ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಿ: ದೇಸಾಯಿ

| Published : Mar 30 2024, 12:51 AM IST

ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಿ: ದೇಸಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ಸಿಂಧನೂರಿನ ನಗರಸಭೆ ಆವರಣದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮವನ್ನು ತಹಸೀಲ್ದಾರ್ ಅರುಣ್ ದೇಸಾಯಿ ಉದ್ಘಾಟಿಸಿದರು

ಕನ್ನಡಪ್ರಭ ವಾರ್ತೆ ಸಿಂಧನೂರು

ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಮತ್ತು ನಾಗರಿಕ ಕರ್ತವ್ಯ ಪಾಲಿಸಬೇಕು ಎಂದು ತಹಸೀಲ್ದಾರ್ ಅರುಣ್ ದೇಸಾಯಿ ಕರೆ ನೀಡಿದರು.

ನಗರಸಭೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆ ಸಿಂಧನೂರು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು ಚುನಾವಣೆ ಪರ್ವ ದೇಶದ ಗರ್ವ ಎಂಬ ಧ್ಯೇಯವಾಕ್ಯದೊಂದಿಗೆ ಲೋಕಸಭಾ ಸಾರ್ವತ್ರಿಕ ಚುನಾವಣೆಗಳು ದೇಶದಲ್ಲಿ ಪ್ರಾರಂಭವಾಗಿವೆ. ಈ ಕುರಿತು ನಾಗರಿಕರು ಅತ್ಯಂತ ಜಾಗರೂಕತೆಯಿಂದ ಮತದಾನದ ಕುರಿತು ಲಕ್ಷ್ಯ ವಹಿಸಬೇಕು ಎಂದು ಸಲಹೆ ನೀಡಿದರು.

ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರ್ ಮಾತನಾಡಿ, ನಗರ ವ್ಯಾಪ್ತಿಯ ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನದ ಹಬ್ಬದಲ್ಲಿ ಪಾಲ್ಗೊಳ್ಳಬೇಕು ಹಾಗೂ ಶಕ್ತಿಶಾಲಿ ಪ್ರಜಾಪ್ರಭುತ್ವಕ್ಕಾಗಿ ತಪ್ಪದೆ ಮತದಾನ ಮಾಡಬೇಕು. ನಗರಸಭೆಯ ಪ್ರತಿಯೊಂದು ವಾರ್ಡ್‌ಗಳಲ್ಲಿ ಘನ ತ್ಯಾಜ್ಯ ವಸ್ತುಗಳ ವಿಲೇವಾರಿ ವಾಹನಗಳ ಮೂಲಕ ಮತದಾನ ಜಾಗೃತಿ ಸಂದೇಶ ಹರಡುತ್ತಿದ್ದು, ಸರ್ವ ನಾಗರಿಕರು ಸ್ವೀಪ್ ಸಭೆಯಲ್ಲಿ ಭಾಗವಹಿಸಿ ಚುನಾವಣಾ ಪ್ರಕ್ರಿಯೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಈ ವೇಳೆ ನಗರಸಭೆ ಸಿಬ್ಬಂದಿ ಅಬ್ದುಲ್, ದುರ್ಗಪ್ಪ, ಶಾಂತು, ಮನ್ಸೂರ್ ಇದ್ದರು.