- ಸಕಲ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ನಿರ್ದೇಶನಕನ್ನಡಪ್ರಭ ವಾರ್ತೆ ಮಸ್ಕಿ

ತಾಲೂಕು ಆಡಳಿತದ ವತಿಯಿಂದ ಆ.15ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ಸಂಬಂಧ ತಹಸೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಹಸೀಲ್ದಾರ್ ಮಂಜುನಾಥ್ ಭೋಗಾವತಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ತಹಸೀಲ್ದಾರ್ ಮಂಜುನಾಥ್ ಭೋಗಾವತಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರೀಯ ಹಬ್ಬವಾಗಿದ್ದು, ಎಲ್ಲಾ ಸರ್ಕಾರಿ ಇಲಾಖೆಗಳು ಸಾರ್ವ ಜನಿಕರ ಸಹಕಾರ ಹಾಗೂ ಪರಸ್ಪರ ಸಮನ್ವಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಬೇಕು ಎಂದು ಸೂಚಿಸಿದರು. ತಾಲೂಕಿನ ಸರ್ಕಾರಿ ಕಚೇರಿಗಳಲ್ಲಿ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿಕೊಂಡು ಎಲ್ಲಾ ಇಲಾಖೆಯ ಅಧಿಕಾರಿಗಳು ಪ್ರತಿ ವರ್ಷದಂತೆ ಈ ವರ್ಷವೂ ಸಹ ಕೇಂದ್ರ ಶಾಲೆಯ ಆವರಣದಲ್ಲಿ ಬೆಳಿಗ್ಗೆ 9ಗಂಟೆಗೆ ನಡೆಯುವ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳು, ಶಾಲಾ ವಿದ್ಯಾರ್ಥಿಗಳ ಭಾಗವಹಿಸುವಿಕೆ, ಅಗತ್ಯ ಮೂಲಸೌಲಭ್ಯಗಳು ಹಾಗೂ ಕುಡಿಯುವ ನೀರು, ಸ್ವಚ್ಛತೆ, ಭದ್ರತೆ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಇಒ ಶಿವಾನಂದರಡ್ಡಿ, ಪುರಸಭೆ, ನೀರಾವರಿ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಪುರಸಭೆ ಹಾಗೂ ಇತರೆ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮದ ಸಿದ್ಧತೆ ಕುರಿತು ಚರ್ಚಿಸಿದರು. ಸಭೆಯಲ್ಲಿ ಊರಿನ ಪ್ರಮುಖರು ಹಾಗೂ ಸಂಘಟನೆಯ ಮುಖಂಡರು ಭಾಗವಹಿಸಿದ್ದರು.


---

07-ಎಂ ಎಸ್ ಕೆ -01: ಮಸ್ಕಿ ತಹಸಿಲ್ದಾರ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ ಜರುಗಿತು.