ಸಾರಾಂಶ
ಕ್ಷೇತ್ರದ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿಕೊಡಬೇಕು ಎಂಬ ಉದ್ದೇಶದಿಂದ ಸಾಲಸೋಲ ಮಾಡಿ ಓದಿಸುತ್ತಿರುತ್ತಾರೆ. ಅದನ್ನು ಅರ್ಥ ಮಾಡಿಕೊಂಡು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು, ಅದನ್ನು ಬಿಟ್ಟು ಹಲವು ದುಶ್ಚಟಗಳಿಗೆ ಒಳಗಾಗಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ.
ಕನ್ನಡಪ್ರಭ ವಾರ್ತೆ ಪಾಂಡವಪುರ
ದ್ವಿತೀಯ ಪಿಯುಸಿ ಮಹತ್ವದ ಘಟ್ಟವಾಗಿರುವುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಶ್ರಮಪಟ್ಟ ಓದುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.ತಾಲೂಕಿನ ಬನ್ನಂಗಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವಕಾಲೇಜಿನಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಿಯುಸಿ ಹಂತದಲ್ಲಿ ಚೆನ್ನಾಗಿ ಓದಿ ಉತ್ತಮ ಅಂಕಗಳಿಸಿದೆ ಮಾತ್ರ ಮುಂದೆ ಉನ್ನತ ಶಿಕ್ಷಣಕ್ಕೆ ಹೋಗಲು ಸಾಧ್ಯ. ಹಾಗಾಗಿ ವಿದ್ಯಾರ್ಥಿಗಳು ಶ್ರಮಪಟ್ಟ ಓದುವ ಮೂಲಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಬೇಕು ಎಂದರು.
ಕ್ಷೇತ್ರದ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿಕೊಡಬೇಕು ಎಂಬ ಉದ್ದೇಶದಿಂದ ಸಾಲಸೋಲ ಮಾಡಿ ಓದಿಸುತ್ತಿರುತ್ತಾರೆ. ಅದನ್ನು ಅರ್ಥ ಮಾಡಿಕೊಂಡು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು, ಅದನ್ನು ಬಿಟ್ಟು ಹಲವು ದುಶ್ಚಟಗಳಿಗೆ ಒಳಗಾಗಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದರು.ಕಳೆದ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿದೆ. ಇಲ್ಲಿನ ಓರ್ವ ವಿದ್ಯಾರ್ಥಿನಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅವರನ್ನೇ ಮಾರ್ಗದರ್ಶಿಗಳಾಗಿ ತೆಗೆದುಕೊಂಡು ಕಲಿಕೆಯಲ್ಲಿ ಮುನ್ನಡೆಯಬೇಕು ಎಂದರು.
ಇದೇ ವೇಳೆ ಕಾಲೇಜಿನ ವಿದ್ಯಾರ್ಥಿಗಳಿಂದ ಹಲವು ಸಾಂಸ್ಕೃತಿಕ ಕಾರ್‍ಯಕ್ರಮಗಳು ಮೂಡಿಬಂದವು. ಈ ವೇಳೆ ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಕೆ.ಶ್ರೀನಿವಾಸ್, ತಾಪಂ ಮಾಜಿ ಸದಸ್ಯರಾದ ಬಿ.ಡಿ.ಹುಚ್ಚೇಗೌಡ, ಬಿ.ಪಿ.ಶ್ರೀನಿವಾಸ್, ಗ್ರಾಪಂ ಅಧ್ಯಕ್ಷ ಬಲರಾಮಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಮಾಕಪ್ಪ, ಪ್ರಾಂಶುಪಾಲ ಬಸವರಾಜು, ಶಂಕರ್, ಗೋವಿಂದೇಗೌಡ, ಪೂಜಾರಿ ರಮೇಶ್, ಹೋರಿಚಂದ್ರು, ಹೆಗ್ಗಡೆ ಮಹದೇವು ಸೇರಿದಂತೆ ಉಪನ್ಯಾಸಕರು, ಸಿಬ್ಬಂದಿಗಳು ಹಾಜರಿದ್ದರು.