ಸಾರಾಂಶ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ ಕಾವೂರಿನ ಬಿಜಿಎಸ್ ಸಭಾಂಗಣದಲ್ಲಿ ಮಂಗಳವಾರ ದ.ಕ. ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಬಡವ ವರ್ಗದ ಪ್ರತಿಭಾವಂತ ಮಕ್ಕಳಿಗೆ ಅಂತಾರಾಷ್ಟ್ರೀಯ ಮಟ್ಟದ ಜ್ಞಾನ ನೀಡುವ ಶಾಲೆಗಳನ್ನು ಶ್ರೀ ಆದಿಚುಂಚನಗಿರಿ ಮಠದ ವತಿಯಿಂದ ಆರಂಭಿಸಲಾಗುವುದು ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ ಕಾವೂರಿನ ಬಿಜಿಎಸ್ ಸಭಾಂಗಣದಲ್ಲಿ ಮಂಗಳವಾರ ದ.ಕ. ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನದಲ್ಲಿ, ಸಂತ ಮತ್ತು ಸಮಾಜ ಒಂದು ನಾಣ್ಯದ ಎರಡು ಮುಖವಿದ್ದಂತೆ. ಸಮಾಜಕ್ಕೆ ಸಂತರ ಅನಿವಾರ್ಯವಿದೆ. ಸಮಾಜ ಸುಧಾರಣೆ, ಸಚ್ಚಾರಿತ್ರ್ಯ ನಿರ್ಮಾಣಕ್ಕೆ ಸಂತರ ಅವಶ್ಯಕತೆ ಇದೆ.ಎಂದರು.ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಪರಮಪೂಜ್ಯ ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಅಂಗವಾಗಿ ನ.೨೬ ಹಾಗೂ ಜ.೧ ಮತ್ತು ೨ರಂದು ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ, ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಗುರುವಂದನೆ ಹಾಗೂ ರಜತ ತುಲಾಭಾರ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.ಅಧ್ಯಕ್ಷತೆ ವಹಿಸಿದ ರಜತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಶಾಸಕ ಡಾ. ಭರತ್ ಶೆಟ್ಟಿ, ರಜತ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಪಿ.ಎಸ್. ಪ್ರಕಾಶ್ ಮಾತನಾಡಿದರು.ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸ್ಥಳೀಯ ಕಾರ್ಪೋರೇಟರ್ ಸುಮಂಗಳಾ ಮುಖ್ಯ ಅತಿಥಿಯಾಗಿದ್ದರು.
ಮಾಜಿ ಶಾಸಕ ಸಂಜೀವ ಮಠಂದೂರು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಣದೀಪ್ ಕಾಂಚನ್ ವಂದಿಸಿದರು. ಬಿಜಿಎಸ್ ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ ನಿರೂಪಿಸಿದರು.ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನಈ ಸಂದರ್ಭ ಸಾಧಕರಾದ ಡಾ.ಕೆ. ಚಿನ್ನಪ್ಪ ಗೌಡ (ಸಾಹಿತ್ಯ), ಪ್ರೊ.ಕೆ.ವಿ.ರಾವ್ (ವಿಜ್ಞಾನ), ಗುರುವಪ್ಪ ಎನ್.ಟಿ. ಬಾಳೆಪುಣಿ (ಮಾಧ್ಯಮ), ಡಾ. ರಮೇಶ್ ಡಿ.ಪಿ., ಡಾ. ಸತೀಶ್ ಕಲ್ಲಿಮಾರ್ (ವೈದ್ಯಕೀಯ), ಪ್ರಕಾಶ್ ಅಂಚನ್ ಬಂಟ್ವಾಳ (ಶಿಕ್ಷಣ), ಮಾಧವ ಸುವರ್ಣ (ಧಾರ್ಮಿಕ), ಭಕ್ತಿ ಭೂಷಣ್‌ದಾಸ್ (ಗೋ ಸೇವೆ), ಪುಷ್ಪಾವತಿ ಬುಡ್ಲೆಗುತ್ತು (ನಾಟಿ ವೈದ್ಯೆ), ವೀಣಾ ಕುಲಾಲ್ (ಸಮಾಜಸೇವೆ), ನರಸಿಂಹ ರಾವ್ ದೇವಸ್ಯ, ಡಾ.ಕೆ.ಎಸ್. ಗೋಪಾಲಕೃಷ್ಣ ಕಾಂಚೋಡು, ಸುರೇಶ್ ಬಲ್ನಾಡು (ಕೃಷಿ), ಜಗದೀಶ್ ಆಚಾರ್ಯ (ಸಂಗೀತ), ಮಂಜುಳಾ ಸುಬ್ರಹ್ಮಣ್ಯ (ನೃತ್ಯ), ಶಿವರಾಮ ಪಣಂಬೂರು (ಯಕ್ಷಗಾನ), ಸುಜಾತ ಮಾರ್ಲ (ಯೋಗ), ಸಚಿನ್ ಸುಂದರ ಗೌಡ, ರಾಧಾಕೃಷ್ಣ, ಕೇಶವ ಅಮೈ, ಕುಸುಮಾಧರ (ಉದ್ಯಮ), ಅಭಿಷೇಕ್ ಶೆಟ್ಟಿ (ಕ್ರೀಡೆ), ಮಾಧವ ಉಳ್ಳಾಲ್ (ಪರಿಸರ), ವಿಕ್ರಂ ಬಿ. ಶೆಟ್ಟಿ (ಚಿತ್ರಕಲೆ) ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೀರ್ತಿರಾಜ್ ಕರಂದಾಡಿ ಸನ್ಮಾನಿತರ ಪರಿಚಯ ಮಾಡಿದರು.