ಪ್ರತಿಯೊಂದು ಸಮಸ್ಯೆಗಳಿಗೂ ಪರಿಹಾರ ಇರುತ್ತದೆ: ದರ್ಶನ್ ಪುಟ್ಟಣ್ಣಯ್ಯ

| Published : Dec 26 2024, 01:04 AM IST

ಪ್ರತಿಯೊಂದು ಸಮಸ್ಯೆಗಳಿಗೂ ಪರಿಹಾರ ಇರುತ್ತದೆ: ದರ್ಶನ್ ಪುಟ್ಟಣ್ಣಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಂಡು ಶಿಕ್ಷಣದಲ್ಲಿ ಸಾಧನೆ ಮಾಡಬೇಕು. ಧನಾತ್ಮಕ ಚಿಂತನೆಗಳೊಂದಿಗೆ ಮಕ್ಕಳು ಓದಿನಲ್ಲಿ ಮುಂದೆ ಬರಬೇಕು. ಯೋಗ ಮತ್ತು ಧ್ಯಾನದಿಂದ ಧನಾತ್ಮಕ ಚಿಂತನೆ ಬೆಳೆಯುತ್ತದೆ. ಅದಕ್ಕಾಗಿ ವಿದ್ಯಾರ್ಥಿಗಳು ಈ ರೀತಿಯ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪ್ರತಿಯೊಂದು ಸಮಸ್ಯೆಗಳಿಗೂ ಪರಿಹಾರ ಇದ್ದೇ ಇರುತ್ತದೆ. ವಿದ್ಯಾರ್ಥಿಗಳು ಋಣಾತ್ಮಕವಾಗಿ ಯೋಚಿಸದೆ ಧನಾತ್ಮಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ನೀಡಿದರು.

ಪಟ್ಟಣದ ಕೆಆರ್‌ಎಸ್ ರಸ್ತೆಯ ಶ್ರೀರಾಮ ಫೈನಾನ್ಸ್ ಸಭಾಂಗಣದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಂಸ್ಥೆ ಸಿಎಸ್‌ಆರ್ ಅನುದಾನದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಬುಧವಾರ ಪ್ರೋತ್ಸಾಹ ಹಣದ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಸ್ಥಳೀಯ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಶ್ರೀರಾಮ ಹಣಕಾಸು ಸಂಸ್ಥೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುತ್ತಿರುವುದ ನಿಜಕ್ಕೂ ಒಳ್ಳೆಯ ಬೆಳವಣಿಗೆ. ಸಂಸ್ಥೆ ಈ ಚಟುವಟಿಕೆ ನಡೆಸುತ್ತಿರುವುದಕ್ಕೆ ನಾವು ಧನ್ಯವಾದ ತಿಳಿಸುತ್ತೇನೆ ಎಂದರು.

ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಂಡು ಶಿಕ್ಷಣದಲ್ಲಿ ಸಾಧನೆ ಮಾಡಬೇಕು. ಧನಾತ್ಮಕ ಚಿಂತನೆಗಳೊಂದಿಗೆ ಮಕ್ಕಳು ಓದಿನಲ್ಲಿ ಮುಂದೆ ಬರಬೇಕು. ಯೋಗ ಮತ್ತು ಧ್ಯಾನದಿಂದ ಧನಾತ್ಮಕ ಚಿಂತನೆ ಬೆಳೆಯುತ್ತದೆ. ಅದಕ್ಕಾಗಿ ವಿದ್ಯಾರ್ಥಿಗಳು ಈ ರೀತಿಯ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಕೊಳ್ಳಬೇಕು ಎಂದರು.

ಗ್ರಾಮೀಣ ಭಾಗದ ಜನರು ಹಳ್ಳಿಗಳನ್ನು ತೊರೆದು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯಲು ಮತ್ತು ಗ್ರಾಮೀಣ ಜನರ ಆರ್ಥಿಕ ಮಟ್ಟ ಸುಧಾರಿಸಿ ಉತ್ತಮ ಜೀವನ ನಡೆಸಲು ಅವಶ್ಯಕವಾಗಿರುವ ಯೋಜನೆಗಳನ್ನು ರೂಪಿಸಲು ಸರ್ಕಾರ ಮುಂದಾಗಿದೆ ಎಂದರು.

ಈ ವೇಳೆ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಸರ್ಕಾರಿ ಶಾಲೆಯ ನೂರಾರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಹಣದ ಪ್ರಮಾಣ ಪತ್ರ ವಿತರಿಸಲಾಯಿತು. ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ಕೆನ್ನಾಳು ವಿಜಯಕುಮಾರ್, ಮುಖಂಡರಾದ ಡಿ.ಎಸ್.ಶಂಕರೇಗೌಡ(ಕೋಟಿ), ಎಣ್ಣೆಹೊಳೆಕೊಪ್ಪಲು ಮಂಜು, ಶ್ರೀರಾಮ ಫೈನಾನ್ಸ್‌ನ ನಂದಗೋಪಾಲ್ ಇತರರು ಇದ್ದರು.