ಅಳ್ನಾವರ:

ಇಲ್ಲಿನ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೧ರಿಂದ ೫ನೇ ತರಗತಿ ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.ಬಿಜೆಪಿ ಧಾರವಾಡ ಗ್ರಾಮೀಣ ಜಿಲ್ಲಾ ಉಪಾಧ್ಯಕ್ಷ ನಾರಾಯಣ ಮೋರೆ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಸಂಸದ ಪ್ರಹ್ಲಾದ ಜೋಶಿ ಅವರ ಪ್ರಸ್ತಾವಣೆ ಮೇರೆಗೆ ಕ್ಷೇತ್ರದ ಸರ್ಕಾರಿ ಶಾಲೆಯ 5ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ಮತ್ತು ಬ್ಯಾಗ್ ನೀಡಲಾಗುತ್ತಿದೆ ಎಂದರು.

ಶಾಲೆಗಳಿಗೂ ಕೂಡ ಶೈಕ್ಷಣಿಕ ಸಾಮಗ್ರಿಗಳನ್ನು ತಲುಪಿಸಲಾಗುತ್ತಿದ್ದು ಶೈಕ್ಷಣಿಕ ಬೆಳವಣಿಗೆಗೆ ಬಡತನ ಅಡ್ಡಿಯಾಗಬಾರದು ಎಂಬ ಕಾಳಜಿಯಿಂದ ಈ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಎಂಎಸ್‌ಐಎಲ್ ಮಾಜಿ ನಿರ್ದೇಶಕ ಶಿವಾಜಿ ಡೊಳ್ಳಿನ ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಕಳೆದ ವರ್ಷ ವಿವಿಧ ಶಾಲೆಗಳಿಗೆ ಡೆಸ್ಕ್, ಸ್ಮಾರ್ಟ್‌ ಬೋರ್ಡ್‌ ಹಾಗೂ ಬಣ್ಣದರ್ಪನ ಕಾರ್ಯಕ್ರಮದಲ್ಲಿ ಬಣ್ಣಗಳನ್ನು ನೀಡಿದ್ದರು. ಈಗ ಮಕ್ಕಳಿಗೆ ಸಮವಸ್ತ್ರ ಮತ್ತು ಸ್ಕೂಲ್‌ ಬ್ಯಾಗ್ ನೀಡಿದ್ದಾರೆ. ಇದು ಬಡ ಗ್ರಾಮೀಣ ಭಾಗದ ಮಕ್ಕಳಿಗೆ ಸಹಕಾರಿಯಾಗಿದೆ ಎಂದರು.

ಲಖನ ಬರಗುಂಡಿ, ಪ್ರವೀಣ ಪವಾರ, ಲಿಂಗರಾಜ ಮೂಲಿಮನಿ, ಪರಶುರಾಮ ಕಾಕತ್ಕರ, ಪರಶುರಾಮ ಪಾಲಕರ, ಕಲ್ಮೇಶ ಚಚಡಿ, ಪ್ರಭಾಕರ ಜಳಗೇಕರ, ಯಲ್ಲಾರಿ ಹುಬ್ಬಳ್ಳಿಕರ, ಸಂತೋಷ ಪೂಜಾರ, ಸಚಿನ ಲಿಂಗನಮಠ, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.