ಸಾರಾಂಶ
ಪ್ರಧಾನಮಂತ್ರಿ ನರೇಂದ್ರಮೋದಿಯವರ ೧೪ ವರ್ಷದ ಆಡಳಿತದಲ್ಲಿ ಭಾರತೀಯರಿಗೆ ಅಚ್ಚೇ ದೀನ್ ಎಲ್ಲೂ ಕಾಣಲಿಲ್ಲ. ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯದ ಜನ ವಿರೋಧಿ ಪ್ರಧಾನಮಂತ್ರಿಯವರ ಎನ್‌ಡಿಎ ಒಕ್ಕೂಟ ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು
ತೆಲಂಗಾಣದ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಎಐಸಿಸಿ ಅಧ್ಯಕ್ಷರ ಮಾತು
ಕನ್ನಡಪ್ರಭ ವಾರ್ತೆ ಚಳ್ಳಕೆರೆಪ್ರಧಾನಮಂತ್ರಿ ನರೇಂದ್ರಮೋದಿಯವರ ೧೪ ವರ್ಷದ ಆಡಳಿತದಲ್ಲಿ ಭಾರತೀಯರಿಗೆ ಅಚ್ಚೇ ದೀನ್ ಎಲ್ಲೂ ಕಾಣಲಿಲ್ಲ. ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯದ ಜನ ವಿರೋಧಿ ಪ್ರಧಾನಮಂತ್ರಿಯವರ ಎನ್‌ಡಿಎ ಒಕ್ಕೂಟ ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ತೆಲಂಗಾಣದ ಅಲಂಪುರ ವಿಧಾನಸಭಾ ಮೀಸಲು ಕ್ಷೇತ್ರದಲ್ಲಿ ಅಭ್ಯರ್ಥಿ ಡಾ.ಎಸ್.ಎ.ಸಂಪತ್‌ಕುಮಾರ್ ಪರ ಹಮ್ಮಿಕೊಂಡಿದ್ದ ಪ್ರಜಾಗರ್ಜನ ರ‍್ಯಾಲಿ ಉದ್ದೇಶಿಸಿ ಮಾತನಾಡಿದರು. ಕೇಂದ್ರ ಎನ್‌ಡಿಎ ಸರ್ಕಾರದ ವಿಫಲತೆ ಪಟ್ಟಿ ಮಾಡುತ್ತಾ ಹೋದರೆ ಇಡೀ ದಿನಸಾಲದು. ಆದರೆ, ನೂರಾರು ವರ್ಷಗಳಿಂದ ಬಡ ಜನರ ಕಲ್ಯಾಣಕ್ಕಾಗಿ ನಿರಂತರ ಶ್ರಮಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಸಂಪೂರ್ಣ ಬೆಂಬಲ ಸದಾಕಾಲ ಇರಬೇಕು ಎಂದರು.ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಕೇವಲ ಸುಳ್ಳು ಅಪಪ್ರಚಾರದಿಂದ ರಾಷ್ಟ್ರ, ರಾಜ್ಯದ ಅಭಿವೃದ್ಧಿ ಆಗದು. ರಾಜ್ಯದಲ್ಲಿ ಕಳೆದ ಆರು ತಿಂಗಳಿನಿಂದ ಆಡಳಿತ ನಡೆಸುತ್ತಿರುವ ಕಾಂಗ್ರಸ್ ಸರ್ಕಾರ ಜನಪರ ಯೋಜನೆಗಳ ಮೂಲಕ ಇಂದು ರಾಷ್ಟ್ರಕ್ಕೆ ಮಾದರಿಯಾಗಿದೆ. ಖರ್ಗೆಯವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ತಮ ಆಡಳಿತ ನೀಡುತ್ತಿದ್ದಾರೆ. ಈ ಆಡಳಿತವನ್ನು ತೆಲಂಗಾಣ ಪಡೆಯಬೇಕಾದರೆ ಅಭ್ಯರ್ಥಿ ಡಾ.ಸಂಪತ್‌ಕುಮಾರ್‌ರನ್ನು ಗೆಲ್ಲಿಸಬೇಕೆಂದು ವಿನಂತಿಸಿದರು.
ಪ್ರಜಾಗರ್ಜನ ಸಭೆಯಲ್ಲಿ ಅಭ್ಯರ್ಥಿ ಸಂಪತ್‌ಕುಮಾರ್, ತೆಲಂಗಾಣದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಇತರೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.