ಸಾರಾಂಶ
ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸದೇ ಕೂಡಲೇ ಧನಾತ್ಮಕ ನಿಲುವು ತೆಗೆದುಕೊಳ್ಳುವ ಮೂಲಕ ಜನರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪಿಸುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ನಿಯಮ 73ರಡಿ ಗಮನ ಸೆಳೆಯುವ ಸೂಚನೆ ಮೂಲಕ ಸರ್ಕಾರದ ನಿಲುವು ಏನೆಂಬುದನ್ನು ಪ್ರಶ್ನಿಸಿದರು.
ಈ ಬಗ್ಗೆ ಅಧಿಕೃತವಾಗಿ ಉತ್ತರಿಸಿದ ರಾಜ್ಯ ಸರ್ಕಾರ, ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆ ಮಾಡುವ ಸಂಬಂಧ ವಕೀಲರ ಸಂಘದಿಂದ ಹಾಗೂ ಜನಪ್ರತಿನಿಧಿಗಳಿಂದ ಮನವಿಯು ಸ್ವೀಕೃತವಾಗಿದ್ದರೂ ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಪ್ರಸ್ತುತ ಈಗ ಇರುವ ವ್ಯವಸ್ಥೆಯಲ್ಲಿಯೇ ಈ ಭಾಗದ ವ್ಯಾಜ್ಯಗಳನ್ನು ಸಮರ್ಥವಾಗಿ ಈ ಪೀಠದಲ್ಲಿಯೇ ನಿರ್ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಮೂಲಕ ಉತ್ತರಿಸಿದೆ.ಆದಾಗ್ಯೂ ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸದೇ ಕೂಡಲೇ ಧನಾತ್ಮಕ ನಿಲುವು ತೆಗೆದುಕೊಳ್ಳುವ ಮೂಲಕ ಜನರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.