ಸಾರಾಂಶ
ಶಿಕ್ಷಣ ತಜ್ಞ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಅಂಗವಾಗಿ ಆಚರಿಸುವ ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನ ಕೋಡಿಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ, ಪ್ರಸ್ತುತ ಚಾಮರಾಜನಗರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಶಿಕ್ಷಕಿ ನಿರ್ಮಲಾ ಅವರನ್ನು ಕೋಡಿಮೋಳೆ ಗ್ರಾಮದ ಹಳೇ ವಿದ್ಯಾರ್ಥಿಗಳಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಶಿಕ್ಷಣ ತಜ್ಞ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಅಂಗವಾಗಿ ಆಚರಿಸುವ ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನ ಕೋಡಿಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ, ಪ್ರಸ್ತುತ ಚಾಮರಾಜನಗರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಶಿಕ್ಷಕಿ ನಿರ್ಮಲಾ ಅವರನ್ನು ಕೋಡಿಮೋಳೆ ಗ್ರಾಮದ ಹಳೇ ವಿದ್ಯಾರ್ಥಿಗಳಿಂದ ಅಭಿನಂದಿಸಿ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿದ ಶಿಕ್ಷಕಿ ನಿರ್ಮಲ ಮಾತನಾಡಿ, ಕೋಡಿಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೂವರೆ ವರ್ಷಗಳ ಕಾಲ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಇದಕ್ಕೆ ತಾನು ಎಷ್ಟು ಅರ್ಹಳು ಎಂಬುದು ಗೊತ್ತಿಲ್ಲ. ಆದರೂ ತಮಗೆ ಅಕ್ಷರಕಲಿಸಿದ ಶಿಕ್ಷಕರನ್ನು ನೆನಪು ಮಾಡಿಕೊಂಡು, ತಮ್ಮನ್ನು ಸನ್ಮಾನಿಸಲು ಶಾಲೆಗೆ ಆಗಮಿಸಿರುವ ಇವರ ಶಿಕ್ಷಣ ಪ್ರೇಮ ಪ್ರಶಂಸಾರ್ಹ, ಇಂದಿನ ಶಾಲಾ ವಿದ್ಯಾರ್ಥಿಗಳು ಶಿಕ್ಷಕರ ಜತೆ ಗುರು ಹಿರಿಯರಿಗೆ ಗೌರವ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು, ನಿಮಗೆ ವಿದ್ಯೆ ಕಲಿಸಿದ ಶಿಕ್ಷಕರನ್ನು ಸದಾನೆನಪಿನಲ್ಲಿಟ್ಟುಕೊಳ್ಳಬೇಕು, ಅದೇ ನೀವು ಅವರಿಗೆ ಸಲ್ಲಿಸುವ ಗೌರವ ಎಂದರು.ಇದೇ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿ, ಭಗತ್‌ಸಿಂಗ್ ಯುವಸೇನೆ ಅಧ್ಯಕ್ಷ ಕಾಂತರಾಜ್ ಹಿರಿಯಶಿಕ್ಷಕಿ ನಿರ್ಮಲಾ ಅವರಿಗೆ ಫಲತಾಂಬೂಲ, ಫಲಕ ನೀಡಿ, ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆ ಶೀಲಾರಾಣಿ, ಶಿಕ್ಷಕರಾದ ಉಮಾಮಹೇಶ್ವರಿ, ಭಗತ್‌ಸಿಂಗ್ ಯುವಸೇನೆ ಸದಸ್ಯ ಮಹೇಶ್ ವಿದ್ಯಾರ್ಥಿನಿಯರು ಹಾಜರಿದ್ದರು.