ಎಚ್‌ಡಿಕೆ ಮತ್ತೊಂದು ಜನ್ಮವೆತ್ತಿ ಬಂದರೂ ಸರ್ಕಾರ ಅಲುಗಾಡಿಸಲಾಗದು

| Published : Nov 05 2024, 01:34 AM IST

ಎಚ್‌ಡಿಕೆ ಮತ್ತೊಂದು ಜನ್ಮವೆತ್ತಿ ಬಂದರೂ ಸರ್ಕಾರ ಅಲುಗಾಡಿಸಲಾಗದು
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರವನ್ನು ಮುಂದಿನ ಎಂಟೂವರೆ ವರ್ಷ ಯಾರೂ ಅಲುಗಾಡಿಸಲು ಆಗುವುದಿಲ್ಲ. ಕುಮಾರಸ್ವಾಮಿ ಮತ್ತೊಂದು ಜನ್ಮ ಎತ್ತಿ ಬಂದರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರವನ್ನು ಮುಂದಿನ ಎಂಟೂವರೆ ವರ್ಷ ಯಾರೂ ಅಲುಗಾಡಿಸಲು ಆಗುವುದಿಲ್ಲ. ಕುಮಾರಸ್ವಾಮಿ ಮತ್ತೊಂದು ಜನ್ಮ ಎತ್ತಿ ಬಂದರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎಲೆ ತೋಟದ ಹಳ್ಳಿ, ಅಕ್ಕೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಾಲ್ಕೈದು ದಿನವಿರುವಾಗ ಜನರ ಬಳಿಗೆ ಬರುವ ಕುಮಾರಸ್ವಾಮಿ ಅವರೇ ನಿಮ್ಮ ಈ ಧೋರಣೆಯನ್ನು ಇನ್ನೆಷ್ಟು ದಿನ ಮುಂದುವರಿಸಿಕೊಂಡು ಹೋಗುತ್ತೀರಿ ಎಂದು ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್‌ಡಿಕೆ ಸಹವಾಸ ಮಾಡಿ ಸಾಕಾಗಿದೆ:

18 ಸೀಟು ಇಟ್ಟುಕೊಂಡು ಸರ್ಕಾರ ಮಾಡಲು ಸಾಧ್ಯವೇ? ಬಿಜೆಪಿಯವರು ದಡ್ಡರು, ಕೇವಲ ಎರಡು ಕ್ಷೇತ್ರ ಗೆದ್ದಿರುವುದಕ್ಕೆ ಕೇಂದ್ರದಲ್ಲಿ ಮಂತ್ರಿ ಮಾಡಿದ್ದಾರೆ. ಕಾಂಗ್ರೆಸ್‌ನವರಾಗಿದ್ದರೆ ಅವರನ್ನು ಹತ್ತಿರಕ್ಕೂ ಸೇರಿಸುತ್ತಿರಲಿಲ್ಲ. ಈ ಹಿಂದೆ ಅವರ ಸಹವಾಸ ಮಾಡಿ ಅನುಭವಿಸಿದ್ದು ಸಾಕಾಗಿದೆ. ಚುನಾವಣೆ ಸಮೀಪಿಸಲಿ ಆಗ ಆ ಬಗ್ಗೆ ಮಾತನಾಡುತ್ತೇನೆ ಎಂದರು.

ಕುಮಾರಸ್ವಾಮಿ ದುಡ್ಡು ಬೇಡ ಎನ್ನಬೇಡಿ:

ಕೇವಲ ಯೋಗೇಶ್ವರ್ ಒಬ್ಬರೇ ಈ ಕ್ಷೇತ್ರದ ಜನರ ಸೇವೆ ಮಾಡುವುದಿಲ್ಲ. ನಾನು, ಸಿದ್ದರಾಮಯ್ಯ ಅವರಾದಿಯಾಗಿ ಎಲ್ಲಾ ಸಚಿವರು ಹಾಗೂ ಮುಖಂಡರು ನಿಮ್ಮ ಸೇವೆ ಮಾಡುತ್ತೇವೆ. ಕುಮಾರಸ್ವಾಮಿ ದುಡ್ಡು ಕೊಡುತ್ತಾರಂತೆ. ಅವರ ದುಡ್ಡನ್ನು ನೀವು ಬೇಡ ಎನ್ನಬೇಡಿ. ಅವರ ಬಳಿ ಹಣ ಪಡೆಯಿರಿ, ಮತವನ್ನು ಹಸ್ತದ ಗುರುತಿಗೆ ಹಾಕಿ ಎಂದರು.

ಕುಮಾರಸ್ವಾಮಿ ಅವರದು ಕೇವಲ ಖಾಲಿ ಮಾತು. ನಿಮ್ಮ ಬದುಕು, ಅಭಿವೃದ್ಧಿ ನಮ್ಮ ಜವಾಬ್ದಾರಿ. ರೈತರಿಗೆ ಏನಾದರೂ ಸಹಾಯ ಮಾಡಿದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ನಾನು ಇಂಧನ ಸಚಿವನಾಗಿದ್ದಾಗ ಎಚ್‌ವಿಡಿ ಯೋಜನೆಯಲ್ಲಿ 22 ಸಾವಿರ ರೈತರಿಗೆ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಿಕೊಟ್ಟೆ. ಈ ರೀತಿ ಕುಮಾರಸ್ವಾಮಿ ಅವರು ಯಾವುದಾದರೂ ಒಂದು ದೇವಾಲಯಕ್ಕೆ ಸಹಾಯ ಮಾಡದ್ದಾರಾ? ಸಮುದಾಯ ಭವನ ನಿರ್ಮಿಸಿದ್ದಾರಾ? ಸ್ಮಶಾನಕ್ಕೆ ಜಮೀನು ಕೊಡಿಸಿದ್ದಾರಾ? ಕೆರೆಗೆ ನೀರು ತುಂಬಿಸುವ ಕೆಲಸ ಮಾಡಿದ್ದಾರಾ? ಅವರು ಸಿಎಂ ಆಗಿದ್ದಾಗ ಅವರ ಕಾರ್ಯಕರ್ತರಿಗೆ ಅಧಿಕಾರ ಕೊಡಿಸಿದ್ದಾರಾ ಇಲ್ಲ, ಆದರೂ ಯಾವ ಧೈರ್ಯದ ಮೇಲೆ ಮತ ಕೇಳುತ್ತಾರೆ ಎಂದರು.

ನಾವು ಚನ್ನಪಟ್ಟಣಕ್ಕೆ ಹೋರಾಡುತ್ತಿದ್ದೇವೆ:

ನಾವು ಈ ಜಿಲ್ಲೆಯವರು. ನಾವು ಸತ್ತರೆ ಇಲ್ಲೇ ಮಣ್ಣು ಮಾಡುತ್ತಾರೆ. ನಮ್ಮ ಪಲ್ಲಕ್ಕಿ ಹೊರುವವರು ನೀವೆ, ಚಟ್ಟ ಹೊರುವವರು ನೀವೇ. ಯೋಗೇಶ್ವರ್ ಸತ್ತರೆ ಅವರ ದೇಹವನ್ನು ಹಾಕುವುದು ಚಕ್ಕೆರೆಯಲ್ಲೇ. ಹೀಗಾಗಿ ನಾವು ಈ ಚನ್ನಪಟ್ಟಣದಲ್ಲಿ ಹೋರಾಡುತ್ತಿದ್ದೇವೆ ಎಂದರು.