ಪ್ರಜಾಪ್ರಭುತ್ವ ಬಲಿಷ್ಠಗೊಳಿಸಲು ಮತದಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಿ: ಡಾ. ಗೋಪಾಲಕೃಷ್ಣ

| Published : Apr 24 2024, 02:26 AM IST

ಪ್ರಜಾಪ್ರಭುತ್ವ ಬಲಿಷ್ಠಗೊಳಿಸಲು ಮತದಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಿ: ಡಾ. ಗೋಪಾಲಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಾದ ಬಾಬಾ ಬುಡನ್ ಗಿರಿ ಹಾಗೂ ಸೀತಾಳಯ್ಯನ ಗಿರಿಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಮಂಗಳವಾರ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

- ಬಾಬಾಬುಡನ್‌ ಗಿರಿ, ಸೀತಾಳಯ್ಯನಗಿರಿ ಪ್ರದೇಶದಲ್ಲಿ ಸ್ವಚ್ಚತೆ ಮೂಲಕ ಮತದಾನ ಜಾಗೃತಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಿಲ್ಲೆಯ ಪ್ರವಾಸಿ ತಾಣಗಳಾದ ಬಾಬಾ ಬುಡನ್ ಗಿರಿ ಹಾಗೂ ಸೀತಾಳಯ್ಯನ ಗಿರಿಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಮಂಗಳವಾರ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಅವರು, ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠಗೊಳಿಸಲು ಪ್ರತಿಯೊಬ್ಬರೂ ಮತದಾನದಲ್ಲಿ ಭಾಗವಹಿಸಬೇಕು. ಒಂದೊಂದು ಮತವೂ ಸದೃಢ ಭಾರತ ನಿರ್ಮಾಣಕ್ಕೆ ಸಂಜೀವಿನಿಯಾಗಿದೆ. ಮತದಾನ ನಮ್ಮ ಹಕ್ಕು ಯಾರು ಸಹ ಮತದಾನದಿಂದ ದೂರ ಉಳಿಯದೆ ಮತ ಚಲಾಯಿಸಬೇಕು ಎಂದರು.

ಪ್ರಜಾಪ್ರಭುತ್ವ ಹಬ್ಬವನ್ನು ಎಲ್ಲರೂ ಮತ ಚಲಾಯಿಸುವ ಮೂಲಕ ಆಚರಿಸಬೇಕು. ಪ್ರತಿ 5 ವರ್ಷಕ್ಕೊಮ್ಮೆ ಬರುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಕೇಂದ್ರಗಳಿಗೆ ತೆರಳಿ ಮತ ಚಲಾಯಿಸುವ ಮೂಲಕ ಯೋಗ್ಯ ವ್ಯಕ್ತಿಯನ್ನು ಆರಿಸಿ ಕೊಳ್ಳುವಂತೆ ಹೇಳಿದರು.

ಜಿಲ್ಲೆ ಪ್ರವಾಸಿಗರಿಗೆ ಪ್ರಸಿದ್ಧ ತಾಣವಾಗಿದ್ದು, ಇಲ್ಲಿನ ಗಿರಿ ಪ್ರದೇಶದ ಪ್ರಕೃತಿ ಸೌಂದರ್ಯ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಈ ಪ್ರವಾಸಿ ತಾಣದ ಸೌಂದರ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಜಿಲ್ಲಾಧಿಕಾರಿ ಗಿರಿ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಈಗಾಗಲೇ ಘೋಷಿಸಿದ್ದಾರೆ. ಇಲ್ಲಿಗೆ ಪ್ರವಾಸಕ್ಕಾಗಿ ಬರುವ ಪ್ರವಾಸಿಗರು ಪ್ಲಾಸ್ಟಿಕ್‌ನ್ನು ಬಳಸಿ ಎಲ್ಲೆಂದರಲ್ಲಿ ಬಿಸಾಡುವುದರಿಂದ ಪ್ರಕೃತಿ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಈ ಪ್ರದೇಶದಲ್ಲಿ ಪ್ಲಾಸ್ಟಿಕ್‌ನ್ನು ಬಳಸಬಾರದೆಂದು ಹೇಳಿದರು.ಸ್ವಚ್ಛತಾ ಕಾರ್ಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಹೋಂ ಸ್ಟೇ, ಜೀಪ್ ಅಸೋಷಿಯೇಷನ್ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ---- ಬಾಕ್ಸ್‌ ---ಮತದಾನ ಮಾಡಲು ಸಾರ್ವತ್ರಿಕ ರಜೆಚಿಕ್ಕಮಗಳೂರು: ಜಿಲ್ಲೆಯಲ್ಲಿ ಏ. 26 ರಂದು ಮತದಾನ ನಡೆಯಲಿದ್ದು, ಮತದಾನ ಮಾಡಲು ಅನುಕೂಲವಾಗುವಂತೆ ಅಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-----ಮಾದರಿ ನೀತಿ ಸಂಹಿತೆಚಿಕ್ಕಮಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಕೊನೆಯ 72 ಗಂಟೆ ಮತದಾರರ ಮೇಲೆ ಪ್ರಭಾವ ಬೀರಿಸುವಂತಹ ಎಲ್ಲಾ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಹೆಚ್ಚುವರಿ ತಂಡಗಳನ್ನು ರಚಿಸಲಾಗಿದೆ.

ಮತದಾರರಿಗೆ ಹಂಚಿಕೆ ಮಾಡಲು ಹೊರ ಜಿಲ್ಲೆಗಳಿಂದ ಆಗಮಿಸುವ ಹಣ, ಮದ್ಯ, ಉಚಿತ ಕಾಣಿಕೆಗಳು ವಗೈರೆಗಳನ್ನು ತಡೆಯಲು ಗಡಿ ನಾಕಾಗಳನ್ನು ಸಶಕ್ತಗೊಳಿಸಲಾಗಿದೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಕೊನೆಯ 48 ಗಂಟೆ 5 ಜನಕ್ಕಿಂತ ಹೆಚ್ಚಿನ ಜನ ಸೇರದಂತೆ ಸಿಆರ್.ಪಿಸಿ ಕಲಂ 144 ರಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಧ್ವನಿವರ್ಧಕಗಳ ಬಳಕೆಗೆ ನಿಷೇಧ ಇರುತ್ತದೆ. ಈ ಲೋಕಸಭಾ ಕ್ಷೇತ್ರದ ಮತದಾರರನ್ನು ಹೊರತು ಪಡಿಸಿ ಇತರೇ ಯಾವುದೇ ರಾಜಕೀಯ ಮುಖಂಡರು ಅಥವಾ ಸ್ಟಾರ್‌ ಕ್ಯಾಂಪೇನರ್ಸ್‌ಗಳು ಕ್ಷೇತ್ರದಲ್ಲಿ ಇರತಕ್ಕದಲ್ಲ ಎಂದು ಹೇಳಿದ್ದಾರೆ. 23 ಕೆಸಿಕೆಎಂ 7ಚಿಕ್ಕಮಗಳೂರಿನ ಗಿರಿ ಪ್ರದೇಶದಲ್ಲಿ ಸ್ವೀಪ್ ಸಮಿತಿಯಿಂದ ಮಂಗಳವಾರ ಮತದಾರರಲ್ಲಿ ಸ್ವಚ್ಛತೆ ಮೂಲಕ ಜಾಗೃತಿ ಮೂಡಿಸಲಾಯಿತು.