ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿ: ಶಿವಾನಂದ

| Published : Oct 10 2024, 02:24 AM IST

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿ: ಶಿವಾನಂದ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮ ಪಂಚಾಯಿತಿ ಕಾರ್ಯಪಡೆ ಸದಸ್ಯರಿಗೆ ಆರೋಗ್ಯ ತರಬೇತಿ ಕಾರ್ಯಾಗಾರ ತಾಲೂಕಿನ ಇರಕಲ್‌ಗಡಾ ಗ್ರಾಪಂ ಕಾರ್ಯಾಲಯದ ಸಭಾಂಗಣದಲ್ಲಿ ಜರುಗಿತು.

ಗ್ರಾಮ ಪಂಚಾಯಿತಿ ಕಾರ್ಯಪಡೆ ಸದಸ್ಯರಿಗೆ ಆರೋಗ್ಯ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ

ಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಗ್ರಾಮ ಪಂಚಾಯಿತಿ ಕಾರ್ಯಪಡೆ ಸದಸ್ಯರಿಗೆ ಆರೋಗ್ಯ ತರಬೇತಿ ಕಾರ್ಯಾಗಾರ ತಾಲೂಕಿನ ಇರಕಲ್‌ಗಡಾ ಗ್ರಾಪಂ ಕಾರ್ಯಾಲಯದ ಸಭಾಂಗಣದಲ್ಲಿ ಜರುಗಿತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಮಾತನಾಡಿ, ಭಾರತ ಹಳ್ಳಿಗಳ ದೇಶ, ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಹಳ್ಳಿಗಳ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ವಿನೂತನ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಅಭಿವೃದ್ಧಿ ಮಾಡುತ್ತಿವೆ. ಗ್ರಾಮಮಟ್ಟದ ಸ್ಥಳೀಯ ಜನಪ್ರತಿನಿಧಿಗಳಿಗೆ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ, ಇತರೆ ಗ್ರಾಪಂ ಸಿಬ್ಬಂದಿಗೆ ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ, ಮುಟ್ಟಿನ ನೈರ್ಮಲ್ಯ, ಬಾಲ್ಯ ವಿವಾಹ ತಡೆಗಟ್ಟುವಿಕೆ ಹಾಗೂ ರಕ್ತಹೀನತೆ ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟುವ ವಿಷಯ ಕುರಿತು ಸವಿಸ್ತಾರವಾಗಿ ತರಬೇತಿ ನೀಡುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ. ಈಗಾಗಲೇ ಈ ತರಬೇತಿ ನೀಡುವವರಿಗೆ ಜಿಲ್ಲಾಮಟ್ಟದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ತರಬೇತಿದಾರರು ಈ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ತಮ್ಮ ಕಾರ್ಯಕ್ಷೇತ್ರದ ಗ್ರಾಮಗಳಲ್ಲಿ ಅನುಷ್ಠಾನಗೊಳಿಸಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗುವಂತೆ ಮಾಹಿತಿ ನೀಡಬೇಕು ಎಂದರು.ಇರಕಲ್‌ಗಡಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದಮ್ಮ ಮಾತನಾಡಿ, ಈ ತರಬೇತಿಯನ್ನು ಬಹಳ ಉಪಯುಕ್ತವಾಗಿ ಗ್ರಾಮಮಟ್ಟದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ತಿಳಿದುಕೊಂಡು ರೋಗಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸಬೇಕು. ಕ್ಷಯರೋಗಿಗಳನ್ನು ದತ್ತು ಸ್ವೀಕಾರ ಯೋಜನೆಯನ್ನು ನಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಗತಗೊಳಿಸಿ, 2025ಕ್ಕೆ ಕ್ಷಯಮುಕ್ತ ಕೊಪ್ಪಳವನ್ನಾಗಿ ಮಾಡಲು ಸಹಕರಿಸುವಂತೆ ತಿಳಿಸಿದರು.

ಅಧಿಕಾರಗಳಾದ ಶೈಲಜಾ ಪಾಟೀಲ್, ಸಾವಿತ್ರಿ, ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶೋಭಾ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯಿತಿ ಸಿಬ್ಬಂದಿ ಇತರರಿದ್ದರು.