ಸಾರಾಂಶ
ನವನಗರದಲ್ಲಿರುವ ತಾಲೂಕು ಪಂಚಾಯತಿ ಕಚೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿಯನ್ನು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರದಲ್ಲಿರುವ ತಾಲೂಕು ಪಂಚಾಯತಿ ಕಚೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿಯನ್ನು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ ಚಾಲನೆ ನೀಡಿದರು.ನಂತರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಎನ್.ರಾಂಪೂರ ಪದಗ್ರಹಣ ಮಾಡಿದರು.
ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ಸಮಿತಿಯ ಸದಸ್ಯರಾದ ಚೆನ್ನವೀರ ಅಂಗಡಿ, ಶ್ರವಣಕುಮಾರ ಖಾತೇದಾರ, ರೇಣುಕಾ ನ್ಯಾಮಗೌಡ, ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಸಂಪಗಾವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.