ಸಾರಾಂಶ
2000 ವರ್ಷಗಳ ಇತಿಹಾಸವಿರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು ಕನ್ನಡ ನಾಡಿನ ಪ್ರತಿಯೊಬ್ಬರೂ ಭಾಷೆಯನ್ನು ಬಳಸಿ ಬೆಳೆಸಬೇಕು ಎಂದು ಶಿಕ್ಷಕಿ ಚಂದ್ರಕಲಾ ಹೇಳಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
2000 ವರ್ಷಗಳ ಇತಿಹಾಸವಿರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು ಕನ್ನಡ ನಾಡಿನ ಪ್ರತಿಯೊಬ್ಬರು ಭಾಷೆಯನ್ನು ಬಳಸಿಬೆಳೆಸಬೇಕು ಎಂದು ಶಿಕ್ಷಕಿ ಚಂದ್ರಕಲಾ ಹೇಳಿದರು.
ಇಲ್ಲಿನ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ 70 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮುಖ್ಯ ಶಿಕ್ಷಕಿ ಶಾರದೆ ಬಿ.ಎಂ ಮಾತನಾಡಿ, ಕನ್ನಡದ ಏಕೀಕರಣದ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕಿ ಸ್ಮಿತಾ ಟಿ ಜೆ ಕನ್ನಡದ ಹಿರಿಮೆಗರಿಮೆಗಳ ಬಗ್ಗೆ ಮಾತನಾಡಿದರು . ವಿದ್ಯಾರ್ಥಿ ಸೋನಲ್ ಕೆ.ವಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸಹನ ಹಾಗೂ ಸಮನ್ವಿತ ಕಾರ್ಯಕ್ರಮ ನಿರೂಪಿಸಿ ಶ್ರಾವ್ಯ
ವಂದಿಸಿದರು.ಈ ಸಂದರ್ಭ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಿ ಶುಭ ಹಾರೈಸಲಾಯಿತು.
;Resize=(128,128))
;Resize=(128,128))
;Resize=(128,128))