ಚಾಮರಾಜನಗರ: ಒತ್ತಡದ ಬದುಕಿನಲ್ಲಿ ಹಾಗೂ ದೈನಂದಿನ ಕೆಲಸ ಕಾರ್ಯಗಳ ನಡುವೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ಜಾಗರೂಕರಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ಹೇಳಿದರು
ಚಾಮರಾಜನಗರ: ಒತ್ತಡದ ಬದುಕಿನಲ್ಲಿ ಹಾಗೂ ದೈನಂದಿನ ಕೆಲಸ ಕಾರ್ಯಗಳ ನಡುವೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ಜಾಗರೂಕರಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎ.ಡಿ.ಆರ್ ಕಟ್ಟಡದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ, ಆಯುಷ್ ಇಲಾಖೆ ಸಹಯೋಗದಲ್ಲಿ ನಡೆದ ವಿಶೇಷ ಆಯುಷ್ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಲಭ್ಯವಿರುವ ಆರೋಗ್ಯ ಸೌಲಭ್ಯಗಳನ್ನು ಬಳಸಿಕೊಂಡು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ಅವರು ಮಾತನಾಡಿ, ಆಯುಷ್ ಪದ್ಧತಿಯ ಸದುಪಯೋಗ ಪಡೆದುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಪುಟ್ಟಸ್ವಾಮಿ ರಾಮಸಮುದ್ರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ನಾವು ಬಳಸುತ್ತಿರುವ ಆಹಾರ ಪದಾರ್ಥಗಳು ಕಲುಷಿತಗೊಂಡಿದ್ದು, ಆರೋಗ್ಯ ಕಾಪಾಡಿಕೊಳ್ಳಲು ಆಯುಷ್ ಪದ್ಧತಿಯ ಅಗತ್ಯತೆ ಬಗ್ಗೆ ತಿಳಿಸಿದರು.ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಪಿ. ಸತೀಶ್ ಕುಮಾರ್ ಅವರು, ಆಯುಷ್ ಇಲಾಖೆಯ ವಿವಿಧ ಕಾರ್ಯಕ್ರಮಗಳು ಹಾಗೂ ಲಭ್ಯವಿರುವ ಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ. ರಂಜಿತಾ, ಡಾ. ಚೈತ್ರ, ಡಾ. ಕನ್ನಿಕಾ ಅವರು ಆಯುಷ್ ಪದ್ಧತಿಯ ಬಗ್ಗೆ ವಿವರಿಸಿದರು. ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ ಪದ್ಧತಿಗಳ ವೈದ್ಯಾಧಿಕಾರಿಗಳು ಹಾಜರಿದ್ದು ಶಿಬಿರಾರ್ಥಿಗಳ ವೈದ್ಯಕೀಯ ತಪಾಸಣೆ ನಡೆಸಿ ಔಷಧ ವಿತರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಜೆ. ಕೃಷ್ಣ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡನಾಧಿಕಾರಿಗಳಾದ ಸಿ.ಡಿ ಪ್ರಕಾಶ್, ಜೆ.ಎಂ.ಎಫ್.ಸಿ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್. ಸುನೀಲ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸ್ಮಿತಾ ನಾಗಲಾಪುರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಶಿವರಾಮು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಜಿ.ಪಿ. ಸುರೇಶ್, ಇತರರು ಉಪಸ್ಥಿತರಿದ್ದರು.
--------------9ಸಿಎಚ್‌ಎನ್53
ಚಾಮರಾಜನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎ.ಡಿ.ಆರ್ ಕಟ್ಟಡದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ, ಆಯುಷ್ ಇಲಾಖೆ ಸಹಯೋಗದಲ್ಲಿ ನಡೆದ ವಿಶೇಷ ಆಯುಷ್ ಆರೋಗ್ಯ ಶಿಬಿರವನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ಉದ್ಘಾಟಿಸಿ ಮಾತನಾಡಿದರು.-----------