ಚಿಕ್ಕಮಗಳೂರುಜಾಗತೀಕರಣದ ಯುಗದಲ್ಲಿ ಇತರ ಭಾಷೆಗಳನ್ನು ಕಲಿಯುವುದು ತಪ್ಪಲ್ಲ. ಬಹುಭಾಷಾ ಜ್ಞಾನ ನಮ್ಮ ಸಾಮರ್ಥ್ಯ ಹೆಚ್ಚಿಸುತ್ತದೆ. ಆದರೆ ಇತರ ಭಾಷೆಗಳನ್ನು ಕಲಿವ ನೆಪದಲ್ಲಿ ಮಾತೃಭಾಷೆ ಕನ್ನಡವನ್ನು ನಿರ್ಲಕ್ಷಿಸಬಾರದು. ಕನ್ನಡ ಭಾಷೆ ಉಳಿವು, ಬೆಳವಣಿಗೆ ಮತ್ತು ಭವಿಷ್ಯಕ್ಕೆ ಪ್ರತಿಯೊಬ್ಬರೂ ಹೊಸ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಹೇಳಿದರು.
- ಸಚಿವರ ಗೈರಲ್ಲಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಧ್ವಜಾರೋಹಣೆ। ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಜಾಗತೀಕರಣದ ಯುಗದಲ್ಲಿ ಇತರ ಭಾಷೆಗಳನ್ನು ಕಲಿಯುವುದು ತಪ್ಪಲ್ಲ. ಬಹುಭಾಷಾ ಜ್ಞಾನ ನಮ್ಮ ಸಾಮರ್ಥ್ಯ ಹೆಚ್ಚಿಸುತ್ತದೆ. ಆದರೆ ಇತರ ಭಾಷೆಗಳನ್ನು ಕಲಿವ ನೆಪದಲ್ಲಿ ಮಾತೃಭಾಷೆ ಕನ್ನಡವನ್ನು ನಿರ್ಲಕ್ಷಿಸಬಾರದು. ಕನ್ನಡ ಭಾಷೆ ಉಳಿವು, ಬೆಳವಣಿಗೆ ಮತ್ತು ಭವಿಷ್ಯಕ್ಕೆ ಪ್ರತಿಯೊಬ್ಬರೂ ಹೊಸ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಹೇಳಿದರು.ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋ ತ್ಸವ ಸಮಾರಂಭದಲ್ಲಿ ಮಾತನಾಡಿ ನ.1 ಕನ್ನಡಿಗರ ಹೋರಾಟ, ಕನ್ನಡ ನಾಡಿನ ಏಕೀಕರಣದ ಇತಿಹಾಸ ಸ್ಮರಿಸುವ ದಿನ. ಅದಕ್ಕಿಂತ ಮುಖ್ಯವಾಗಿ ಕನ್ನಡದ ಭವಿಷ್ಯಕ್ಕೆ ಹೊಸ ಸಂಕಲ್ಪದ ದಿನ ಎಂದರು.ಇಂದಿನ ಜಾಗತೀಕರಣದ ಯುಗದಲ್ಲಿ ಕನ್ನಡ ಭಾಷೆ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಶಿಕ್ಷಣ, ಉದ್ಯೋಗ, ತಂತ್ರ ಜ್ಞಾನ ಹಾಗೂ ಡಿಜಿಟಲ್ ಜಗತ್ತಿನಲ್ಲಿ ಇಂಗ್ಲಿಷ್ ಸೇರಿದಂತೆ ವಿವಿಧ ಭಾಷೆಗಳ ಬಳಕೆ ಹೆಚ್ಚಾಗಿದೆ. ಇತರ ಭಾಷೆಗಳನ್ನು ಕಲಿಕೆಯಿಂದ ನಮ್ಮ ಜ್ಞಾನ ಮತ್ತು ಸಾಮರ್ಥ್ಯ ವಿಸ್ತಾರವಾಗುತ್ತದೆ. ಆದರೆ ಈ ಪ್ರಕ್ರಿಯೆಯಲ್ಲಿ ನಮ್ಮ ಮಾತೃಭಾಷೆಗೆ ಆದ್ಯತೆ ಕಡಿಮೆಯಾಗದೆ ಕನ್ನಡಕ್ಕೆ ಗೌರವ ನೀಡುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಬೇಕು ಎಂದು ತಿಳಿಸಿದರು.ನಮ್ಮ ಮನೆ, ಶಾಲೆ, ಕಚೇರಿ ಹಾಗೂ ಸಾರ್ವಜನಿಕ ಜೀವನದಲ್ಲಿ ಕನ್ನಡಕ್ಕೆ ಗೌರವ ನೀಡಬೇಕು. ಕನ್ನಡ ಸರಿಯಾಗಿ ಓದಿ, ಬರೆದು ಮತ್ತು ಮಾತನಾಡಲು ಕಲಿಯಬೇಕು. ಕನ್ನಡದ ಇತಿಹಾಸ, ಸಾಹಿತ್ಯ, ಸಂಸ್ಕೃತಿ ಹಾಗೂ ಮಹನೀಯರ ಸಾಧನೆ ಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು. ನಮ್ಮ ಹೆಮ್ಮೆಯ ಕನ್ನಡ ಪ್ರೀತಿಸಿ ಬೆಳೆಸಬೇಕು. ಕನ್ನಡ ನಾಡಿನ ಗೌರವ ವನ್ನು ಎತ್ತಿಹಿಡಿದು, ಸಮೃದ್ಧ ಕನ್ನಡ ಭಾಷೆ, ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಸುಂದರ ಕರ್ನಾಟಕವನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವ ಸಂಕಲ್ಪ ಮಾಡಿ ಎಂದರು.ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆ ''''''''ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ'''''''' ಎಂಬ ಸಾಲುಗಳನ್ನು ಸ್ಮರಿಸಿ ಕನ್ನಡ ನಾಡಿನ ಏಕತೆ, ಸಮೃದ್ಧಿ ಮತ್ತು ಶಾಂತಿಗಾಗಿ ಹಾರೈಸಿದರು.ಜಿಲ್ಲೆಯ ಅಭಿವೃದ್ಧಿ ಸಾಧನೆಗಳ ಪ್ರಸ್ತಾಪ: ಜಿಲ್ಲೆಯ ಘನತ್ಯಾಜ್ಯ ವಿಲೇವಾರಿಗೆ ₹8.41 ಕೋಟಿ ವೆಚ್ಚದಲ್ಲಿ ಎಂ.ಆರ್.ಎಫ್. ಘಟಕಗಳನ್ನು ನಿರ್ಮಿಸಿ ಬಳಕೆಗಾಗಿ ಉದ್ಘಾಟಿಸಲಾಗಿದೆ. 2023ನೇ ಸಾಲಿನಲ್ಲಿ ಕ್ಷಯರೋಗ ಪ್ರಕರಣಗಳನ್ನು ಶೇ.20ರಷ್ಟು ಕಡಿಮೆ ಮಾಡುವಲ್ಲಿ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಭಾರತ ಸರ್ಕಾರದಿಂದ ಚಿಕ್ಕಮಗಳೂರು ಜಿಲ್ಲೆಗೆ ಕಂಚಿನ ಪದಕ (Bronze Medal) ಲಭಿಸಿದೆ ಎಂದು ತಿಳಿಸಿದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಯುವಜನರ ಸರ್ವಾಂಗೀಣ ಅಭಿವೃದ್ಧಿಗೆ ಭಾರತ್ ಜೋಡೋ ಯುವ ಸಂಘ ದಡಿ ಜಿಲ್ಲೆಯಲ್ಲಿ ಒಟ್ಟು 266 ಯುವ ಸಂಘಗಳನ್ನು ರಚಿಸಲಾಗಿದೆ. ಯುವಶಕ್ತಿಗೆ ಚೈತನ್ಯ ತುಂಬುವ ನಿಟ್ಟಿನಲ್ಲಿ ಈ ಕಾರ್ಯ ಪ್ರಗತಿಯಲ್ಲಿದೆ. ಚಿಕ್ಕಮಗಳೂರು ನಗರದಲ್ಲಿ ಅರಣ್ಯ ಇಲಾಖೆ ₹9.8 ಕೋಟಿ ವೆಚ್ಚದ ಅರಣ್ಯ ಸಂಕೀರ್ಣ ಲೋಕಾರ್ಪಣೆ ಮಾಡಲಾಗಿದೆ ಎಂದು ವಿವರಿಸಿದರು.ಶಾಸಕರು ಹಾಗೂ ಜಿಲ್ಲಾಧಿಕಾರಿ ಗ್ರಾಮನುಭವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಅಧ್ಯಕ್ಷತೆ ವಹಿಸಿದ್ದರು.
ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್.ಮಹೇಶ್, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎ.ವಿ.ಗಾಯತ್ರಿ ಶಾಂತೇಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಶಿವನಂದ ಸ್ವಾಮಿ, ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೀನಾಕ್ಷಿ ಆರ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದರ್ ಕುಮಾರ್ ದಯಾಮಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್,ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಪುರುರಾಜ್ ಸಿಂಗ್ ಸೋಲಂಕಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ ಉಪಸ್ಥಿತರಿದ್ದರು-- ಬಾಕ್ಸ್--ವಿವಿಧ ಸ್ತಬ್ಧಚಿತ್ರಗಳ ಮೆರವಣಿಗೆಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳು, ಶಾಲಾ-ಕಾಲೇಜುಗಳು ಹಾಗೂ ಸಂಘ-ಸಂಸ್ಥೆಗಳು ಸಿದ್ಧಪಡಿಸಿದ್ದ ಸ್ತಬ್ಧಚಿತ್ರಗಳು ವಿಶೇಷ ಆಕರ್ಷಣೆಯಾಗಿದ್ದವು.
ಚಿಕ್ಕಮಗಳೂರು ತಾಲೂಕು ಕಂದಾಯ ಇಲಾಖೆಯಿಂದ ಕನ್ನಡಾಂಬೆ ಹಾಗೂ ತಾಯಿ ಭುವನೇಶ್ವರಿ ಸ್ತಬ್ಧಚಿತ್ರ ಪ್ರದರ್ಶಿಸ ಲಾಯಿತು. ಶಾಲಾ ಶಿಕ್ಷಣ ಇಲಾಖೆಯಿಂದ ಮಹಿಳಾಶ್ರಮ ವಿದ್ಯಾಸಂಸ್ಥೆ, ಚಿಕ್ಕಮಗಳೂರು ಮೂಲಕ ಹೊಯ್ಸಳರ ಇತಿಹಾಸ ಬಿಂಬಿಸುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಪಾಲ್ಗೊಂಡಿತ್ತು. ಜಿಜೆಸಿ ಪ್ರಾಥಮಿಕ ಶಾಲೆ, ಬೇಲೂರು ರಸ್ತೆಯಿಂದ ಹೊಯ್ಸಳರ ಸ್ತಬ್ಧಚಿತ್ರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಿರೇಮಗಳೂರಿನಿಂದ ಸಂಗೊಳ್ಳಿ ರಾಯಣ್ಣ ಅವರ ಸ್ತಬ್ಧಚಿತ್ರ ಪ್ರದರ್ಶಿಸಲಾಯಿತು.ಪಿ.ಎಂ.ಶ್ರೀ. ಶಾಂತಿನಗರ ಶಾಲೆಯಿಂದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜೀವನಾಧಾರಿತ ಸ್ತಬ್ಧಚಿತ್ರ, ಸೇಂಟ್ ಜೋಸೆಫ್ ಕ್ಯಾಥಡ್ರಲ್ ನಿಂದ ಭುವನೇಶ್ವರಿ ಸ್ತಬ್ಧಚಿತ್ರ, ಎಂ.ಇ.ಎಸ್. ಪ್ರೌಢಶಾಲಾ ವಿಭಾಗ, ಕೆ.ಎಂ. ರಸ್ತೆಯಿಂದ ಒನಕೆ ಓಬವ್ವ ಸ್ತಬ್ಧಚಿತ್ರ ಹಾಗೂ ಸೇಂಟ್ ಜೋಸೆಫ್ ಕಾನ್ವೆಂಟ್ ನಿಂದ ವಚನ ಸಾಹಿತ್ಯಕ್ಕೆ ಸಂಬಂಧಿಸಿದ ಸ್ತಬ್ಧಚಿತ್ರ ಗಮನ ಸೆಳೆದವು.ಕೆಂಪನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ನಮ್ಮ ಹೆಮ್ಮೆಯ ಕರ್ನಾಟಕ ಎಂಬ ಪರಿಕಲ್ಪನೆ ಸ್ತಬ್ಧಚಿತ್ರ, ಸಮಿಟ್ಸ್ ಶಾಲೆಯಿಂದ ಭಕ್ತ ಕನಕದಾಸರ ಸ್ತಬ್ಧಚಿತ್ರ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಿಂದ ಮಾನವ-ವನ್ಯಜೀವಿ ಸಂಘರ್ಷ ತಡೆ ಕುರಿತು ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಪ್ರದರ್ಶಿಸಲಾಯಿತು.ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಇಲಾಖೆಯಿಂದ ಮಾದರಿ ರೈತ ಸಂಪರ್ಕ ಕೇಂದ್ರದ ಪರಿಕಲ್ಪನೆ ಸ್ತಬ್ಧಚಿತ್ರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಬರ ಪರಿಸ್ಥಿತಿಯಲ್ಲಿ ತೋಟಗಾರಿಕಾ ಬೆಳೆಗಳ ನಿರ್ವಹಣೆ ಕುರಿತು ಮಾಹಿತಿ ನೀಡುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿತ್ತು.ಉಪ ನಿರ್ದೇಶಕರ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ಇಲಾಖೆಯಲ್ಲಿ ದೊರೆಯುವ ವಿವಿಧ ಯೋಜನೆಗಳನ್ನು ಪರಿಚಯಿಸುವ ಸ್ತಬ್ಧಚಿತ್ರ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಇಲಾಖೆ ಅಭಿಯಂತರರ ಕಚೇರಿ ಯಿಂದ ಜಲಜೀವನ್ ಮಿಷನ್ ಕುರಿತು ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಪ್ರದರ್ಶಿಸಲಾಯಿತು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ 5 ಟ್ರ್ಯಾಕ್ಟರ್ಗಳೊಂದಿಗೆ ಅಂದಾಜು 200 ರೈತರು ಮೆರವಣಿಗೆ ಯಲ್ಲಿ ಭಾಗವಹಿಸಿದ್ದರು. ವಿವಿಧ ಇಲಾಖೆಗಳ ಯೋಜನೆಗಳು, ನಾಡಿನ ಇತಿಹಾಸ, ಸ್ವಾತಂತ್ರ್ಯ ಹೋರಾಟ ಗಾರರು, ಸಾಂಸ್ಕೃತಿಕ ಪರಂಪರೆ ಹಾಗೂ ಸಾಮಾಜಿಕ ಜಾಗೃತಿ ವಿಷಯಗಳ ಸ್ತಬ್ಧಚಿತ್ರಗಳು ಕನ್ನಡ ರಾಜ್ಯೋತ್ಸವದ ಮೆರವಣಿಗೆಗೆ ವಿಶೇಷ ಮೆರುಗು ನೀಡಿದವು.