ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ ಎಲ್ಲರೂ ಕೈ ಜೋಡಿಸಿ ಬೇಕಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ ಎಲ್ಲರೂ ಕೈ ಜೋಡಿಸಿ ಬೇಕಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು.
ತಾಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಾನಿಗಳ ರೂಪದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದರು.ಗ್ರಾಮಸ್ಥ ಚಂದ್ರಶೇಖರ್ ಮಾತನಾಡಿ, ಸ್ವಾತಂತ್ರ್ಯಪೂರ್ವದಿಂದಲೂ ಹಾಡೋನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಣ ಸೇವೆ ಸಲ್ಲಿಸುತ್ತಾ ಬಂದಿದೆ. ಶಾಲೆಗೆ ತನ್ನದೇ ಆದ ಇತಿಹಾಸ ಮತ್ತು ಪರಂಪರೆ ಇದೆ. ಇಂತಹ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ. ಖಾಸಗಿ ಶಾಲೆಗಳತ್ತ ಪೋಷಕರ ಒಲವು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ, ಉತ್ತಮ ವಾತಾವರಣ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸಿ ಮಕ್ಕಳನ್ನು ಆಕರ್ಷಿಸಬೇಕಿದೆ ಎಂದರು.
ಮಕ್ಕಳಿಗೆ ಟ್ರ್ಯಾಕ್ ಶೂಟ್ ಹಾಗೂ ಶೂಗಳು, ಪರಿಕರಗಳನ್ನು ವಿತರಣೆ ಮಾಡಲಾಯಿತು. ವಕೀಲ ಪ್ರತಾಪ್, ಎಚ್.ಕೆ. ಕೆಂಪರಾಜು, ಲಕ್ಷ್ಮೀಕಾಂತ, ನಿವೃತ್ತ ಶಿಕ್ಷಕ ಚಂದ್ರಶೇಖರ್, ಸುಬ್ರಹ್ಮಣಿ, ನಾರಾಯಣಪ್ಪ, ವಿ ಕೃಷ್ಣಯ್ಯ, ತೂಬಗೆರೆ ವಿಎಸ್‌ಎಸ್‌ಎನ್ ಅಧ್ಯಕ್ಷ ತುರುವನಹಳ್ಳಿ ವಾಸುದೇವ್, ವಿಎಸ್ಎಸ್ಎನ್ ಮಾಜಿ ಅಧ್ಯಕ್ಷ ಎಂ.ಮುನೇಗೌಡ, ಗ್ರಾಪಂ ಮಾಜಿ ಸದಸ್ಯ ಕೃಷ್ಣಮೂರ್ತಿ ಭಾಗವಹಿಸಿದ್ದರು.4ಕೆಡಿಬಿಪಿ6-
ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕ್ರೀಡಾ, ಶೈಕ್ಷಣಿಕ ಪರಿಕರಗಳ ವಿತರಣೆ ನಡೆಯಿತು.