ಕುಡಿಯುವ ನೀರು, ಪ್ರಾಕೃತಿಕ ವಿಪತ್ತುಗಳಿಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

| Published : May 12 2024, 01:15 AM IST

ಕುಡಿಯುವ ನೀರು, ಪ್ರಾಕೃತಿಕ ವಿಪತ್ತುಗಳಿಗೆ ಸಹಾಯವಾಣಿ ಕೇಂದ್ರ ಸ್ಥಾಪನೆ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಸರ್ಕಾರವು ಸಹ ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರದ ಹಣವನ್ನು ಜಮೆ ಮಾಡುತ್ತಿದೆ. ಕೆಲವೊಂದು ತಾಂತ್ರಿಕ ದೋಷಗಳನ್ನು ನಿವಾರಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ.

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಶಿಡ್ಲಘಟ್ಟ ತಾಲೂಕಿನಲ್ಲಿ ಕುಡಿಯುವ ನೀರು ಪೂರೈಸಲು ಮತ್ತು ಮಳೆ ಸಹಿತ ಪ್ರಾಕೃತಿಕ ವಿಪತ್ತುಗಳ ಮಾಹಿತಿ ನೀಡಲು 24x7 ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ ಎಂದು ತಹಸೀಲ್ದಾರ್ ಬಿ.ಎನ್.ಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಾಲೂಕಿನಲ್ಲಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮಳೆಯಿಂದ ಯಾವುದೇ ಅನಾಹುತ ಸಂಭವಿಸಿದರೂ ಸಹ ಸಾರ್ವಜನಿಕರ ಮಾಹಿತಿಗಾಗಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ದೂರವಾಣಿ ಸಂಖ್ಯೆ 08158-256764 ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ತಾಲೂಕಿನ 11 ಗ್ರಾಮಗಳು ಹಾಗೂ ನಗರದ ವಿವಿಧ ವಾರ್ಡುಗಳಿಗೆ ಎಂಟು ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಎಲ್ಲಿಯೂ ಸಹ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಲೂಕಿನಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಸರ್ಕಾರವು ಸಹ ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರದ ಹಣವನ್ನು ಜಮೆ ಮಾಡುತ್ತಿದೆ. ಕೆಲವೊಂದು ತಾಂತ್ರಿಕ ದೋಷಗಳನ್ನು ನಿವಾರಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧಿಸಿ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದ್ದು, ಕ್ಷೇತ್ರದ ಗಡಿಗೆ ಹೊಂದಿಕೊಂಡಿರುವ ಚಿಲಕಲನೇರ್ಪು ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಸಭೆ, ಸಮಾರಂಭ ನಡೆಸಲು ಪೂರ್ವ ಅನುಮತಿಯನ್ನು ಪಡೆಯಲು ರಾಜಕೀಯ ಮುಖಂಡರಿಗೆ ಸೂಚನೆ ಸಹ ನೀಡಲಾಗಿದೆ ಎಂದರು.