ಪ್ರತಿಯೊಬ್ಬ ಪ್ರಜೆಗೂ ಕಾನೂನಿನ ಬಗ್ಗೆ ಅರಿವು ಅಗತ್ಯ: ಪಿಎಸ್ಐ ಮಧು ಎಲ್.

| Published : Jul 07 2025, 11:48 PM IST

ಪ್ರತಿಯೊಬ್ಬ ಪ್ರಜೆಗೂ ಕಾನೂನಿನ ಬಗ್ಗೆ ಅರಿವು ಅಗತ್ಯ: ಪಿಎಸ್ಐ ಮಧು ಎಲ್.
Share this Article
  • FB
  • TW
  • Linkdin
  • Email

ಸಾರಾಂಶ

ಭಾರತ ದೇಶದ ಪ್ರತಿಯೊಬ್ಬ ಪ್ರಜೆ ಕೂಡ ಕಾನೂನಿನ ಅರಿವು ಹೊಂದಿರಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಬಳಸಬಾರದು, ಅಭ್ಯಾಸದ ಕಡೆಗೆ ಕಾಳಜಿ ವಹಿಸಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸ್ಥಳೀಯ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಪಿಎಸ್ಐ ಮಧು ಎಲ್. ಹೇಳಿದರು.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರ

ಭಾರತ ದೇಶದ ಪ್ರತಿಯೊಬ್ಬ ಪ್ರಜೆ ಕೂಡ ಕಾನೂನಿನ ಅರಿವು ಹೊಂದಿರಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಬಳಸಬಾರದು, ಅಭ್ಯಾಸದ ಕಡೆಗೆ ಕಾಳಜಿ ವಹಿಸಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸ್ಥಳೀಯ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಪಿಎಸ್ಐ ಮಧು ಎಲ್. ಹೇಳಿದರು.

ಸ್ಥಳೀಯ ಅಕ್ಷರ ವಿದ್ಯಾ ವಿಹಾರ ಪಿ.ಯು. ಕಾಲೇಜಿನ ಸಭಾಂಗಣದಲ್ಲಿ ನಡೆದ ಪ್ರಥಮ ವರ್ಷದ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಪತ್ರಕರ್ತ ಜಯರಾಮ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶ್ರದ್ಧೆ ಮತ್ತು ಸಂಸ್ಕಾರವಿದ್ದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಈ ಶಿಕ್ಷಣ ಸಂಸ್ಥೆಯು ಅತ್ಯುತ್ತಮ ಬೋಧನಾ ಕೌಶಲ್ಯ ಹೊಂದಿದೆ. ಎಲ್ಲರೂ ಇದರ ಉಪಯೋಗ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಎಂ.ಕೆ ಕುಲಗೋಡ ಮಾತನಾಡಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ದೃಢಸಂಕಲ್ಪವಿದ್ದರೆ ಜಗತ್ತನ್ನೇ ಗೆಲ್ಲುವ ಸಾಮರ್ಥ್ಯ ಹೊಂದುವರು ಎಂದರು.

ಕಾಲೇಜಿನ ಪ್ರಾಚಾರ್ಯ ಪ್ರವೀಣ ಕುಲಗೋಡ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಬರುವ ಕಷ್ಟಗಳಿಗೆ ಹೆದರದೆ ಮುನ್ನುಗ್ಗಿ ಸಾಧನೆ ಮಾಡಬೇಕು ಎಂದರು. ಅಧ್ಯಕ್ಷತೆ ಡಾ.ವಿನೋದ್ ಮೇತ್ರಿ ವಹಿಸಿದ್ದರು. ಧರೆಪ್ಪ ಬ್ಯಾಕೋಡ್, ಎಸ್.ಕೆ. ಗಿಂಡೆ ಇದ್ದರು. ವಾರ್ಷಿಕ ಸಂಯೋಜಕರಾದ ಅಮರನಾಥ್ ರಾವಳ ಹಾಗೂ ಬೋಧಕ ಸಿಬ್ಬಂದಿ ಇದ್ದರು. ಪ್ರಿಯಾ ಹಡಪದ ಭರತ ನಾಟ್ಯ ಪ್ರದರ್ಶಿಸಿದರು.ಸುಮಲತಾ ಕಲ್ಲೂರ ಹಾಗೂ ಅಂಕಿತಾ ರಾಥೋಡ ನಿರೂಪಿಸಿದರು.ಕಾಶವ್ವ ಬ್ಯಾಳಿ ವಂದಿಸಿದರು.