ಜನವಾಡಾದಲ್ಲಿ ಬಿಜೆಪಿಯಿಂದ ತಿರಂಗಾ ಯಾತ್ರೆ

| Published : Aug 15 2024, 01:49 AM IST

ಜನವಾಡಾದಲ್ಲಿ ಬಿಜೆಪಿಯಿಂದ ತಿರಂಗಾ ಯಾತ್ರೆ
Share this Article
  • FB
  • TW
  • Linkdin
  • Email

ಸಾರಾಂಶ

Everyone Join Hands for World Peace: Dr. the tunnel

ಬೀದರ್: ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ಜನವಾಡಾದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಭವ್ಯ ತಿರಂಗಾ ಯಾತ್ರೆ ನಡೆಸಲಾಯಿತು. ಈ ಯಾತ್ರೆಯು ಜನವಾಡಾದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಿಂದ ಗ್ರಾಮದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಕೊನೆಗೆ ಬಸವೇಶ್ವರ ವೃತ್ತದಲ್ಲಿ ಸಮಾರೋಪಗೊಂಡಿತು. ಈ ಯಾತ್ರೆಯಲ್ಲಿ ಕಲಬುರಗಿಯ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಮಂಡಲ ಅಧ್ಯಕ್ಷ ದೀಪಕ್ ಗಾದಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಗಾಂಧಿ ಗಂಜ್ ಬ್ಯಾಂಕ್ ಅಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ, ಹಿರಿಯರಾದ ಸುರಜ್‌ಸಿಂಗ್ ಠಾಕೂರ್, ಮಂಡಲ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಪಾಟೀಲ, ಪ್ರಕಾಶ ಕಿಂಡಿ ಸೇರಿದಂತೆ ಪಕ್ಷದ ಹಿರಿಯ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.

----ಚಿತ್ರ 14ಬಿಡಿಆರ್53ಬೀದರ್ ತಾಲೂಕಿನ ಜನವಾಡಾ ಗ್ರಾಮದಲ್ಲಿ ಬಿಜೆಪಿಯಿಂದ ತಿರಂಗಾ ಯಾತ್ರೆ ನಡೆಯಿತು.--