ಸಾರಾಂಶ
ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಓದಿನತ್ತ ಹೆಚ್ಚು ಆಸಕ್ತಿ ವಹಿಸಿದರೆ ಭವಿಷ್ಯದ ಜೀವನದಲ್ಲಿ ಯಶಸ್ಸನ್ನು ಕಾಣಬಹುದು ಎಂದು ಕುಪ್ಪಾಳು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯತ್ರಿ ತಿಳಿಸಿದರು. ತಿಪಟೂರಿನಲ್ಲಿ ಪ್ರಾಥಮಿಕ ಶಾಲಾ ಮಕ್ಕಳ ಗಣಿತ ಸ್ಪರ್ಧಾ ಸಮಾರೋಪವನ್ನು ಉದ್ಘಾಟಿಸಿ ಮಾತನಾಡಿದರು.
ಗಣಿತ ಸ್ಪರ್ಧೆಕನ್ನಡಪ್ರಭ ವಾರ್ತೆ ತಿಪಟೂರು
ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಓದಿನತ್ತ ಹೆಚ್ಚು ಆಸಕ್ತಿ ವಹಿಸಿದರೆ ಭವಿಷ್ಯದ ಜೀವನದಲ್ಲಿ ಯಶಸ್ಸನ್ನು ಕಾಣಬಹುದು ಎಂದು ಕುಪ್ಪಾಳು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯತ್ರಿ ತಿಳಿಸಿದರು.ತಾಲೂಕಿನ ಕುಪ್ಪಾಳು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಫೌಂಡೇಶನ್ ಮಾರ್ಗದರ್ಶನದೊಂದಿಗೆ ಗಣಿತ ಕಲಿಕಾ ಆಂದೋಲನದ ಮೂಲಕ ಪ್ರಾಥಮಿಕ ಶಾಲಾ ಮಕ್ಕಳ ಗಣಿತ ಸ್ಪರ್ಧಾ ಸಮಾರೋಪವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜದ ಅಭಿವೃದ್ಧಿಗೆ, ಸ್ವಾವಲಂಬಿ ಜೀವನಕ್ಕೆ ಶಿಕ್ಷಣ ಅವಶ್ಯಕವಾಗಿದ್ದು, ಮಕ್ಕಳು ತಂದೆ- ತಾಯಿಯ ಕಷ್ಟ ಅರ್ಥಮಾಡಿಕೊಂಡು ವಿದ್ಯಾಭ್ಯಾಸ ಮಾಡಿ ಮುಂದಿನ ದಿನಗಳಲ್ಲಿ ಉತ್ತಮ ಉದ್ಯೋಗವನ್ನು ಪಡೆದುಕೊಂಡು ತಾನು ಓದಿದ ಶಾಲೆಗೆ, ಗ್ರಾಮಕ್ಕೆ ತಂದೆ ತಾಯಿಗಳಿಗೆ ಒಳ್ಳೆಯ ಹೆಸರು ತರಬೇಕು ಎಂದು ಕಿವಿಮಾತು ಹೇಳಿದರು.ಗ್ರಂಥಪಾಲಕ ಪಿ.ಶಂಕರಪ್ಪ ಬಳ್ಳೆಕಟ್ಟೆ ಮಾತನಾಡಿ, ವಿದ್ಯಾರ್ಥಿ ಜೀವನ ಸುಂದರ ಜೀವನವಾಗಿದ್ದು, ಗ್ರಾಮೀಣ ಮಕ್ಕಳು ಇಂತಹ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಬಹುದು ಎಂದ ಅವರು, ಜೀವನದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಸಮಾಜದಲ್ಲಿ ಒಬ್ಬ ಮಾದರಿ ಪ್ರಜೆಯಾಗಿ ಬೆಳೆಯಬೇಕು ಎಂದರು.
ಪಿಡಿಒ ಪ್ರಸನ್ನಾತ್ಮ ಮಾತನಾಡಿ, ಶಾಲೆ ಅಭಿವೃದ್ಧಿಗೆ ಪಂಚಾಯಿತಿ ವತಿಯಿಂದ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತೇವೆ. ನಿಮ್ಮ ಜೀವನ ಸಾಧನೆಯಿಂದ ಕೂಡಿರಲಿ ಎಂದು ಆಶಿಸಿದರು.ಕಾರ್ಯಕ್ರಮದಲ್ಲಿ ಗುತ್ತಿಗೆದಾರ ಮೈಲಾರಸ್ವಾಮಿ, ಮುಖ್ಯೋಪಾಧ್ಯಾಯ ಪ್ರಕಾಶಪ್ಪ, ಶಿಕ್ಷಕರಾದ ಪೂರ್ಣಿಮಾ, ಪುಷ್ಪಾ, ಮಮತಾ, ರವೀಶ್, ಉದಯ್ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಭಾಗವಹಿಸಿದ್ದರು.