ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಗುಡ್‌ಲಕ್‌..!

| Published : Mar 25 2024, 12:52 AM IST / Updated: Mar 25 2024, 08:49 AM IST

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಗುಡ್‌ಲಕ್‌..!
Share this Article
  • FB
  • TW
  • Linkdin
  • Email

ಸಾರಾಂಶ

ಸೋಮವಾರ (ಮಾ.25)ದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲೆಯ 477 ಪ್ರೌಢ ಶಾಲೆಗಳಲ್ಲಿ 21,102 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈ ಪೈಕಿ 10,834 ಬಾಲಕರು ಹಾಗೂ 10,268 ಬಾಲಕಿಯರು ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಸೋಮವಾರ (ಮಾ.25)ದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲೆಯ 477 ಪ್ರೌಢ ಶಾಲೆಗಳಲ್ಲಿ 21,102 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈ ಪೈಕಿ 10,834 ಬಾಲಕರು ಹಾಗೂ 10,268 ಬಾಲಕಿಯರು ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.

ಜಿಲ್ಲಾದ್ಯಂತ ಒಟ್ಟು 62 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮುಖ್ಯ ಅಧೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರು, ಸಿಟ್ಟಿಂಗ್ ಸ್ಕ್ವಾಡ್, ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನೆ ಪತ್ರಿಕೆಯನ್ನು ಸಂರಕ್ಷಿಸಿಡಲು ಪ್ರಶ್ನೆಪತ್ರಿಕಾ ಪಾಲಕರನ್ನು ನೇಮಕ ಮಾಡಲಾಗಿದೆ. ಜೊತೆಗೆ ಸಿಸಿ ಟಿವಿ ಕ್ಯಾಮೆರಾಗಳನ್ನೂ ಅಳವಡಿಸಲಾಗಿದೆ.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬಹಳ ಕಟ್ಟುನಿಟ್ಟಾಗಿ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 62 ಪರೀಕ್ಷಾ ಕೇಂದ್ರಗಳಿಗೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಇದರಿಂದಾಗಿ ಯಾವ ಕೇಂದ್ರದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದನ್ನು ಕಂಟ್ರೋಲ್ ರೂಂನಿಂದಲೇ ವೀಕ್ಷಿಸುವಂತಹ ವ್ಯವಸ್ಥೆ ಮಾಡಲಾಗಿದೆ.

ನಕಲು ತಡೆಗೆ ಸರ್ವಕ್ರಮ:

ಪರೀಕ್ಷಾ ಸಿಬ್ಬಂದಿ ಮೊಬೈಲ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿರುವ ಇಲಾಖೆ, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಮಾತ್ರ ಇಲಾಖಾ ಸಂಪರ್ಕಕ್ಕಾಗಿ ಕೇವಲ ಕೀಪ್ಯಾಡ್ ಮೊಬೈಲ್ ಬಳಸಲು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ನಕಲು ತಡೆಯಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಶೌಚಾಲಯ ವ್ಯವಸ್ಥೆ, ಪ್ರತಿ ಕೊಠಡಿಗೆ ಗಾಳಿ ಬೆಳಕಿನ ವ್ಯವಸ್ಥೆ, ಎಲ್ಲಾ ಮಕ್ಕಳಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಪಾವಿತ್ರ್ಯತೆ ಕಾಪಾಡಲು ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರು (ಆಡಳಿತ) ಮತ್ತು ಡಯಟ್ ಪ್ರಾಂಶುಪಾಲರ ನೇತೃತ್ವದಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಹಂತದಲ್ಲಿ ವಿಚಕ್ಷಣಾದಳ ರಚಿಸಿ ಪರೀಕ್ಷಾ ಕೇಂದ್ರ ಗಳಿಗೆ ಭೇಟಿ ನೀಡುವಂತೆ ಕ್ರಮ ವಹಿಸಲಾಗಿದೆ.

ಒಂದು ಕೊಠಡಿಗೆ 24 ವಿದ್ಯಾರ್ಥಿಗಳು:

ಪ್ರತೀ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸ್ಥಾನಿಕ ಜಾಗೃತ ದಳದ ಸದಸ್ಯರನ್ನು ರೊಟೇಷನ್ ಆಧಾರದಲ್ಲಿ ನೇಮಿಸಲಾಗಿದೆ. ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು, ಕಸ್ಟೋಡಿ ಯನ್, ಜಾಗೃತ ದಳ, ಮೊಬೈಲ್ ಕಸ್ಟೋಡಿಯನ್ ಹಾಗೂ ಸಿಬ್ಬಂದಿಗೆ ಉಪನಿರ್ದೇಶಕರ/ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ತರಬೇತಿ ನೀಡಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಒಂದು ಕೊಠಡಿಗೆ ಗರಿಷ್ಠ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.

ಆರೋಗ್ಯ ಕಾರ್ಯಕರ್ತರು, ಪೊಲೀಸರ ನೇಮಕ:

ಪ್ರತೀ ತಾಲೂಕಿಗೆ ಒಂದು 108 ಆಂಬ್ಯುಲೆನ್ಸ್‌ ಕಾಯ್ದಿರಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಕೇಂದ್ರ ತೆರೆದು ಇಬ್ಬರು ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಲು ಕ್ರಮ ವಹಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರಕ್ಕೆ ಇಬ್ಬರು ಪೋಲಿಸ್ ಸಿಬ್ಬಂದಿಯನ್ನು ನಿಯೋಜಿಸಲು ಪೊಲೀಸ್ ಇಲಾಖೆ ಕ್ರಮ ವಹಿಸಿದೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಯಲ್ಲಿ 144 ಸೆಕ್ಷನ್ ಜಾರಿಗೊಳಿಸುವಂತೆ ಹಾಗೂ ಪರೀಕ್ಷಾ ಕೇಂದ್ರದ ಸುತ್ತ ಇರುವ ಜೆರಾಕ್ಸ್‌ ಅಂಗಡಿ ಮತ್ತು ಸೈಬರ್ ಕೇಂದ್ರಗಳನ್ನು ಮುಚ್ಚಲು ಕ್ರಮವಹಿಸಲಾಗಿದೆ.

ವೇಳಾಪಟ್ಟಿ:

ಎಸ್.ಎಸ್.ಎಲ್.ಸಿ. ಪರೀಕ್ಷೆ ಮಾ. 25ರಿಂದ ಪ್ರಾರಂಭವಾಗಿ ಏಪ್ರಿಲ್ 6ರ ವರೆಗೆ ನಡೆಯಲಿದೆ. ಪರೀಕ್ಷೆಯು ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದ್ದು, ಮಾ. 25 ರಂದು ಪ್ರಥಮ ಭಾಷೆ, ಮಾ. 27 ರಂದು ಸಮಾಜ ವಿಜ್ಞಾನ, ಮಾ. 30 ರಂದು ವಿಜ್ಞಾನ, ಏಪ್ರಿಲ್ 2 ರಂದು ಗಣಿತ, ಏಪ್ರಿಲ್ 3 ರಂದು ಅರ್ಥಶಾಸ್ತ್ರ, ಏಪ್ರಿಲ್ 4 ರಂದು ತೃತೀಯ ಭಾಷೆ ಹಾಗೂ ಏಪ್ರಿಲ್ 6ರಂದು ದ್ವಿತೀಯ ಭಾಷೆ ಪರೀಕ್ಷೆ ನಡೆಯಲಿದೆ.ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳು, ಶಾಲೆಗಳು, ವಿದ್ಯಾರ್ಥಿಗಳುತಾಲೂಕುಪರೀಕ್ಷಾ ಕೇಂದ್ರಶಾಲೆಗಳುವಿದ್ಯಾರ್ಥಿಗಳುಕೆ.ಆರ್‌.ಪೇಟೆ59062967ಮದ್ದೂರು88123630ಮಳವಳ್ಳಿ75103158ಮಂಡ್ಯ ಉತ್ತರ33053282ಮಂಡ್ಯ ದಕ್ಷಿಣ70091275ನಾಗಮಂಗಲ52062364ಪಾಂಡವಪುರ48062276ಶ್ರೀರಂಗಪಟ್ಟಣ52082150ಒಟ್ಟು4776221102ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಶಾಸಕರಿಂದ ಶುಭ ಹಾರೈಕೆಮಳವಳ್ಳಿ:ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಭಯ ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಬರೆದು ಹೆಚ್ಚು ಅಂಕ ಗಳಿಸುವ ಮೂಲಕ ನಾಡಿಗೆ ಕೀರ್ತಿ ತರಬೇಕೆಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹಾರೈಸಿದರು.ವಿದ್ಯಾರ್ಥಿಗಳಿಗೆ ಶುಭ ಕೋರಿ ಮಾತನಾಡಿದ ಅವರು, ಮಾ.25 ರಿಂದ ಏಪ್ರಿಲ್ 6 ರವರಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಯಲ್ಲಿ ತಾಲೂಕಿನ 3169 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಶಿಕ್ಷಣ ಇಲಾಖೆ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ ಜೊತೆಗೆ ಭಯಮುಕ್ತ ವಾತವರಣದಲ್ಲಿ ಪರೀಕ್ಷೆ ನಡೆಸಲು ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಂಡಿದೆ ಎಂದರು.ತಾಲೂಕಿನ ಎಲ್ಲಾ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಭಯಮುಕ್ತತೆಯಿಂದ ಬರೆಯುವುದರ ಮೂಲಕ ನಿಮ್ಮ ಭವಿಷ್ಯ ಮೊದಲನೇಯ ಸಾರ್ವತ್ರಿಕ ಪರೀಕ್ಷೆ ಇದಾಗಿದೆ. ಪರೀಕ್ಷೆಯನ್ನು ಯಶಸ್ಸು ಗಳಿಸಿ ನಾಡಿಗೆ ತಂದೆ ತಾಯಿಗಳಿಗೆ ಹಾಗೂ ದೇಶಕ್ಕೆ ಕೀರ್ತಿ ತರುವುದರ ಮೂಲಕ ಭವಿಷತ್‌ನ್ನು ಉತ್ತಮವಾಗಿ ರೂಢಿಸಿಕೊಳ್ಳಬೇಕೆಂದು ಶುಭ ಕೋರಿದರು.