ಸಾರಾಂಶ
ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಉತ್ಸಾಹಕತೆಯಿಂದ ಪಾಲ್ಗೊಳ್ಳಬೇಕು ಎಂದು ಹುಣಸೆಹಳ್ಳಿ ಗ್ರಾಪಂ ಅಧ್ಯಕ್ಷೆ ರೇಖಾ ತಿಪ್ಪೇಸ್ವಾಮಿ ಹೇಳಿದರು.
ಕನ್ನಡಪ್ರಭ ವಾರ್ತೆ ಶಿರಾಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಉತ್ಸಾಹಕತೆಯಿಂದ ಪಾಲ್ಗೊಳ್ಳಬೇಕು ಎಂದು ಹುಣಸೆಹಳ್ಳಿ ಗ್ರಾಪಂ ಅಧ್ಯಕ್ಷೆ ರೇಖಾ ತಿಪ್ಪೇಸ್ವಾಮಿ ಹೇಳಿದರು.ತಾಲೂಕಿನ ಡ್ಯಾಗೇರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಯರವರಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತನ್ನಲ್ಲಿರುವ ಪ್ರತಿಭೆಯಿಂದಲೇ ರಾಜ್ಯ ಮಟ್ಟದಲ್ಲಿ ಬೆಳಗುವಂತಾಗಲಿ ಎಂದರು.ಶಿಕ್ಷಣ ಸಂಪನ್ಮೂಲ ವ್ಯಕ್ತಿ ಪಿ.ಸಿದ್ದಣ್ಣ ಮಾತನಾಡಿ, ಶಾಲಾ ಮಕ್ಕಳ ಸುಪ್ತ ಪ್ರತಿಭೆಗೆ, ಪುರಸ್ಕಾರ ನೀಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿಗಳನ್ನು ಆಯೋಜಿಸುತ್ತಿದೆ. ಅಲ್ಲದೆ ಮಕ್ಕಳ ಕಲಿಕೆ ಜೊತೆಗೆ ಮನೋ ಉಲ್ಲಾಸವನ್ನು ಹೆಚ್ಚಿಸುತ್ತಿದೆ ಎಂದರು. ಮುಖ್ಯ ಶಿಕ್ಷಕ ಹನುಮಂತರಾಯಪ್ಪ ಮಾತನಾಡಿ ಪ್ರತಿಭಾ ಕಾರಂಜಿ ಮಕ್ಕಳ ಜ್ಞಾನವಿಕಾಸನಗೊಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು.
ಶಾಲಾ ಅಭಿವೃದ್ಧಿ ಸಮಿತಿ ಅಂಜಿನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಕರಿಯಣ್ಣ, ಸದಸ್ಯರಾದ ಡಿ.ಎಚ್. ಮಂಜುನಾಥ , ಭಾಗ್ಯ ಜಯಕುಮಾರ್, ಶಶಿಧರ್, ದಾನಿಗಳಾದ ರಂಗಮ್ಮ, ಯುವ ಮುಖಂಡ ಚಿರಂಜೀವಿ, ಸಿ ಆರ್ ಪಿ ಎಚ್. ಸಿ. ಮಂಜುನಾಥ್, ಪಿಡಿಒ ವಿಜಯ್ ಕುಮಾರ್ ಸೇರಿದಂತೆ ಹೊಸೂರು ಮತ್ತು ಹುಣಸೆಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು, ಹಲವಾರು ಶಾಲೆಗಳ ಶಿಕ್ಷಕರು, ಅತಿಥಿ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಡ್ಯಾಗೇರಹಳ್ಳಿ ಗ್ರಾಮಸ್ಥರು ಭಾಗವಹಿಸಿದ್ದರು.