ಸ್ಟಿಟ್ಯೂಷನ್ ಆಫ್ ನರ್ಸಿಂಗ್ ಸಹಯೋಗದಲ್ಲಿ ಸಹಯೋಗದಲ್ಲಿ ಶನಿವಾರ ವಿಶ್ವ ಅಪಸ್ಮಾರ(ಮೂರ್ಛೆ ರೋಗ) ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಿಂದ ಡಿ ಕ್ರಾಸ್ ವರೆಗೆ ಜಾಥಾ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಮೂರ್ಛೆ ರೋಗದ ಬಗ್ಗೆ ಇರುವ ಆತಂಕ ಹಾಗೂ ತಪ್ಪು ಕಲ್ಪನೆಯನ್ನು ಹೋಗಲಾಡಿಸುವಂತೆ ಅರಿವು ಮೂಡಿಸಲಾಯಿತು. ಜಾಥಾಗೆ ಚಾಲನೆ ನೀಡಿದ ಆಸ್ಪತ್ರೆಯ ಮೂಳೆ ರೋಗ ತಜ್ಞ ಡಾ.ಮಂಜುನಾಥ್ ಮಾತನಾಡಿ, ಮೂರ್ಛೆರೋಗ ಹೊಂದಿರುವ ವ್ಯಕ್ತಿಯು ಸಾಮಾನ್ಯರಂತೆ ಜೀವನ ನಡೆಸಲು ನಮ್ಮ ನಿಮ್ಮೆಲ್ಲರ ಸಹಾಯ ಬಹು ಮುಖ್ಯ ಎಂಬ ಸಾಮಾನ್ಯ ಪ್ರಜ್ಞೆಯನ್ನು ಪ್ರತಿಯೊಬ್ಬರೂ ಹೊಂದುವುದು ಅಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಕುಷ್ಟರೋಗ ನಿರ್ಮೂಲನ ಅಧಿಕಾರಿ ಡಾ.ನಾಗರಾಜ್, ಮೂರ್ಛೆರೋಗದ ಬಗ್ಗೆ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ, ಮಾಹಿತಿ ನೀಡಿದರು.ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. ಆಸ್ಪತ್ರೆಯ ಶುಶ್ರೂಷಾ ಅಧೀಕ್ಷಕಿ ಶೈಲಜಾ, ಆಡಿಯೋಲಜಿಸ್ಟ್ ದಿನೇಶ್, ಕಚೇರಿ ಅಧೀಕ್ಷಕ ನಾರಾಯಣ, ಕಭಿ ತಂಡ ಮತ್ತು ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.