ಸಾರಾಂಶ
ಉಳುವವನೇ ಭೂ ಒಡೆಯ ಕಾಯ್ದೆ ಜಾರಿಗೊಳಿಸುವ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದ ಹೆಗ್ಗಳಿಕೆ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಧಾರವಾಡ ಸಿ.ಎಸ್.ಐ ವಾಣಿಜ್ಯ ಮಹಾವಿದ್ಯಾಲಯದ ಉಪನ್ಯಾಸಕ ಡಾ.ನೀಲಕಂಠ ಪೂಜಾರ ಹೇಳಿದರು.
ಕನ್ನಡಪ್ರಭ ವಾರ್ತೆ ರಾಯಬಾಗ
ಉಳುವವನೇ ಭೂ ಒಡೆಯ ಕಾಯ್ದೆ ಜಾರಿಗೊಳಿಸುವ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದ ಹೆಗ್ಗಳಿಕೆ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಧಾರವಾಡ ಸಿ.ಎಸ್.ಐ ವಾಣಿಜ್ಯ ಮಹಾವಿದ್ಯಾಲಯದ ಉಪನ್ಯಾಸಕ ಡಾ.ನೀಲಕಂಠ ಪೂಜಾರ ಹೇಳಿದರು.ಮಂಗಳವಾರ ಪಟ್ಟಣದ ಡಾ.ಬಾಬು ಜಗಜೀವನರಾಂ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾಮಾಜಿಕ ಕ್ರಾಂತಿಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅರಸು ಅವರು ಶ್ರಮಿಕರ, ಶೋಷಿತರ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ತಮ್ಮ ಆಡಳಿತಾಧಿಕಾರ ಸಮಯದಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆ ಜಾರಿಗೆ ತಂದು ಸಾಮಾಜಿಕ ಸಮಾನತೆಯ ಹರಿಕಾರ, ಅಭಿವೃದ್ಧಿ ಹರಿಕಾರ ಎಂದು ಖ್ಯಾತರಾಗಿದ್ದಾರೆ. ಅರಸು ಅವರ ಯುಗವನ್ನು ಸುವರ್ಣ ಯುಗವೆಂದು ಕರೆಯುತ್ತಾರೆ ಎಂದರು.
ತಹಶೀಲ್ದಾರ್ ಎಸ್.ಆರ್. ಮುಂಜೆ ಅಧ್ಯಕ್ಷತೆ ವಹಿಸಿದ್ದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅರುಣ ಮಾಚಕನೂರ, ಸಿಡಿಪಿಒ ಭಾರತಿ ಕಾಂಬಳೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತೀರ್ಣಾಧಿಕಾರಿ ಎಸ್.ಬಿ. ಮಲಾಜ, ಡಾ.ಸಿ.ಎಸ್. ಹೀರೆಮಠ, ಎಸ್.ಎಸ್. ಪಾಟೀಲ, ಎ.ಬಿ. ಕದಂ, ಸಿದ್ದು ಪೂಜಾರಿ, ಸದಾನಂದ ಹಳಿಂಗಳಿ, ಅಪ್ಪಾಜಿ ಪೂಜಾರಿ, ಏಕನಾಥ ಮಾಚಕನೂರ, ರವಿ ತಳವಾರ, ಅನೀಲ ಬೋಮ್ಮನವರ, ಗೋಪಾಲ ಕೋಚೆರಿ ಸೇರಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಲ್ಪನಾ ಕಾಂಬಳೆ ಸ್ವಾಗತಿಸಿದರು, ಶಿಕ್ಷಕ ಬಿ.ಎಲ್.ಘಂಟಿ ನಿರೂಪಿಸಿದರು.2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗ ವಸತಿ ನಿಲಯದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.