ಪ್ರತಿಯೊಬ್ಬರು ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು: ಪ್ರವೇಜ್‌ ಪಟೇಲ

| Published : Jan 07 2024, 01:30 AM IST

ಪ್ರತಿಯೊಬ್ಬರು ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು: ಪ್ರವೇಜ್‌ ಪಟೇಲ
Share this Article
  • FB
  • TW
  • Linkdin
  • Email

ಸಾರಾಂಶ

ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಸಿಆರ್‌ಪಿ ಪ್ರವೇಜ್ ಪಟೇಲ ಅವರು, ಸೋಲು ಗೆಲುವಿನ ಸೋಪಾನ ಎಂಬ ಭಾವನೆಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಇಂಡಿ

ಕ್ರೀಡಾಕ್ಷೇತ್ರಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲು ಗೆಲುವಿನ ಸೋಪಾನ ಎಂಬ ಭಾವನೆಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಿಆರ್‌ಪಿ ಪ್ರವೇಜ್ ಪಟೇಲ ಹೇಳಿದರು.

ಶನಿವಾರ ಪಟ್ಟಣದ ಮಾಡಲ್ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ. ಕ್ರೀಡೆಯ ಮುಂದಿನ ಹಂತದ ಸ್ಪರ್ಧಾತ್ಮಕತೆಗೆ ತಯಾರಿ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಮೌಲಾನಾ ಜೀಯಾವುಲಹಕ್ಕ ಉಮರಿ ಮಾತನಾಡಿ, ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಕ್ರೀಡೆಯಲ್ಲಿ ಗೆಲ್ಲಲು ಉತ್ತಮ ತರಬೇತಿ ಅಗತ್ಯ. ಪರಿಣಿತಿ ಗಳಿಸಲು ಸತತ ಸಾಧನೆ ಮಾಡಬೇಕು ಎಂದರು.

ಪ್ರಥಮ ದರ್ಜೆ ಗುತ್ತೆಗೆದಾರ ಅತೀಕ ಮೋಮಿನ, ಹಸನ ಮುಜಾವರ ಮಾತನಾಡಿ, ವೈಯಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವ ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ ಎಂದರು.

ಮೌಲಾನಾ ಶಾಕೀರ್‌ ಕಾಸ್ಮಿ, ಸಂಸ್ಥೆಯ ಕಾರ್ಯದರ್ಶಿ ರಫೀಕ್‌ ಮುಲ್ಲಾ, ಅನ್ವರ್‌ ಇನಾಮದಾರ, ದೈಹಿಕ ಶಿಕ್ಷಕ ನಬಿರಸೂಲ್‌ ಬಾಗವಾನ, ಸಲಾಹುದ್ದಿನ್‌ ನಾಗೂರ, ಮಜೀಬ್‌ ಅಪ್ಜಲಪೂರ, ಮುನ್ನಾ ಇಂಡಿಕರ ಇತರರು ಇದ್ದರು.