ಸಾರಾಂಶ
ರಾಜ್ಯದಲ್ಲಿ ಕಬಾಬ್, ಗೋಬಿ ಮಂಚೂರಿ, ಸಿಹಿ ತಿಂಡಿಗಳ ಬಳಿಕ ಇದೀಗ ಖಾರ ಬೂಂದಿ, ಮಿಕ್ಚರ್‌ಗಳಲ್ಲೂ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಕೃತಕ ಬಣ್ಣ ಬಳಕೆ ಪತ್ತೆಯಾಗಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯದಲ್ಲಿ ಕಬಾಬ್, ಗೋಬಿ ಮಂಚೂರಿ, ಸಿಹಿ ತಿಂಡಿಗಳ ಬಳಿಕ ಇದೀಗ ಖಾರ ಬೂಂದಿ, ಮಿಕ್ಚರ್‌ಗಳಲ್ಲೂ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಕೃತಕ ಬಣ್ಣ ಬಳಕೆ ಪತ್ತೆಯಾಗಿದೆ.ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ ಖಾರ ತಿಂಡಿಗಳ ಮಾದರಿಗಳನ್ನು ಸಂಗ್ರಹಿಸಿದ್ದು, ಈ ವೇಳೆ ಕೃತಕ ಬಣ್ಣ ಬಳಕೆ ಮಾಡುತ್ತಿರುವುದು ದೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ವರದಿ ಸಲ್ಲಿಸಲಿದ್ದು, ಈ ಕುರಿತು ಆರೋಗ್ಯ ಸಚಿವರೇ ಅಧಿಕೃತ ಮಾಹಿತಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2024-25 ಹಾಗೂ 2025-26ನೇ ಸಾಲಿನಲ್ಲಿ 19 ತಪಾಸಣಾ ಅಭಿಯಾನ ನಡೆಸಿದ್ದು, 19 ಬಗೆಯ ತಿಂಡಿ ಮತ್ತು ಪಾನೀಯಗಳ 3,787 ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಇದೀಗ ಖಾರಾ ಬೂಂದಿ, ಮಿಕ್ಚರ್‌ಗಳ ಮಾದರಿಗಳನ್ನು ಪರೀಕ್ಷೆ ನಡೆಸಿದ್ದು, ಕೃತಕ ಬಣ್ಣ ಬಳಕೆಯಾಗಿರುವುದು ತಿಳಿದುಬಂದಿದೆ. ವರದಿ ಆಧಾರದ ಮೇಲೆ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.