ಸಾರಾಂಶ
- ಜಯದೇವ ಸರ್ಕಲ್‌ನಲ್ಲಿ ವಾಕಥಾನ್‌ಗೆ ಚಾಲನೆ - - - ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದೆ. ಪ್ರತಿಯೊಂದು ಮತವೂ ಮೌಲ್ಯಯುತವಾಗಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್ ಹೇಳಿದರು.
ನಗರದ ಜಯದೇವ ಸರ್ಕಲ್‌ನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿ, ಜಿಲ್ಲಾ ಆಯುಷ್ ಇಲಾಖೆ, ಅಶ್ವಿನಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಸುಶೃತ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ತಪೋವನ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆಶ್ರಯದಲ್ಲಿ ಏರ್ಪಡಿಸಲಾದ ವಾಕಥಾನ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮತದಾನ ದಿನ ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಚುನಾವಣೆಯಲ್ಲಿ ಪ್ರತಿಯೊಂದು ಮತವೂ ಅಮೂಲ್ಯ. ತಾವುಗಳು ಮತದಾನ ಮಾಡುವುದರ ಜೊತೆಗೆ ಮತ್ತೊಬ್ಬರನ್ನು ಮತದಾನ ಮಾಡಲು ಪ್ರೇರೆಪಿಸಬೇಕು. ಹಾಗೂ ಮತದಾನ ಮಾಡುವುದು ಎಲ್ಲ ನಾಗರಿಕರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಈ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು ಎಂದರು.
ಜಾಥಾವು ಜಯದೇವ ಸರ್ಕಲ್‌ನಿಂದ ಆರಂಭಗೊಂಡು ವಿದ್ಯಾರ್ಥಿ ಭವನ, ಜಿಲ್ಲಾ ಆಸ್ಪತ್ರೆ ಮೂಲಕ ಗುಂಡಿ ಸರ್ಕಲ್‌ನಲ್ಲಿ ಅಂತ್ಯವಾಯಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಯೋಗೇಂದ್ರ ಕುಮಾರ್ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಅಶ್ವಿನಿ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ತಪೋವನ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಪ್ರಾಂಶುಪಾಲರು ಉಪನ್ಯಾಸಕರು ವಿದ್ಯಾರ್ಥಿಗಳು ಸಿಬ್ಬಂದಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಎಲ್ಲ ವೈದ್ಯಾಧಿಕಾರಿಗಳು, ಸಿಬ್ಬಂದಿ, ಭಾರತ ಸೇವಾದಳದ ಸಿಬ್ಬಂದಿ ಭಾಗವಹಿಸಿದ್ದರು.
- - - -2ಕೆಡಿವಿಜಿ34ಃ:ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ವಾಕಥಾನ್ ಜಾಗೃತಿ ಜಾಥಾಗೆ ಜಿಪಂ ಸಿಇಒ, ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ ಬಿ.ಇಟ್ನಾಳ್ ಚಾಲನೆ ನೀಡಿದರು.