ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ಪ್ರತಿಯೊಬ್ಬರಿಗೂ ಲಭ್ಯವಾಗಬೇಕು ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು.ತಾಲೂಕಿನ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ‘ಒಂದು ಜಗತ್ತು ಒಂದು ಕುಟುಂಬ ಜಾಗತಿಕ ಸಾಂಸ್ಕೃತಿಕ ಉತ್ಸವ’ದ 54ನೇ ದಿನದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಆರೋಗ್ಯ ಸೇವೆಯು ಎಲ್ಲರಿಗೂ ನ್ಯಾಯಯುತವಾಗಿ ಸಿಗಬೇಕು. ಇದು ವ್ಯವಹಾರವಾಗಬಾರದು. ಹಣ ಪಾವತಿಸುವ ಶಕ್ತಿ ಇಲ್ಲ ಎನ್ನುವ ಕಾರಣಕ್ಕೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ಸಾಕಷ್ಟು ಮಂದಿಗೆ ಈ ಸೇವೆ ಸಿಗುತ್ತಿಲ್ಲ. ಇದಕ್ಕಾಗಿ ಉಚಿತ ಆರೋಗ್ಯ ಸೇವೆ ನೀಡುವ ಬೃಹತ್ ಆಸ್ಪತ್ರೆ ನಿರ್ಮಿಸುತ್ತಿದ್ದೇವೆ ಎಂದು ಹೇಳಿದರು.
ಕೌಶಲ ತರಬೇತಿಗೆ ಒತ್ತುಕೌಶಲ್ಯ ತರಬೇತಿ ಮತ್ತು ಅಭಿವೃದ್ಧಿ ವಿಭಾಗವನ್ನು ಬಹಳ ಮೊದಲೇ ಸ್ಥಾಪಿಸಿದ್ದೇವೆ. ಏಕೆಂದರೆ ಮಕ್ಕಳು ವಿಭಿನ್ನ ಹಿನ್ನೆಲೆಯಿಂದ ಬಂದಿದ್ದಾರೆ ಎಂಬುದು ನಮಗೆ ತಿಳಿದಿತ್ತು. ಅವರು ನಿರ್ವಹಣೆ ಅಥವಾ ವೃತ್ತಿಪರ ಕೌಶಲ್ಯಗಳಿಗೆ ಒಡ್ಡಿಕೊಳ್ಳುವುದಿಲ್ಲ. ಹೆಚ್ಚಿನವರು ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದು, ಗುಣಮಟ್ಟದ ಮಾನದಂಡಗಳು ಅರ್ಥವಾಗುವುದಿಲ್ಲ. ಇದೇ ಕಾರಣಕ್ಕಾಗಿ ಮಕ್ಕಳಿಗೆ ಅರ್ಥವಾಗುವಂತಹ, ಕಲಿಯಲು ಆಸಕ್ತಿ ಇರುವ ಕೋರ್ಸ್‌ಗಳನ್ನೇ ಆರಂಭಿಸಿದ್ದೇವೆ ಎಂದರು.
ರೆಂಕ್ ಗೇರ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಂಪನಿಯ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಮುಖ್ಯಸ್ಥರಾದ ನಾಗರತ್ನ ಬಿವಿ ಪ್ರಶಸ್ತಿ ಸ್ವೀಕರಿಸಿದರು. ಬಾಂಗ್ಲಾದೇಶದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಫ್ರಾನ್ಸ್‌ನ ಯಸ್ ಮಾರ್ರೆ ಅವರಿಗೆ ಜಾಗತಿಕ ಮಾನವೀಯ ಪುರಸ್ಕಾರ ನೀಡಿ ಗೌರವಿಸಲಾಯಿತು.