ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ: ನ್ಯಾ. ಮಹ್ಮದ್ ಶಾಯಿಜ್ ಚೌತಾಯಿ

| Published : Jun 16 2025, 07:25 AM IST

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ: ನ್ಯಾ. ಮಹ್ಮದ್ ಶಾಯಿಜ್ ಚೌತಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ.

ಕನ್ನಡಪ್ರಭ ವಾರ್ತೆ ಸಂಡೂರು

ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ಸಿವಿಲ್ ನ್ಯಾಯಾಧೀಶ ಮಹ್ಮದ್ ಶಾಯಿಜ್ ಚೌತಾಯಿ ತಿಳಿಸಿದರು.

ಪಟ್ಟಣದ ಎಪಿಎಂಸಿ ಬಳಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ, ತಾಪಂ, ಕಾರ್ಮಿಕ, ಶಿಕ್ಷಣ, ಪೊಲೀಸ್ ಇಲಾಖೆಗಳು, ರೀಚ್ ಸಂಸ್ಥೆ ಹಾಗೂ ಪುರಸಭೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

೧೪ ವರ್ಷದ ಒಳಗಿನ ಪ್ರತಿ ಮಗುವಿಗೂ ಕಡ್ಡಾವಾಗಿ ಶಿಕ್ಷಣ ಪಡೆಯುವ ಹಕ್ಕನ್ನು ಸಂವಿಧಾನ ನೀಡಿದೆ. ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳು ಶಿಕ್ಷಣ ಸೇರಿದಂತೆ ಹಲವು ಹಕ್ಕುಗಳಿಂದ ವಂಚಿತರಾಗಲಿದ್ದಾರೆ. ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆಗಾಗಿ ಪೋಷಕರು ಹಾಗೂ ಪ್ರಜ್ಞಾವಂತ ನಾಗರಿಕರು ಮುಂದಾಗಬೇಕು ಎಂದರು.

ಹಿರಿಯ ವಕೀಲ ಎಂ. ಅಂಜಿನಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಮಹತ್ವ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು.

ಕಾರ್ಮಿಕ ನಿರೀಕ್ಷಕ ಮಂಜುನಾಥ ತೊಂಡಿಹಾಳ ಹಾಗೂ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಜಿ. ಅನಿಲ್‌ಕುಮಾರ್ ಮಾತನಾಡಿದರು. ಕೊನೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಅರಳಿ ಮಲ್ಲಪ್ಪ, ಉಪಾಧ್ಯಕ್ಷ ಕೆ.ಆರ್. ದಾದಾಪೀರ್, ಕಾರ್ಯದರ್ಶಿ ಎಚ್. ಕುಮಾರಸ್ವಾಮಿ, ಕಾನೂನು ಸೇವಾ ಸಮಿತಿ ಸದಸ್ಯ ಮಂಜುನಾಥಗೌಡ, ವಕೀಲರಾದ ಉಮ್ಮರ್ ಫಾರುಕ್, ಬಿ.ಎಸ್. ಮಂಜುನಾಥ, ಡಿ. ನಾಗರಾಜ, ಉಜ್ಜಿನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ, ತಾಪಂ ಇಒ ಮಡಗಿನ ಬಸಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶ್, ಪುರಸಭೆ ಮುಖ್ಯಾಧಿಕಾರಿ ಕೆ. ಜಯಣ್ಣ, ಪ್ರೌಢ ಶಾಲೆಯ ಮುಖ್ಯಶಿಕ್ಷಕ ಮೆಹಬೂಬ್ ಬಾಷ, ರೀಚ್ ಸಂಸ್ಥೆಯ ಸಂಯೋಜಕ ಡಾ. ಯರ‍್ರಿಸ್ವಾಮಿ ಎಚ್., ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.