ಸಾರಾಂಶ
ತಂದೆ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಬೇಕೆಂಬುದು ಎಲ್ಲರ ಆಶಯ ಇದೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ತಂದೆ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಬೇಕೆಂಬುದು ಎಲ್ಲರ ಆಶಯ ಇದೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎಂಟು ವರ್ಷಗಳಿಂದ ಸತೀಶ ಜಾರಕಿಹೊಳಿ ಅವರು ಸಿಎಂ ಆಗಬೇಕೆಂದು ಅವರ ಅಭಿಮಾನಿಗಳು ಅಭಿಯಾನ ನಡೆಸುತ್ತ ಬಂದಿದ್ದಾರೆ. ಸಮಯ, ಸಂದರ್ಭ ಬಂದಾಗ ನೋಡೋಣ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತಂದೆಯವರು ರೆಗ್ಯೂಲರ್ ಆಗಿ ಭೇಟಿಯಾಗುತ್ತಾರೆ. ಅವರ ಭೇಟಿ ಸಹಜ. ಅದನ್ನು ಬೇರೆಯಾಗಿ ಕಲ್ಪಿಸುವ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದರು.ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹಿಸುತ್ತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಡಿಸೆಂಬರ್‌ನಲ್ಲಿ ಈ ಸಂಬಂಧ ತನಿಖೆ ನಡೆಸಿ ವರದಿ ಕೊಡುತ್ತಾರೆ. ಬಳಿಕ ನಮ್ಮ ವರಿಷ್ಠರು ಈ ಸಂಬಂಧ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.