ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ಸೋಲಂಕಿ

| Published : Sep 18 2025, 01:10 AM IST

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ಸೋಲಂಕಿ
Share this Article
  • FB
  • TW
  • Linkdin
  • Email

ಸಾರಾಂಶ

ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಕಲ್ಯಾಣ ಕರ್ನಾಟಕ ಭಾಗ ಹಿಂದುಳಿದಿದೆ. ಈ ಭಾಗದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಐಎಎಸ್ ಪ್ರೋಬೇಷನರಿ ಅಧಿಕಾರಿ ಪುರುರಾಜಸಿಂಗ್ ಸೋಲಂಕಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಸ್ಕಿ

ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಕಲ್ಯಾಣ ಕರ್ನಾಟಕ ಭಾಗ ಹಿಂದುಳಿದಿದೆ. ಈ ಭಾಗದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಐಎಎಸ್ ಪ್ರೋಬೇಷನರಿ ಅಧಿಕಾರಿ ಪುರುರಾಜಸಿಂಗ್ ಸೋಲಂಕಿ ತಿಳಿಸಿದರು.

ಪಟ್ಟಣದ ಕೇಂದ್ರ ಶಾಲಾ ಆವರಣದಲ್ಲಿ ಬುಧವಾರ ನಡೆದ ಕಲ್ಯಾಣ ಕರ್ನಾಟಕೋತ್ಸವದ ನಿಮಿತ್ತ ತಾಲ್ಲೂಕು ಆಡಳಿತ ಹಾಗೂ ಪುರಸಭೆ ಏರ್ಪಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಕಡೆ ಹೆಚ್ಚು ಗಮನಕೊಡಬೇಕು, ಪಾಲಕರು ಮತ್ತು ಸಮಾಜ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಚಿಂತಿಸಬೇಕು ಎಂದು ಮನವಿ ಮಾಡಿದರು. ಅನೇಕರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರಕಿದ್ದು ಅದನ್ನು ನಾವು ಉಳಿಸಿಕೊಂಡಹೋಗುವ ಕೆಲಸ ಮಾಡಬೇಕು ಎಂದು ಹೇಳಿದರು.

ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗಕ್ಕೆ 370 (ಜೆ) ಕಲಂ ಜಾರಿಗೆ ಬರಲು ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಸಿಂಗ್ ಪ್ರಮುಖರು, ಇವತ್ತು ಅದರ ಫಲವೇ ಇಂದು ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು.

ತಹಶೀಲ್ದಾರ್ ಮಂಜುನಾಥ ಬೋಗವಾತಿ ಧ್ವಜಾರೋಹಣ ಮಾಡಿದರು. ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ. ತಾಪಂ ಇಒ ಅಮರೇಶ ಯಾದವ್, ಸಿಪಿಐ ಬಾಲಚಂದ್ರ ಡಿ.ಲಕ್ಕಂ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಪಂಪಾಪತಿ ಹೂಗಾರ, ಎಇಇಗಳಾದ ಗುರುಮೂರ್ತಿ, ದಾವುದ್, ಈಶಾನ್ಯ ಸಾರಿಗೆ ಸಂಸ್ಥೆಯ ಘಟಕದ ವ್ಯವಸ್ಥಾಪಕ ಆದಪ್ಪ. ಪಶು ವೈದ್ಯಾಧಿಕಾರಿ ರಾಚಪ್ಪ ಇತರರು ಇದ್ದರು.