ಸಾರಾಂಶ
ಬಾಲ್ಯ ವಿವಾಹಗಳನ್ನು ತಡೆಗಟ್ಟಲು 2006ರಲ್ಲಿ ಬಾಲ್ಯ ವಿವಾಹ ಕಾಯ್ದೆ ಜಾರಿಗೆ ತರಲಾಗಿದೆ. ಕಾಯ್ದೆ ಸಮರ್ಪಕ ಜಾರಿಗೆ ರಾಜ್ಯಾದ್ಯಂತ 59 ಸಾವಿರ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಆದರೂ, ಬಾಲ್ಯವಿವಾಹ ಪಿಡುಗು ನಿರ್ಮೂಲನೆ ಸಾಧ್ಯವಾಗುತ್ತಿಲ್ಲ. ಇದು ನಮ್ಮಗಳ ದುರದೃಷ್ಟವೇ ಸರಿ. ಸಾಮಾಜಿಕ ಪಿಡುಗಾಗಿರುವ ಬಾಲ್ಯವಿವಾಹ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಮುಖ್ಯವಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯೆ ಅಪರ್ಣಾ ಎಂ. ಕೊಳ್ಳ ಹೇಳಿದರು.
ಕನ್ನಡಪ್ರಭ ವಾರ್ತೆ ಚನ್ನಗಿರಿ
ಬಾಲ್ಯ ವಿವಾಹಗಳನ್ನು ತಡೆಗಟ್ಟಲು 2006ರಲ್ಲಿ ಬಾಲ್ಯ ವಿವಾಹ ಕಾಯ್ದೆ ಜಾರಿಗೆ ತರಲಾಗಿದೆ. ಕಾಯ್ದೆ ಸಮರ್ಪಕ ಜಾರಿಗೆ ರಾಜ್ಯಾದ್ಯಂತ 59 ಸಾವಿರ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಆದರೂ, ಬಾಲ್ಯವಿವಾಹ ಪಿಡುಗು ನಿರ್ಮೂಲನೆ ಸಾಧ್ಯವಾಗುತ್ತಿಲ್ಲ. ಇದು ನಮ್ಮಗಳ ದುರದೃಷ್ಟವೇ ಸರಿ. ಸಾಮಾಜಿಕ ಪಿಡುಗಾಗಿರುವ ಬಾಲ್ಯವಿವಾಹ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಮುಖ್ಯವಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯೆ ಅಪರ್ಣಾ ಎಂ. ಕೊಳ್ಳ ಹೇಳಿದರು.ಪಟ್ಟಣದ ಶ್ರೀ ವಾಲ್ಮೀಕಿ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ತಾಲೂಕಿನ ವಿವಿಧ ಇಲಾಖೆಗಳ ಆಶ್ರಯದಲ್ಲಿ ತಾಲೂಕುಮಟ್ಟದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಜೆ.ಜೆ. ಕಾಯ್ದೆ-2015, ಬಾಲ್ಯವಿವಾಹ ನಿಷೇಧ ಕಾಯ್ದೆ 2006, ಪೋಕ್ಸೋ ಕಾಯ್ದೆ, ಆರ್‌ಟಿಐ ಕಾಯ್ದೆ, ಭ್ರೂಣಹತ್ಯೆ, ಕುಟುಂಬದಲ್ಲಿನ ಮಕ್ಕಳ ರಕ್ಷಣೆ, ಮಕ್ಕಳ ಸಾಗಾಣಿಕೆ ಮಾರಾಟ ನಿಷೇಧ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ ವಸತಿ ಕುರಿತಂತೆ ಅರಿವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ತಿಂಗಳಿನಿಂದ 11 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿವೆ. ಇನ್ನು ಮಾಹಿತಿ ಇಲ್ಲದೇ ಅದೆಷ್ಟು ಅಪ್ರಾಪ್ತರ ಮದುವೆಗಳು ನಡೆದಿರಬಹುದು? ದಾವಣಗೆರೆಯಲ್ಲಿ ಕಳೆದ 3 ತಿಂಗಳ ಅವಧಿಯಲ್ಲಿ 145 ಬಾಣಂತಿಯರು ಸಾವಿಗೀಡಾಗಿದ್ದಾರೆ. ಸರ್ಕಾರ ಗರ್ಭಿಣಿ, ಬಾಣಂತಿಯರ ಪೌಷ್ಠಿಕಾಂಶದ ವೃದ್ದಿಗೆ ಮತ್ತು ಅವರ ಲಾಲನೆ ಪಾಲನೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಿದ್ದರೂ ಬಾಣಂತಿಯರ ಸಾವು ಹೇಗೆ ಸಂಭವಿಸಿತು ಎಂಬ ಪ್ರಶ್ನೆ ಮೂಡುತ್ತಿದೆ ಎಂದರು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರ್.ನಿರ್ಮಲಾ, ದಾವಣಗೆರೆ ಚೈಲ್ಡ್ ರೈಟ್ಸ್ ಆಕ್ಟಿವಿಟಿಯ ಮಂಜಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಶಿವಕುಮಾರ್, ಶಿರಸ್ತೇದಾರ್ ಮೋಹನ್ ಮೊದಲಾದವರು ಹಾಜರಿದ್ದರು.