ಎಲ್ಲರೂ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳಿ-ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ

| Published : Jan 02 2024, 02:15 AM IST

ಎಲ್ಲರೂ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳಿ-ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಹಕರಿಗೆ ಮಾರಾಟವಾಗುವ ಪ್ರತಿ ವಸ್ತು, ಸರಕು ಮತ್ತು ಸೇವೆಗಳ ಮೌಲ್ಯ, ವೆಚ್ಚ ಹಾಗೂ ಗುಣಮಟ್ಟದ ಬಗ್ಗೆ ಸಂಪೂರ್ಣ ಮಾಹಿತಿ ಗ್ರಾಹಕರಿಗೆ ಸಿಗಬೇಕು. ಗ್ರಾಹಕರ ಹಕ್ಕುಗಳನ್ನು ತಿಳಿಸುವ ಉದ್ದೇಶದಿಂದ ಗ್ರಾಹಕ ದಿನಾಚರಣೆ ಮಾಡಲಾಗುತ್ತಿದೆ.

ಕುಷ್ಟಗಿ: ಸಮಾಜದ ಪ್ರತಿಯೊಬ್ಬರೂ ಕಡ್ಡಾಯವಾಗಿ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳಬೇಕು. ಆಗ ಮಾತ್ರ ಗ್ರಾಹಕರು ವಂಚನೆಗೆ ಒಳಗಾಗದೇ ಜಾಗೃತವಾಗಿರಬಹುದು ಎಂದು ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ ಅಭಿಪ್ರಾಯಪಟ್ಟರು.ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಗ್ರಾಹಕರಿಗೆ ಮಾರಾಟವಾಗುವ ಪ್ರತಿ ವಸ್ತು, ಸರಕು ಮತ್ತು ಸೇವೆಗಳ ಮೌಲ್ಯ, ವೆಚ್ಚ ಹಾಗೂ ಗುಣಮಟ್ಟದ ಬಗ್ಗೆ ಸಂಪೂರ್ಣ ಮಾಹಿತಿ ಗ್ರಾಹಕರಿಗೆ ಸಿಗಬೇಕು. ಗ್ರಾಹಕರ ಹಕ್ಕುಗಳನ್ನು ತಿಳಿಸುವ ಉದ್ದೇಶದಿಂದ ಗ್ರಾಹಕ ದಿನಾಚರಣೆ ಮಾಡಲಾಗುತ್ತಿದೆ ಎಂದರು.

ಸಂಪನ್ಮೂಲ ವ್ಯಕ್ತಿ ಶರಣಪ್ಪ ತೆಮ್ಮಿನಾಳ ಉಪನ್ಯಾ ನೀಡಿ ಮಾತನಾಡಿ, 1962ರಲ್ಲಿ ಅಮೆರಿಕದ ಅಧ್ಯಕ್ಷ ಜಾನ್ ಎಫ್.ಕೆನಡಿ ಗ್ರಾಹಕರ ಹಕ್ಕುಗಳ ಕಾಯ್ದೆ ಜಾರಿಗೆ ತಂದರು. ಅಂದಿನಿಂದ ಇಂದಿನವರೆಗೂ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದ ಉದ್ದೇಶ ಗ್ರಾಹಕರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದಾಗಿದೆ ಎಂದರು.ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜತೆಗೆ ಸಂವಿಧಾನ ನೀಡಿರುವ ಹಕ್ಕುಗಳ ಬಗ್ಗೆಯೂ ತಿಳಿಸಬೇಕು. ಸರ್ಕಾರ ಗ್ರಾಹಕ ಸಂರಕ್ಷಣಾ ಕಾಯ್ದೆಯಡಿ ಜಾರಿಗೆ ತಂದು ಗ್ರಾಹಕರಿಗೆ ನ್ಯಾಯ ಪಡೆಯಲು ಅವಕಾಶ ಮಾಡಿಕೊಟ್ಟಿದೆ ಎಂದರು.ಗ್ರಾಹಕರ ಸಂರಕ್ಷಣಾ ಕಾಯ್ದೆಯಡಿ ದೂರುಗಳನ್ನು ಪ್ರತಿ ಜಿಲ್ಲೆಯಲ್ಲಿರುವ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಸಲ್ಲಿಸಬಹುದು. ಗ್ರಾಹಕರಿಗೆ ಸರಕುಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕು, ಶಿಕ್ಷಣ ಮತ್ತು ವ್ಯವಹಾರದ ಜಾಗೃತಿ ಹಕ್ಕು, ಅವಧಿ ಮುಗಿದ ಸರಕುಗಳ ಬಗ್ಗೆ ದೂರು ನೀಡುವ ಹಕ್ಕುಗಳನ್ನು ಗ್ರಾಹಕ ವ್ಯಾಜ್ಯಗಳ ಪರಿಹಾರವನ್ನು ಕಂಡುಕೊಳ್ಳಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಸೀಲ್ದಾರ ಶ್ರುತಿ ಮಳ್ಳಪ್ಪಗೌಡರ ವಹಿಸಿದ್ದರು. ಈ ವೇಳೆ ವಕೀಲರ ಸಂಘದ ಅಧ್ಯಕ್ಷರಾದ ಮಹಾಂತೇಶ, ಗ್ರೇಡ್ 2 ತಹಸೀಲ್ದಾರ ಮುರಳೀಧರ ಮುಕ್ತೇದಾರ ಸೇರಿದಂತೆ ಇತರರು ಇದ್ದರು.