ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಿ: ಡೀಸಿ ಗೋವಿಂದರೆಡ್ಡಿ

| Published : Mar 20 2024, 01:15 AM IST

ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಿ: ಡೀಸಿ ಗೋವಿಂದರೆಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾ.25 ರಿಂದ ಏ.6ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬೀದರ್

ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗಳನ್ನು ಬೀದರ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸುಸೂತ್ರವಾಗಿ ನಡೆಸಿ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅಧಿಕಾರಿಗಳಿಗೆ ಹೇಳಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾ.25ರಿಂದ ಏ.6ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿ, ಎಲ್ಲಾ ಪರೀಕ್ಷಾ ಕೊಠಡಿಗಳಿಗೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು ಹಾಗೂ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಒಬ್ಬ ಪ್ಲೈಯಿಂಗ್ ಸ್ಕ್ವಾಡ್ ಇರಬೇಕು.

ಈ ಸಲ ಬೀದರ ಜಿಲ್ಲೆಯಲ್ಲಿ ಒಟ್ಟು 29645 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವದರಿಂದ ಯಾವುದೇ ಗೊಂದಲಗಳಾಗದಂತೆ ನೋಡಿಕೊಳ್ಳಬೇಕೆಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕ ಸಲೀಂ ಪಾಶಾ ಅವರಿಗೆ ಸೂಚನೆ ನೀಡಿದರು.

ಜಿಪಂ ಸಿಇಓ ಡಾ.ಗಿರೀಶ್ ಬದೋಲೆ ಮಾತನಾಡಿ, ಈ ಸಲ ತುಂಬಾ ಸ್ಟ್ರೀಕ್ಟ್ ರೂಲ್ಸ್ ಬಂದಿದೆ. ತಾವು ಏನು ಮಾಡಿದರು ಅದು ಸಿ.ಸಿ.ಟಿ.ವಿ ಯಲ್ಲಿ ರೆಕಾರ್ಡ್ ಆಗುತ್ತದೆ. ಹಾಗಾಗೀ ಪರೀಕ್ಷೆಗಳಲ್ಲಿ ಯಾವುದೇ ನಕಲು ನಡೆಯದಂತೆ ಎಚ್ವರಿಕೆ ವಹಿಸಬೇಕೆಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕ ಸಲೀಂ ಪಾಷಾ ಮಾತನಾಡಿ ಮಾ.25ರಂದು ಪ್ರಥಮ ಭಾಷಾ ಪರೀಕ್ಷೆಗಳು. 27 ರಂದು ಸಮಾಜ ವಿಜ್ಞಾನ ಪರೀಕ್ಷೆ ಹಾಗೂ 30 ರಂದು ವಿಜ್ಞಾನ ಮತ್ತು ಏ.2ರಂದು ಗಣಿತ. 3 ರಂದು ಅರ್ಥಶಾಸ್ತ್ರ (ಅಂಧ ಮಕ್ಕಳಿಗೆ) 4ರಂದು ತೃತೀಯ ಭಾಷೆ ಹಾಗೂ ಏ.6ರಂದು ದ್ವೀತಿಯ ಭಾಷೆಗಳ ಪರೀಕ್ಷೆ ನಡೆಯಲಿದ್ದು. ಜಿಲ್ಲೆಯ 560 ಶಾಲೆಗಳಲ್ಲಿ ಮಕ್ಕಳು ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ ಎಂದರು.

ಹೊಸದಾಗಿ 27194 ಹಾಗೂ ಮರು ಪರೀಕ್ಷೆಯನ್ನು 2451 ವಿದ್ಯಾರ್ಥಿಗಳು ಸೇರಿ ಒಟ್ಟು 29645 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಒಟ್ಟು 90 ಪರೀಕ್ಷಾ ಕೇಂದ್ರಗಳಿದ್ದು. 16 ಸೂಕ್ಷ್ಮ 5 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿವೆ. ಒಟ್ಟು ಕೋಣೆಗಳು 1309 ಇವೆ ಎಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್,. ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಮಹೇಶ ಮೇಘಣ್ಣವರ, ಡಿವೈಎಸ್ಪಿ ಶಿವನಗೌಡ ಪಾಟೀಲ್, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಅಧಿಕ್ಷಕರು, ಉಪ ಮುಖ್ಯ ಅಧಿಕ್ಷಕರು, ಬಿ.ಇ.ಓ. ತಹಶಿಲ್ದಾರರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.