ರೈತರ ಅಭ್ಯುದಯಕ್ಕಾಗಿ ಏತ ನೀರಾವರಿ ಯೋಜನೆ

| Published : Sep 09 2024, 01:40 AM IST

ಸಾರಾಂಶ

ರೈತರ ಅಭ್ಯುದಯಕ್ಕಾಗಿ ಏತ ನೀರಾವರಿ ಯೋಜನೆ

ಕನ್ನಡಪ್ರಭ ವಾರ್ತೆ ಕನಕಪುರ

ತಾಲೂಕಿನ ರೈತರ ಅನುಕೂಲಕ್ಕಾಗಿ ಈ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಗೌರಿ-ಗಣೇಶ ಹಬ್ಬದ ಪ್ರಯುಕ್ತ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದಲ್ಲಿ ತಮ್ಮ ಪೂರ್ವಿಕರ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿ ಬಹುತೇಕ ಜಲಾಶಯಗಳು ತುಂಬಿದ್ದರೂ ಸಹ ರಾಮನಗರ ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಕೆರೆ-ಕಟ್ಠೆಗಳಲ್ಲಿ ನೀರಿಲ್ಲದೆ ರೈತರಿಗೆ, ಜಾನುವಾರುಗಳಿಗೆ ತೊಂದರೆಯಾಗಿರುವದನ್ನು ಮನಗಂಡು ಅರ್ಕಾವತಿ ಬಲದಂಡೆ ನಾಲೆ ಏತ ನೀರಾವರಿ ಯೋಜನೆಯನ್ನು ತುರ್ತಾಗಿ ಪುನಶ್ಚೇತನಕ್ಕೆ ಚಾಲನೆ ನೀಡಲಾಗಿದೆ. ಇದು ನನ್ನ ಬಹುದಿನದ ಕನಸಾಗಿದ್ದು ಇದರಿಂದ 4000 ಸಾವಿರ ಎಕರೆಗೂ ಹೆಚ್ಚು ಭೂಮಿಗೆ ನೀರಾವರಿ ಅನುಕೂಲವಾಗಲಿದೆ ಎಂದರು. *ಎತ್ತಿನ ಹೊಳೆ ನಮ್ಮ ಬದುಕಿಗೆ ಕಿರೀಟ*ನಮ್ಮ ಬದುಕಿಗೆ ದೊಡ್ಡ ಕಿರೀಟವಾದಂತಹ ಎತ್ತಿನ ಹೊಳೆ ಯೋಜನೆಗೆ ಬಾಗಿನ ಅರ್ಪಿಸಿದ್ದೇನೆ. ಸಮ್ಮಿಶ್ರ ಸರ್ಕಾರ ಇದ್ದಾಗ ನೀರಾವರಿ ಸಚಿವನಾಗಿದ್ದೆ. ಆಗ ಯಾವ ಸ್ಥಿತಿಯಲ್ಲಿತ್ತೊ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಅದೇ ಸ್ಥಿತಿಯಲ್ಲಿತ್ತು. ಅಲ್ಲಿದ್ದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ, ಇನ್ನೊಂದು ವರ್ಷದಲ್ಲಿ ಇಲ್ಲಿನ ನೀರು ಎತ್ತದಿದ್ದರೆ ನಾನು ಇಲ್ಲಿಗೆ ಮತ್ತೆ ಬರುವುದಿಲ್ಲ ಎಂದು ಶಪಥ ಮಾಡಿ ಛಲತೊಟ್ಟು ಮುಗಿಸಿದೆ. ವಿಧಾನ ಪರಿಷತ್ ಸದಸ್ಯ ಎಸ್. ರವಿ,ಆರ್.ಇ.ಎಸ್. ಅಧ್ಯಕ್ಷ ಎಚ್. ಕೆ. ಶ್ರೀಕಂಠ ಸೇರಿದಂತೆ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.