ಆತ್ಮಹತ್ಯೆಗೆ ಬಂದವ ಜನರ ಕಂಡು ಪರಾರಿ!

| Published : Dec 20 2023, 01:15 AM IST

ಸಾರಾಂಶ

ರಬಕವಿ ಬನಹಟ್ಟಿಯ ರುದ್ರಭೂಮಿಯಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯೊಬ್ಬ ಜನರನ್ನು ಕಂಡು ಸ್ಥಳದಲ್ಲಿಯೇ ಬೈಕ್ ಬಿಟ್ಟು ಪರಾರಿಯಾದ ಘಟನೆ ಮಂಗಳವಾರ ನಡೆದಿದೆ.

ರಬಕವಿ-ಬನಹಟ್ಟಿ: ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯೊಬ್ಬ ಜನರನ್ನು ಕಂಡು ಸ್ಥಳದಲ್ಲಿಯೇ ಬೈಕ್ ಬಿಟ್ಟು ಪರಾರಿಯಾದ ಘಟನೆ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಮಂಗಳವಾರ ನಡೆದಿದೆ. ಬನಹಟ್ಟಿಯ ಸೋಮವಾರ ಪೇಟೆ ಸಮಸ್ತ ದೈವ ಮಂಡಳಿಯ ಹಿಂದೂ ರುದ್ರಭೂಮಿಯಲ್ಲಿ ಮಂಗಳವಾರ ಮಧ್ಯಾಹ್ನ ೧೨ ಗಂಟೆಗೆ ಬೈಕ್ ಸವಾರ ವಿಶ್ರಾಂತಿ ಜಾಗೆಯಲ್ಲಿದ್ದ ಕಬ್ಬಿಣದ ಸಲಾಕೆಗೆ ಹಗ್ಗ ಬಿಗಿದು ಆತ್ಮಹತ್ಯೆಗೆ ಮುಂದಾಗಿದ್ದ. ಇದನ್ನು ಗಮನಿಸಿದ ಕೆಲವರು ಆತ ಇರುವ ಸ್ಥಳಕ್ಕೆ ಧಾವಿಸುತ್ತಿದ್ದಂತೆ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೈಕ್ ವಶಕ್ಕೆ ಪಡೆದರು. ಈ ಬೈಕ್ ಬನಹಟ್ಟಿಯ ಗಣೇಶ ಲಾಳಿ ಎಂಬುವರಿಗೆ ಸೇರಿದೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ವ್ಯಕ್ತಿ ಯಾರು ಎಂಬುದು ತಿಳಿದು ಬಂದಿಲ್ಲ. ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ.