ಸಾರಾಂಶ
ಗೋಕಾಕ: ಘಟಪ್ರಭಾ ನದಿ ತೀರದ ಸಾರ್ವಜನಿಕರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲು ಮೂಡಲಗಿ ಮತ್ತು ಗೋಕಾಕ ತಾಲೂಕಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಗೋಕಾಕ: ಪಶ್ಚಿಮ ಘಟ್ಟ ಮತ್ತು ಹಿಡಕಲ್ ಡ್ಯಾಂ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ನದಿ ತೀರದ ಸಾರ್ವಜನಿಕರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲು ಮೂಡಲಗಿ ಮತ್ತು ಗೋಕಾಕ ತಾಲೂಕಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಸಂಭಾವ್ಯ ಪ್ರವಾಹ ಎದುರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮೂಡಲಗಿ ಮತ್ತು ಗೋಕಾಕ ತಹಸೀಲ್ದಾರಗೆ ಸೂಚಿಸಲಾಗಿದೆ. ನದಿ ತೀರದ ಗ್ರಾಮಗಳ ಪಿಡಿಒಗಳು, ಗ್ರಾಮ ಆಡಳಿತ ಅಧಿಕಾರಿಗಳ ಜತೆಗೆ ನಮ್ಮ ತಂಡ ಎನ್‌ಎಸ್‌ಎಫ್ ಕಚೇರಿಯ ಸಿಬ್ಬಂದಿ ನಿಯೋಜಿಸಲಾಗಿದ್ದು, ನದಿ ತೀರದ ಸಾರ್ವಜನಿಕರನ್ನು ಸ್ಥಳಾಂತರಿಸಿ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲು ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿರುವುವಾಗಿ ಅವರು ತಿಳಿಸಿದ್ದಾರೆ. ನದಿ ತೀರದ ಗ್ರಾಮಗಳಾದ ಅಡಿಬಟ್ಟಿಯಿಂದ ತಳಕಟ್ನಾಳವರೆಗೆ ಅಬ್ದುಲ್ ಮಿರ್ಜಾನಾಯಿಕ (7795367576) ಲೋಳಸೂರದಿಂದ ಹುಣಶ್ಯಾಳ ಪಿ.ಜಿ.ವರೆಗೆ ಸಿಪಿ.ಯಕ್ಸಂಬಿ (9972619149) ವಡೇರಟ್ಟಿಯಿಂದ ಮುನ್ಯಾಳವರೆಗೆ ದಾಸಪ್ಪ ನಾಯಿಕ (9900161986) ಮತ್ತು ತಿಗಡಿಯಿಂದ ಅವರಾದಿ ಗ್ರಾಮದವರೆಗೆ ಭಾಸ್ಕರ್ (9538389191) ಅವರನ್ನು ಟೀಂ ಎನ್‌ಎಸ್‌ಎಫ್ ದಿಂದ ಸಂತ್ರಸ್ತರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.