ಹನೂರಿನಲ್ಲಿ ಶೌಚಾಲಯದ ಬಾಗಿಲು ತೆರೆದರೂ ಕಟ್ಟಡ ಸುತ್ತಲೂ ಅನೈರ್ಮಲ್ಯ

| Published : Aug 14 2024, 12:45 AM IST

ಹನೂರಿನಲ್ಲಿ ಶೌಚಾಲಯದ ಬಾಗಿಲು ತೆರೆದರೂ ಕಟ್ಟಡ ಸುತ್ತಲೂ ಅನೈರ್ಮಲ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಹನೂರು ಪಟ್ಟಣ ಪಂಚಾಯತಿ ಅಧಿಕಾರಿಗಳು ತುಂಬಿದ ಶೌಚ ಸ್ವಚ್ಛಗೊಳಿಸಿ ಶೌಚಾಲಯ ಬಾಗಿಲು ತೆರೆದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಟ್ಟರೂ ಶೌಚಾಲಯದ ಸುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡದೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡಪ್ರಭ ವಾರ್ತೆ ಹನೂರುಪಟ್ಟಣ ಪಂಚಾಯತಿ ಅಧಿಕಾರಿಗಳು ತುಂಬಿದ ಶೌಚ ಸ್ವಚ್ಛಗೊಳಿಸಿ ಶೌಚಾಲಯ ಬಾಗಿಲು ತೆರೆದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಟ್ಟರೂ ಶೌಚಾಲಯದ ಸುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡದೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

toilet sanitation,

ಹನೂರು ಪಟ್ಟಣದ ಪಪಂ ಸನಿಹದಲ್ಲೇ ಇರುವ ಹನೂರಿನ ಏಕೈಕ ಸಾರ್ವಜನಿಕ ಶೌಚಾಲಯ ಬಂದ್ ಶೀರ್ಷಿಕೆಯಡಿ ಕನ್ನಡಪ್ರಭ ಪತ್ರಿಕೆಯಲ್ಲಿ ಭಾನುವಾರ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಾರ್ವಜನಿಕ ಶೌಚಾಲಯ ತುಂಬಿದ್ದ ಶೌಚವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪತ್ರಿಕಾ ವರದಿಗೆ ಎಚ್ಚೆತ್ತು ಸಾರ್ವಜನಿಕರಿಗೆ ಸ್ಪಂದಿಸಿದ್ದಾರೆ.

ಸಾರ್ವಜನಿಕರಿಗೆ ಅನುಕೂಲ: ಪಟ್ಟಣದ ಸಾರ್ವಜನಿಕ ಶೌಚಾಲಯ ಸೆಪ್ಟಿಕ್ ಟ್ಯಾಂಕ್ ತುಂಬಿದ್ದ ಕಾರಣ ಭಾನುವಾರ ಬಂದ್ ಮಾಡುವ ಮೂಲಕ ಸಾರ್ವಜನಿಕರು, ವಾಹನ ಸವಾರರು ಪ್ರಯಾಣಿಕರು ಪರದಾಡುವಂಥ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಪತ್ರಿಕೆ ವಿಸೃತ ಕನ್ನಡಪ್ರಭ ವರದಿ ಪ್ರಕಟಿಸಿ ಹಿರಿಯ ಅಧಿಕಾರಿಗಳ ಗಮನ ಸೆಳೆಯುವ ಮೂಲಕ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಸೂಚನೆ ನೀಡುವಂತೆ ನೀಡಿದ ಆದೇಶದಂತೆ ಸಾರ್ವಜನಿಕ ಶೌಚಾಲಯ ಸೆಪ್ಟಿಕ್ ಟ್ಯಾಂಕ್ ಯಂತ್ರದ ಮೂಲಕ ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಗಿದೆ.

ಹನೂರಿನ ಏಕೈಕ ಶೌಚಾಲಯ ಕಟ್ಟಡದ ಸುತ್ತಲೂ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಕಸ ಕಡ್ಡಿ ರಾಡಿ ಕೊಳಚೆ ನೀರು ನಿಂತು ಗಬ್ಬುನಾರುತ್ತಿದೆ. ರೋಗ ರುಜಿನಿಗಳ ಆವಾಸ ಸ್ಥಳವಾಗಿ ಮಾರ್ಪಟ್ಟಿದೆ, ಈ ಬಗ್ಗೆ ಹಿರಿಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಿ ರೋಗರುಜಿನೆಗಳಿಂದ ಮುಕ್ತಗೊಳಿಸುವಂತೆ ನಾಗರಿಕರು ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.