ಪೋಲಿಯೋ ಮುಕ್ತ ಭಾರತವಾಗಿದ್ದರೂ ಲಸಿಕೆ ಅಗತ್ಯ: ಮೀರಾ ಶಿವಲಿಂಗಯ್ಯ

| Published : Mar 04 2024, 01:15 AM IST

ಪೋಲಿಯೋ ಮುಕ್ತ ಭಾರತವಾಗಿದ್ದರೂ ಲಸಿಕೆ ಅಗತ್ಯ: ಮೀರಾ ಶಿವಲಿಂಗಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಪೋಲಿಯೋ ರೋಗದ ವಿರುದ್ಧ ಹೋರಾಟ ನಡೆಸುವ ಶಕ್ತಿ ಲಸಿಕೆಗಿದೆ. ಹುಟ್ಟುವ ಯಾವೊಂದು ಮಗುವೂ ಪೋಲಿಯೋ ರೋಗಕ್ಕೆ ತುತ್ತಾಗಬಾರದು. ಅದಕ್ಕಾಗಿ ಪೋಷಕರು ಜಾಗೃತವಾಗಿರಬೇಕು. ಹುಟ್ಟಿನಿಂದ ಐದು ವರ್ಷಗಳವರೆಗೆ ಪ್ರತಿ ವರ್ಷ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವುದರ ಮೂಲಕ ಮಕ್ಕಳ ಪೋಲಿಯೋ ರೋಗಕ್ಕೆ ಒಳಗಾಗದಂತೆ ರಕ್ಷಣೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯವಿಶ್ವ ಸಂಸ್ಥೆ ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಿಸಿದ್ದರೂ ರೋಗ ಹರಡದಂತೆ ತಡೆಯಲು ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕುವುದು ಅಗತ್ಯ ಎಂದು ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಹೇಳಿದರು.

ನಗರದ ಹಾಲಹಳ್ಳಿ ಸ್ಲಂ ಬೋರ್ಡ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪೋಲಿಯೋ ರೋಗದ ವಿರುದ್ಧ ಹೋರಾಟ ನಡೆಸುವ ಶಕ್ತಿ ಲಸಿಕೆಗಿದೆ. ಹುಟ್ಟುವ ಯಾವೊಂದು ಮಗುವೂ ಪೋಲಿಯೋ ರೋಗಕ್ಕೆ ತುತ್ತಾಗಬಾರದು. ಅದಕ್ಕಾಗಿ ಪೋಷಕರು ಜಾಗೃತವಾಗಿರಬೇಕು. ಹುಟ್ಟಿನಿಂದ ಐದು ವರ್ಷಗಳವರೆಗೆ ಪ್ರತಿ ವರ್ಷ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವುದರ ಮೂಲಕ ಮಕ್ಕಳ ಪೋಲಿಯೋ ರೋಗಕ್ಕೆ ಒಳಗಾಗದಂತೆ ರಕ್ಷಣೆ ಮಾಡಬೇಕು ಎಂದು ಸಲಹೆ ನೀಡಿದರು.

ಪ್ರತಿ ವರ್ಷ ಪಲ್ಸ್‌ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಸರ್ಕಾರಗಳು ಬಹಳ ಮುತುವರ್ಜಿ ವಹಿಸಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ನಗರ ಮತ್ತು ಗ್ರಾಮಾಂತರ ಪ್ರದೇಶದ ಮನೆ ಮನೆಗೆ ತೆರಳಿ ಪೋಲಿಯೋ ಹನಿ ಹಾಕಿಸುತ್ತಿದ್ದಾರೆ. ಪೋಲಿಯೋ ರೋಗದ ವಿರುದ್ಧ ಸಮರೋಪಾದಿಯಲ್ಲಿ ಪಲ್ಸ್‌ಪೋಲಿಯೋ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿ ವರ್ಷವೂ ಮುನ್ನೆಚ್ಚರಿಕೆ ಕ್ರಮವಾಗಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಒಟ್ಟು ೭೨೩ ಪೋಲಿಯೋ ಲಸಿಕಾ ಬೂತ್‌ಗಳನ್ನು ತೆರೆದು ಮಕ್ಕಳಿಗೆ ಲಸಿಕೆಯನ್ನು ನೀಡಲಾಗುತ್ತಿದೆ ಎಂದರು.

ಒಟ್ಟು ೩ ದಿನಗಳ ಕಾಲ ಲಸಿಕಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇಂದು ಪೋಲಿಯೋ ಲಸಿಕೆಯನ್ನು ಬೂತ್‌ಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿದೆ. ನಾಳೆ ಮನೆ ಮನೆಗೆ ಭೇಟಿ ನೀಡಿ ಹಳ್ಳಿಗಳಲ್ಲಿ ಹಾಗೂ ನಾಳಿದ್ದು ನಗರ ಪ್ರದೇಶಗಳಲ್ಲಿ ಲಸಿಕೆಯನ್ನು ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ಡಾ. ಪ್ರಭುದೇವ್, ಆರ್‌ಸಿಎಚ್‌ಒ ಡಾ.ಅನಿಲ್‌ಕುಮಾರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಮತ್ತು ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಎಂ.ಎನ್.ಆಶಾಲತಾ, ಡಾ.ಬೆಟ್ಟಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.