ಯೋಜನೆಗಳ ಉಪಯೋಗ ಎಲ್ಲರೂ ಪಡೆಯಬೇಕು: ಪರಮೇಶ್

| Published : Feb 16 2024, 01:45 AM IST

ಸಾರಾಂಶ

ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಎಂಟು ಸಾಮಾಜಿಕ ಭದ್ರತಾ ಯೋಜನೆಗಳ ಜತೆ ಅನುಷ್ಠಾನ ಗೊಳಿಸಲಾಗುತ್ತಿರುವ ಯೋಜನೆ ಉಪಯೋಗ ಎಲ್ಲರೂ ಪಡೆಯಬೇಕೆಂದು ಪುರಸಭೆ ಅಧ್ಯಕ್ಷ ಪರಮೇಶ್ ಹೇಳಿದರು.

- ಪಿಎಂ ಸ್ವ-ನಿಧಿ ಯೋಜನೆ, ಸ್ವ-ನಿಧಿ ಸೇ ಸಮೃದ್ಧಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ತರೀಕೆರೆ

ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಎಂಟು ಸಾಮಾಜಿಕ ಭದ್ರತಾ ಯೋಜನೆಗಳ ಜತೆ ಅನುಷ್ಠಾನ ಗೊಳಿಸಲಾಗುತ್ತಿರುವ ಯೋಜನೆ ಉಪಯೋಗ ಎಲ್ಲರೂ ಪಡೆಯಬೇಕೆಂದು ಪುರಸಭೆ ಅಧ್ಯಕ್ಷ ಪರಮೇಶ್ ಹೇಳಿದರು.

ಗುರುವಾರ ಪಟ್ಟಣದ ಕನಕ ಕಲಾ ಭವನದಲ್ಲಿ ಪುರಸಭಾ ಕಾರ್ಯಾಲಯ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ, ಚಿಕ್ಕಮಗಳೂರು, ಪುರಸಭೆ ತರೀಕೆರೆ, ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಪಿಎಂ ಸ್ವ-ನಿಧಿ ಯೋಜನೆ, ಸ್ವ-ನಿಧಿ ಸೇ ಸಮೃದ್ಧಿ ಕಾರ್ಯಕ್ರಮದಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಅರಿವು ಮೂಡಿಸುವ ಮತ್ತು ಜಾಥದಲ್ಲಿ ಮಾತನಾಡಿದರು.

ಬೀದಿ ಬದಿ ವ್ಯಾಪಾರಿಗಳಿಗೆ ಹಲವು ಹಂತಗಳಲ್ಲಿ ಸಾಲ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲತೆ ಹೊಂದಿ ಸದೃಢರಾಗಬೇಕು ಎಂದು ತಿಳಿಸಿದರು.

ಪುರಸಭೆ ಸದಸ್ಯ ಟಿ.ದಾದಾಪೀರ್ ಮಾತನಾಡಿ ಕೇಂದ್ರ ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಸಾಮಾಜಿಕ ಭದ್ರತಾ ಯೋಜನೆ ಹಮ್ಮಿಕೊಳ್ಳಲಾಗಿದೆ, ಇದರ ಸದುಪಯೋಗವನ್ನು ಎಲ್ಲಾ ಬೀದಿ ಬದಿ ವ್ಯಾಪಾರಿಗಳು ಪಡೆದು ಸಾಮಾಜಿಕ ಹಾಗೂ ಅರ್ಥಿಕವಾಗಿ ಅಭಿವೃದ್ದಿ ಹೊಂದಬೇಕು ಎಂದು ತಿಳಿಸಿದರು.

ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಮಾತನಾಡಿ ಬೀದಿ ಬದಿ ವ್ಯಾಪಾರಸ್ಥರು ಸರ್ಕಾರದ ಆತ್ಮ ನಿರ್ಭರ್ ನಿಧಿ ಮತ್ತು ಸ್ವ-ನಿಧಿ ಸೆ ಸಮೃದ್ಧಿ ಯೋಜನೆ ಸೌಲಭ್ಯ ಪಡೆದು ಆರ್ಥಿಕ ಅಭಿವೃದ್ಧಿ ಹೊಂದಬೇಕು ಯಾರು ಸಹ ನಿರುದ್ಯೋಗಿ ಗಳಾಗಬಾರದು. ಪ್ರಧಾನ ಮಂತ್ರಿಗಳ 5 ಯೋಜನೆಗಳ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳಬೇಕು. ದಿನಾಂಕ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸರ್ಕಾರ ರಾಜ್ಯ ಮಟ್ಟದ ಉದ್ಯೋಗ ಮೇಳೆ ಏರ್ಪಡಿಸಿದ್ದು ಎಲ್ಲರೂ ಸಹ ಭಾಗವಹಿಸಬೇಕು ಎಂದು ಹೇಳಿದರು.

ಪುರಸಭಾ ಮುಖ್ಯಾಧಿಕಾರಿ ಎಚ್. ಪ್ರಶಾಂತ್ ಮಾತನಾಡಿ ಪ್ರಧಾನ ಮಂತ್ರಿಗಳ 5 ಯೋಜನೆಗಳಾದ ಪಿಎಂ ಸ್ವ-ನಿಧಿ ಯೋಜನೆ, ಡಿಜಿಟಲ್ ಇನ್ ಆಕ್ಟಿವ್ ಯೋಜನೆ, ಸ್ವ-ನಿಧಿ ಸೇ ಸಮೃದ್ಧಿ ಯೋಜನೆ, ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಕೊಡುವ ಯೋಜನೆ ಹಾಗೂ ವಿಮಾ ಯೋಜನೆ ಮತ್ತು ಕಿರುಸಾಲ ಯೋಜನೆಯಡಿ 10000 ಸಾಲ ಹಾಗೂ ಸ್ವ-ನಿಧಿ ಯೋಜನೆಯಡಿ 20000 ಮತ್ತು 50000 ರು. ಗಳ ವರೆಗೆ ಸಾಲ ಸೌಲಭ್ಯ ವಿತರಿಸುತ್ತಿರುವುದರಿಂದ ಬೀದಿ ಬದಿ ವ್ಯಾಪಾರಿಗಳು ಈ ಯೋಜನೆ ಸದುಪಯೋಗ ಪಡೆಯುವಂತೆ ಹೇಳಿದರು.

ಜಿಲ್ಲಾ ವ್ಯವಸ್ಥಾಪಕ ಹರ್ಷ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯದ ಕುರಿತು ಸುಧೀರ್ಘ ಅರಿವು ಮೂಡಿಸಿದರು. ಸಮುದಾಯ ಸಂಘಟಕ ಪ್ರಸನ್ನ ಕುಮಾರ್ ಮಾತನಾಡಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಸಿ ಸೌಲಭ್ಯ ಪಡೆಯಬೇಕು ಎಂದು ಹೇಳಿದರು.

ಪ್ರಮುಖ ರಸ್ತೆಯಲ್ಲಿ ಕಾಲ್ನಡಿಗೆ ಜಾಥ ಮಾಡಲಾಯಿತು. ಬೀದಿ ಬದಿ ವ್ಯಾಪಾರಸ್ಥರು ಸಂಘದ ಅಧ್ಯಕ್ಷ ಪಿ.ನಾರಾಯಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.15ಕೆಟಿಆರ್.ಕೆ.3ಃ

ತರೀಕೆರೆ ಪುರಸಭಾ ಕಾರ್ಯಾಲಯದಿಂದ ಏರ್ಪಡಿಸಿದ್ದ ಪಿ.ಎಂ. ಸ್ವ-ನಿಧಿ ಯೋಜನೆ, ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಅರಿವು ಮೂಡಿಸುವ ಮತ್ತು ಜಾಥದಲ್ಲಿ ಪುರಸಭೆ ಅಧ್ಯಕ್ಷ ಪರಮೇಶ್, ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಪಿ.ನಾರಾಯಣ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ , ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಭಾಗವಹಿಸಿದ್ದರು.