. ಕೃಷಿ ಉತ್ಪಾದಕ ಸಂಸ್ಥೆಗಳು, ಸ್ವ-ಸಹಾಯ ಸಂಘ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಗರಿಷ್ಠ 3 ಕೋಟಿವರೆಗೆ ಸಹಾಯಧನ ಸಿಗಲಿದೆ ಎಂದ ಅವರು ಈ ಯೋಜನೆಯಡಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಮತ್ತು ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ಶೇ.50 ಅಥವಾ ಗರಿಷ್ಠ 15 ಲಕ್ಷ ರು. ಸಹಾಯಧನ ನೀಡಲಾಗುತ್ತಿದೆ
ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ (ಪಿಎಂಎಫ್‍ಎಂಇ) ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆಗಳಿಗೆ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ನೀಡುವ ಸಹಾಯಧನವನ್ನು ಸದುಪಯೋಗಪಡಿಸಿಕೊಂಡು ಕೃಷಿ ಜೊತೆಗೆ ಆಹಾರ ಸಂಸ್ಕರಣಾ ಘಟಕ ಉದ್ದಿಮೆ ಸ್ಥಾಪಿಸಿ ಆರ್ಥಿಕವಾಗಿ ಅಭಿವೃದ್ದಿಹೊಂದುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.ಪಟ್ಟಣದ ಹೊರವಲಯದ ಗಡದಿಂನ ಗಾಯತ್ರಿ ಸಭಾಂಗಣದಲ್ಲಿ ಜಿ.ಪಂ, ಜಿಲ್ಲಾಡಳಿತ ಕೃಷಿ ಇಲಾಖೆ ಚಿಕ್ಕಬಳ್ಳಾಪುರ, ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ವತಿಯಿಂದ ಆಯೋಜಿಸಿದ್ದ ‘ರೈತ ಉತ್ಪಾದಕ ಸಂಸ್ಥೆಗಳ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯವನ್ನು ಉದ್ಘಾಟಿಸಿ ಮಾತನಾಡಿದರು.
ಆಹಾರ ಸಂಸ್ಕರಣಾ ಘಟಕಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ (ಪಿಎಂಎಫ್‍ಎಂಇ) ಯೋಜನೆಯಡಿಯಲ್ಲಿ ಸಹಾಯಧನವನ್ನು ಸದುಪಯೋಗಪಡಿಸಿಕೊಂಡು ಕೃಷಿ ಜೊತೆಗೆ ಆಹಾರ ಸಂಸ್ಕರಣಾ ಘಟಕ ಉದ್ದಿಮೆ ಸ್ಥಾಪಿಸಿ, ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಕೇಂದ್ರದ ಪಿಎಂಎಫ್‍ಎಂಇ ಯೋಜನೆಯಡಿ ರಾಜ್ಯದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಸಹಾಯಧನ (ಸಬ್ಸಿಡಿ) ನೀಡಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
. ಕೃಷಿ ಉತ್ಪಾದಕ ಸಂಸ್ಥೆಗಳು, ಸ್ವ-ಸಹಾಯ ಸಂಘ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಗರಿಷ್ಠ 3 ಕೋಟಿವರೆಗೆ ಸಹಾಯಧನ ಸಿಗಲಿದೆ ಎಂದ ಅವರು ಈ ಯೋಜನೆಯಡಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಮತ್ತು ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ಶೇ.50 ಅಥವಾ ಗರಿಷ್ಠ 15 ಲಕ್ಷ ರು. ಸಹಾಯಧನ ನೀಡಲಾಗುತ್ತಿದೆ ಎಂದರು. ಕೇಂದ್ರ- ರಾಜ್ಯ ಸರ್ಕಾರದ ಸಬ್ಸಿಡಿಜಂಟಿ ಕೃಷಿ ನಿರ್ದೇಶಕ ಎಸ್.ಎಸ್. ಅಬಿದ್ ಮಾತನಾಡಿ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ ಶೇ.50 ರಷ್ಟು ಅಥವಾ ಗರಿಷ್ಠ 15 ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ (ಕೇಂದ್ರ ಸರ್ಕಾರದ 6 ಲಕ್ಷ ರೂ. ಸಹಾಯಧನ ಹಾಗೂ ರಾಜ್ಯ ಸರ್ಕಾರದ 9 ಲಕ್ಷ ರು.ಗಳ. ಸಹಾಯಧನ ಸೇರಿದೆ) ಎಂದರು.
ಯೋಜನೆ ಸದ್ಬಳಕೆಯಾಗಲಿಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ (ಕೆಪೆಕ್) ಗ್ರಾಮೀಣ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಸೃಷ್ಟಿ, ಗ್ರಾಮೀಣ ಯುವಕರಿಗೆ ಉದ್ಯೋಗಾವಕಾಶ ಹಾಗೂ ರಾಜ್ಯದ ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮಬೆಲೆ ದೊರಕಿಸಿಕೊಡುವ ಧ್ಯೇಯೋದ್ದೇಶಗಳೊಂದಿಗೆ ಕರ್ತವ್ಯ ನಿರ್ವಹಿಸುತ್ತಿದೆ ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪಿ.ಮಂಜುನಾಥ್ ರೆಡ್ಡಿ, ಶ್ರೀನಿವಾಸ್, ಪೂಜಪ್ಪ,ನರೇಂದ್ರ,ನರಸಿಂಹಪ್ಪ, ಸೋಮಶೇಖರ್,ಶಿವರಾಮ ರೆಡ್ಡಿ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಇದ್ದರು.